ತಿಪಟೂರು: ಕರ್ನಾಟಕ ಯೋಗ ವೆಲ್ನೆಸ್ ಟ್ರಸ್ಟ್ ವತಿಯಿಂದ ಆಗಸ್ಟ್ 9ರ ಭಾನುವಾರ ನಗರದ ಎಸ್.ಎನ್.ಎಸ್. ಕನ್ವೆನ್ಷನ್ ಹಾಲ್ನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಟ್ರಸ್ಟ್ನ ಅಧ್ಯಕ್ಷೆ ಜಿ. ಎ. ರೇಖಾ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಸಕ ಕೆ. ಷಡಕ್ಷರಿ ಯೋಗ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ. ಕೆರೆಗೋಡಿರಂಗಾಪುರದ ಶ್ರೀ ಗುರು ಪರದೇಶಿ ಕೇಂದ್ರ ಮಹಾಸ್ವಾಮೀಜಿ ಹಾಗೂ ನೊಣವಿನಕೆರೆ ಕಾಡು ಸಿದ್ಧೇಶ್ವರ ಮಠದ ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಖ್ಯಾತ ವೈದ್ಯ ಡಾ. ಜಿ. ಎಸ್. ಶ್ರೀಧರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದೆ.
1,000ಕ್ಕೂ ಹೆಚ್ಚು ಯೋಗಪಟುಗಳು ಭಾಗಿ:
ಈ ಚಾಂಪಿಯನ್ಷಿಪ್ನಲ್ಲಿ ರಾಜ್ಯದ ವಿವಿಧ ಭಾಗಗಳಿಂದ 1,000ಕ್ಕೂ ಹೆಚ್ಚು ಯೋಗಪಟುಗಳು ಭಾಗವಹಿಸುವ ನಿರೀಕ್ಷೆಯಿದೆ. ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಒಟ್ಟು 18 ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕರೆಯ ನಂತರ ದೇಶಾದ್ಯಂತ ಯೋಗಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರೆತಿದ್ದು, ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಯೋಗದ ಪಾತ್ರ ದೊಡ್ಡದಾಗಿದೆ. ತಿಪಟೂರಿನ ಯೋಗಪಟುಗಳಿಗೂ ಈ ಸ್ಪರ್ಧೆಯಲ್ಲಿ ಉತ್ತಮ ವೇದಿಕೆ ಸಿಗಲಿದೆ ಎಂದರು.
ಆನ್ ಲೈನ್ ಹಾಗೂ ಸ್ಪಾಟ್ ನೋಂದಣಿಗೆ ಅವಕಾಶ
ಟ್ರಸ್ಟ್ನ ಕಾರ್ಯದರ್ಶಿ ಕೆ. ಸಿ. ಕೀರ್ತನಾ ಮಾತನಾಡಿ, “ಈ ಸ್ಪರ್ಧೆಯನ್ನು ಯಶಸ್ವಿಗೊಳಿಸಲು ತಿಪಟೂರಿನ ಕಲಾ ಕೃತಿ ತಂಡ, ಲಯನ್ಸ್ ಕ್ಲಬ್ ಹಾಗೂ ಬೆಂಗಳೂರಿನ ಯೋಗ ಸ್ಪೋರ್ಟ್ಸ್ ಎಜುಕೇಶನ್ ಕೌನ್ಸಿಲ್ ಕೈಜೋಡಿಸಿವೆ. ಬೆಳಿಗ್ಗೆ 8:00 ರಿಂದ ಸಂಜೆ 6:00 ರವರೆಗೆ ಸ್ಪರ್ಧೆಗಳು ನಡೆಯಲಿದ್ದು, ಭಾಗವಹಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣಪತ್ರ ಹಾಗೂ ಪದಕಗಳನ್ನು ವಿತರಿಸಲಾಗುವುದು,” ಎಂದು ಮಾಹಿತಿ ನೀಡಿದರು. ಆನ್ಲೈನ್ ಮೂಲಕ ನೋಂದಣಿ ಈಗಾಗಲೇ ಆರಂಭವಾಗಿದ್ದು, ಸ್ಪರ್ಧೆಯ ದಿನದಂದು ಸ್ಥಳದಲ್ಲೇ ನೋಂದಾಯಿಸಿಕೊಳ್ಳಲು ಸಹ ಅವಕಾಶ ಕಲ್ಪಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ನ ಉಪಾಧ್ಯಕ್ಷ ನಿಜಗುಣ, ಕಾರ್ಯದರ್ಶಿ ಸಂತೋಷ್ ಹಾಗೂ ನಿರ್ದೇಶಕರಾದ ತಿಪಟೂರು ಕೃಷ್ಣ, ಕಿರಣ್ ಕುಮಾರ್ ಉಪಸ್ಥಿತರಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
