ಮಂಡ್ಯ / ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗು ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು, ಜಲಾಶಯದ ನೀರಿನ ಮಟ್ಟ 105 ಅಡಿಗೆ ಏರಿಕೆಯಾಗಿದೆ. ಇದರಿಂದಾಗಿ ಸಕ್ಕರೆ ನಾಡು ಮಂಡ್ಯದ ರೈತರಲ್ಲಿ ಕೃಷಿ ಚಟುವಟಿಕೆಗಳ ಬಗ್ಗೆ ಹೊಸ ನಿರೀಕ್ಷೆ ಮೂಡಿದೆ.
ಜಲಾಶಯಕ್ಕೆ ನಿರಂತರ ಒಳಹರಿವು ಹೆಚ್ಚಿರುವುದರಿಂದ ಮುಂಗಾರು ಹಂಗಾಮಿನ ಬೆಳೆಗಳಿಗೆ ಅನುಕೂಲವಾಗುವಂತೆ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕೆಂದು ಮಂಡ್ಯ ಜಿಲ್ಲೆಯ ರೈತರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಬಿತ್ತನೆಗೆ ಇದು ಸೂಕ್ತ ಸಮಯವಾಗಿದ್ದು, ನೀರು ಹರಿಸುವ ಬಗ್ಗೆ ಸರ್ಕಾರ ಶೀಘ್ರವೇ ಅಧಿಕೃತ ಘೋಷಣೆ ಮಾಡಬೇಕು. ವಿಳಂಬವಾದರೆ ಬೆಳೆ ನಷ್ಟವಾಗುವ ಆತಂಕ ರೈತರನ್ನು ಕಾಡುತ್ತಿದೆ.
ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದಾಗ, ಕುಡಿಯುವ ನೀರಿಗೆ ಆದ್ಯತೆ ನೀಡಬೇಕಿದ್ದ ಕಾರಣ ಯಾವುದೇ ಹೊಸ ಬೆಳೆ ಬಿತ್ತನೆ ಮಾಡಬೇಡಿ ಎಂದು ಸರ್ಕಾರ ಸೂಚನೆ ನೀಡಿತ್ತು.
ಆದರೆ ಈಗ ಕೊಡಗು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ KRS ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಾಗಿದ್ದು, ರೈತರಲ್ಲಿ ಸಂತಸ ತಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
