ತಿಪಟೂರು: ತಿಪಟೂರು ಗ್ರಾಮಾಂತರ ತಾಲೂಕಿನ ಬಿಳಿಗೆರೆ ವಲಯದ ಕುಪ್ಪುರು ಕಾರ್ಯಕ್ಷೇತ್ರದ ಶೆಟ್ಟಿಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರದಿಂದ ₹2,00,000 (ಎರಡು ಲಕ್ಷ ರೂಪಾಯಿ) ಮಂಜೂರಾಗಿದೆ.
ಸಂಘದ ನಿರ್ಮಾಣ ಕಾರ್ಯಕ್ಕೆ ಸಹಕಾರ ಕೋರಿ ಸಮಿತಿಯವರು ಶ್ರೀ ಕ್ಷೇತ್ರಕ್ಕೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ ಪೂಜ್ಯರು, ಕ್ಷೇತ್ರದ ಪ್ರಸಾದ ರೂಪದಲ್ಲಿ ಈ ಧನಸಹಾಯವನ್ನು ಮಂಜೂರು ಮಾಡಿದ್ದಾರೆ.
ಈ ಮಂಜೂರಾತಿ ಪತ್ರವನ್ನು ತುಮಕೂರು-1 ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ಅವರು ಸಂಘದ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿ, ಶ್ರೀ ಕ್ಷೇತ್ರದ ವಿವಿಧ ಜನಪರ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ತಿಪಟೂರು ಗ್ರಾಮಾಂತರ ತಾಲೂಕಿನ ಯೋಜನಾಧಿಕಾರಿಗಳಾದ ಸುರೇಶ್ ಕೆ. ಅವರು ಭಾಗವಹಿಸಿದ್ದರು.
ಸಂಘದ ಅಧ್ಯಕ್ಷರಾದ ವಿಶ್ವಾರಾಧ್ಯ, ಕಾರ್ಯದರ್ಶಿ ತೊಂಟಾರಾಧ್ಯ, ಉಪಾಧ್ಯಕ್ಷರಾದ ಗೌರಮ್ಮ, ನಿರ್ದೇಶಕರಾದ ಕುಪ್ಪುರುಲಿಂಗಯ್ಯ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಅಲ್ಲದೆ, ಬಿಳಿಗೆರೆ ವಲಯದ ಮೇಲ್ವಿಚಾರಕರಾದ ರಮೇಶ್ ಜಿ., ಸೇವಾಪ್ರತಿನಿಧಿ ಗೀತಾ, ಕರೆದಿ ಗ್ರಾಮ ಪಂಚಾಯತಿ ಸದಸ್ಯರಾದ ರವೀಶ್, ಪ್ರಗತಿಬಂಧು ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
