nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026
    Facebook Twitter Instagram
    ಟ್ರೆಂಡಿಂಗ್
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
    ತುಮಕೂರು August 4, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    By Ganesh TumkuruAugust 4, 2026No Comments2 Mins Read

    ತುಮಕೂರು: ರಾಜ್ಯದಲ್ಲಿ ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿಯ ಹೋರಾಟದ ಫಲವಾಗಿ ಬಡ್ತಿ ಮೀಸಲಾತಿ ಜಾರಿಯಲ್ಲಿದೆ. ಹಾಗೆಯೇ ಸಂವಿಧಾನದ ಅಡಿಯಲ್ಲಿ ಅವಕಾಶಗಳನ್ನು ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಎಸ್ಸಿ, ಎಸ್ಟಿ ನೌಕರರು ತಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಗ್ಗೂಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ 2026ರ ಆಗಸ್ಟ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶದಲ್ಲಿ ಎಲ್ಲಾ ನೌಕರರು ಪಾಲ್ಗೊಳ್ಳುವಂತೆ ಸಮಿತಿ ಅಧ್ಯಕ್ಷ ಡಿ. ಶಿವಶಂಕರ್ ಮನವಿ ಮಾಡಿದ್ದಾರೆ.

    ನಗರದ ಖಾಸಗಿ ಹೋಟೆಲ್‌ ನಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿಯ ವತಿಯಿಂದ ಹಮ್ಮಿಕೊಂಡಿರುವ 6ನೇ ಐಕ್ಯತಾ ಸಮಾವೇಶದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಇಡೀ ದೇಶದಲ್ಲಿ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ನಡೆಸಿದ ಹೋರಾಟ ಐತಿಹಾಸಿಕ. ಅದರ ಫಲವಾಗಿ ಇಡೀ ದೇಶದಲ್ಲಿ ಎಲ್ಲಿಯೂ ಇಲ್ಲದ ಬಡ್ತಿ ಮೀಸಲಾತಿ ಕರ್ನಾಟಕದಲ್ಲಿದೆ. ಇದು ಸಮನ್ವಯ ಸಮಿತಿಯ ಮೈಲಿಗಲ್ಲು ಎಂದರು.

    ಸಂವಿಧಾನ ಬಂದು 78 ವರ್ಷ ಕಳೆದರೂ ಇಂದಿಗೂ ಈ ವರ್ಗದ ನೌಕರರು ಒಳ್ಳೆಯ ಬಟ್ಟೆ ತೊಟ್ಟರೆ, ಕಾರಿನಲ್ಲಿ ಓಡಾಡಿದರೆ ಸಹಿಸಲಾರದ ಮನಸ್ಸುಗಳಿವೆ. ಅವುಗಳನ್ನು ಮೆಟ್ಟಿ ನಿಲ್ಲುವ ಸಲುವಾಗಿ ನಾವು ಮತ್ತಷ್ಟು ಒಗ್ಗೂಡುವ ಅಗತ್ಯವಿದೆ. ನಮ್ಮ ಗೋರಿಯ ಮೇಲೆ ಬೇರೆಯವರು ಬಂದು ಮನೆ ಕಟ್ಟುವ ಮೊದಲು, ನಮ್ಮ ಗೋರಿಯ ಮೇಲೆ ನಾವೇ ಮನೆಕಟ್ಟುವಂತಹ ಸ್ವಾಭಿಮಾನವನ್ನು ನಾವು ಬೆಳೆಸಿಕೊಳ್ಳಬೇಕಾಗಿದೆ.

    — ಡಿ. ಶಿವಶಂಕರ್, ಸಮಿತಿ ಅಧ್ಯಕ್ಷ

    ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ವಿಜಯಕುಮಾರ್ ಎಸ್., ಮಾತನಾಡಿ, ಆಗಸ್ಟ್ 28ರಂದು ನಡೆಯುವ ಸಮಾವೇಶವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದು, ಕಂದಾಯ ಮಂತ್ರಿ ಡಾ. ಜಿ. ಪರಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಸಂಪುಟದ ಎಲ್ಲಾ ಸಚಿವರು, ಶಾಸಕರುಗಳು ಭಾಗವಹಿಸಲಿದ್ದಾರೆ.

    ಸಮಾವೇಶದ ಅಂಗವಾಗಿ ಸ್ಮರಣ ಸಂಚಿಕೆಯನ್ನು ಸಹ ಹೊರ ತರಲಾಗುತ್ತಿದೆ. ಎಲ್ಲಾ ಪರಿಶಿಷ್ಟ ಜಾತಿ ಮತ್ತು ವರ್ಗಗಳ ನೌಕರರು ಐಕ್ಯತಾ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ರಾಜ್ಯ ಕೋಶಾಧ್ಯಕ್ಷರಾದ ಸತ್ಯನಾರಾಯಣ ಎಂ.ಎಲ್, ಉಪಾಧ್ಯಕ್ಷರಾದ ಆರ್. ಮೋಹನ್, ಕೆಂಪಸಿದ್ಧಯ್ಯ, ತುಮಕೂರು ಜಿಲ್ಲಾಧ್ಯಕ್ಷರಾದ ನರಸಿಂಹಮೂರ್ತಿ, ಪ್ರಧಾನ ಕಾರ್ಯದರ್ಶಿ ನಾಗರಾಜು, ಉಪಾಧ್ಯಕ್ಷ ಹನುಮಂತರಾಜು, ಕೋಟಿ ಕಲ್ಲಯ್ಯ, ಮಂಜುನಾಥ್ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ

    September 21, 2026

    Leave A Reply Cancel Reply

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಔರಾದ್‌/ಬೀದರ್ : ಗ್ರಾಮೀಣ ಪ್ರದೇಶಗಳಲ್ಲಿ ವಿಬಿ–ಜಿ ರಾಮ್‌ ಜಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎನ್‌ ಎಂಎಂಎಸ್‌ (NMMS)…

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.