ತುಮಕೂರು: ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಡಿ ಆರೋಗ್ಯ ಇಲಾಖೆಯಿಂದ ಆಗಸ್ಟ್ 10 ರಂದು ಜಿಲ್ಲೆಯ 1 ರಿಂದ 19 ವರ್ಷ ವಯಸ್ಸಿನ ಎಲ್ಲಾ ಮಕ್ಕಳಿಗೆ ಉಚಿತವಾಗಿ ಆಲ್ಬೆಂಡಜೋಲ್ ಜಂತುಹುಳು ನಿವಾರಕ ಮಾತ್ರೆಗಳನ್ನು ನೀಡಲಾಗುವುದು ಎಂದು ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತದಲ್ಲಿ ಸುಮಾರು 1 ರಿಂದ 19 ವರ್ಷ ವಯಸ್ಸಿನ 2 ಕೋಟಿ ಮಕ್ಕಳು ಮಣ್ಣಿನಿಂದ ಹರಡುವ ಜಂತುಹುಳು ಬಾಧೆಯಿಂದ ಅಪಾಯಕಾರಿ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇದರಿಂದ ರಕ್ತಹೀನತೆ, ಪೌಷ್ಟಿಕಾಂಶ ಕೊರತೆ, ನಿಶಕ್ತಿ, ತೂಕ ಕಡಿಮೆಯಾಗುವುದು ಮುಂತಾದ ಪರಿಣಾಮಗಳಾಗುತ್ತವೆ. ಈ ನಿಟ್ಟಿನಲ್ಲಿ ಜಿಲ್ಲೆಯ 6,25,334 ಮಕ್ಕಳಿಗೆ ಜಂತುಹುಳು ನಿವಾರಕ ಮಾತ್ರೆಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
