ಹುಳಿಯಾರು: ಎಐಸಿಸಿ ನಾಯಕ ರಾಹುಲ್ ಗಾಂಧಿಯವರು ಭಾರತದ ಪ್ರಧಾನಿಯಾಗಬೇಕೆಂಬ ಆಶಯದೊಂದಿಗೆ ಕನ್ಯಾಕುಮಾರಿಯಿಂದ ಕಾಶಿ ಶ್ರೀರಂಗದವರೆಗೆ ಪಾದಯಾತ್ರೆ ಕೈಗೊಂಡಿರುವ ಆಂಧ್ರಪ್ರದೇಶದ ಹಿರಿಯ ವಕೀಲರು ಹಾಗೂ ಕಾಂಗ್ರೆಸ್ ನಾಯಕ ಕಾಟೂರಿ ವೆಂಕಟೇಶ್ವರಲುಗೆ ಹುಳಿಯಾರಿನಲ್ಲಿ ಭವ್ಯ ಸ್ವಾಗತ ದೊರೆಯಿತು.
ಗುರುವಾರ ತುರುವೇಕೆರೆಯಿಂದ ಬಂದ ಪಾದಯಾತ್ರೆಯು ಸಂಜೆ ಹುಳಿಯಾರಿನ ರಾಮ್ ಗೋಪಾಲ್ ಸರ್ಕಲ್ ತಲುಪಿತು. ಈ ವೇಳೆ ಸ್ವಾಗತಿಸಿ ಮಾತನಾಡಿದ ಮಾಜಿ ಶಾಸಕ ಕೆ.ಎಸ್. ಕಿರಣ್ ಕುಮಾರ್, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಮ್ಮ ನಾಯಕರಾದ ರಾಹುಲ್ ಗಾಂಧಿಯವರನ್ನು ಪ್ರಧಾನಿಯನ್ನಾಗಿ ಮಾಡಲು ಜಾಗೃತಿ ಮೂಡಿಸಬೇಕೆಂದು ಕನ್ಯಾಕುಮಾರಿಯಿಂದ ಕಾಶಿ ಶ್ರೀರಂಗದವರೆಗೆ ಪಾದಯಾತ್ರೆ ಹೊರಟಿದ್ದಾರೆ, ಇವರಿಗೆ ಶುಭವಾಗಲಿ ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಟಿ.ಚಿಕ್ಕಣ್ಣ, ಪ.ಪಂ. ಸದಸ್ಯ ಜುಬೇರ್, ಸೈಯದ್ ನೂರ್, ಬಡಗಿ ರಾಮಣ್ಣ, ಯೋಗೀಶ್, ಹರೀಶ್, ಪಟೇಲ್ ರಾಜಣ್ಣ ಹಾಗೂ ಕಾರ್ಯಕರ್ತರು ಇದ್ದರು.
NDA ಸರ್ಕಾರ ಲಕ್ಷಾಂತರ ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುತ್ತಿದೆ. ಸಾಕಷ್ಟು ವಿದ್ಯಾರ್ಥಿಗಳು ಆತ್ಮಹತ್ಯೆ ಸಹ ಮಾಡಿಕೊಂಡಿದ್ದಾರೆ. ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುವುದು ಒಳ್ಳೆಯದಲ್ಲ. ಮತ್ತೆ ಮರು ಪರೀಕ್ಷೆ ಮಾಡಿದ್ದೇವೆ ಎಂದು ಸಮರ್ಥನೆ ಮಾಡಿಕೊಳ್ಳುತ್ತಾರೆ. ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ. ಹಾಗಾಗಿ ಮುಂಬರುವ ಚುನಾವಣೆಗಳಲ್ಲಿ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ.
– ಕಾಟೂರಿ ವೆಂಕಟೇಶ್ವರಲು, ಆಂಧ್ರಪ್ರದೇಶ ಕಾಂಗ್ರೆಸ್ ನಾಯಕರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
