ಹೊಳೆನರಸೀಪುರ: ನೂತನ ವಸತಿ ಸಚಿವರು ಹಾಗೂ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ ಅವರು ಇಂದು ಹೊಳೆನರಸೀಪುರ ತಾಲೂಕಿಗೆ ಪ್ರಥಮ ಬಾರಿಗೆ ಆಗಮಿಸಿದರು. ಈ ಶುಭ ಸಂದರ್ಭದಲ್ಲಿ ತಾಲೂಕಿನ ಜನತೆ ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ, ಬೃಹತ್ ಸೇಬಿನ ಹಾರ ಹಾಕಿ ಅತ್ಯಂತ ವಿಜೃಂಭಣೆಯಿಂದ ಸಚಿವರನ್ನು ಸ್ವಾಗತಿಸಿದರು.
ಆಗಮನದ ನಂತರ ಹಾಸನ ಜಿಲ್ಲೆಯ ಸಂಸದರಾದ ಎಂ. ಶ್ರೇಯಸ್ ಪಟೇಲ್ ಹಾಗೂ ವಸತಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಜಂಟಿಯಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ತದನಂತರ ತಾಲೂಕಿನಾದ್ಯಂತ ಪ್ರವಾಸ ಕೈಗೊಂಡು ವಿವಿಧ ಭಾಗಗಳಲ್ಲಿ ಬೆಳೆ ಸಮೀಕ್ಷೆ ನಡೆಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯ ಅಧ್ಯಕ್ಷರು ಮತ್ತು ಸದಸ್ಯರು, ಯುವ ಕಾಂಗ್ರೆಸ್ ಮುಖಂಡರು, ಡಾ. ಬಿ.ಆರ್. ಅಂಬೇಡ್ಕರ್ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ತಾಲೂಕಿನ ವಿವಿಧ ಕಾಂಗ್ರೆಸ್ ನಾಯಕರು ಸೇರಿದಂತೆ ಸಾವಿರಾರು ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿ ಶುಭ ಕೋರಿದರು.
ವರದಿ: ಮಂಜು ಶ್ರವಣೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
