ಶಿವಮೊಗ್ಗ: ಜಿಲ್ಲೆಯ ತಮ್ಮಡಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ ಮಾಡುತ್ತಿದ್ದ 15 ವರ್ಷದ ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲಿ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿರುವ ದುರಂತ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಜಿ.ಕೆ. ವಿನಯ್ (15) ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಇತರ ವಿದ್ಯಾರ್ಥಿಗಳು ಚೆಸ್ ಆಡುತ್ತಿದ್ದುದನ್ನು ವಿನಯ್ ವೀಕ್ಷಿಸುತ್ತಾ ನಿಂತಿದ್ದ ವೇಳೆ ದಿಢೀರನೆ ನೆಲಕ್ಕೆ ಕುಸಿದುಬಿದ್ದಿದ್ದಾನೆ. ಇದನ್ನು ಗಮನಿಸಿದ ಶಿಕ್ಷಕರು ತಕ್ಷಣವೇ ಆತನನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (PHC) ದಾಖಲಿಸಿದ್ದಾರೆ.
ಆದರೆ, ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸುವ ಮಾರ್ಗಮಧ್ಯೆ ಆತ ಕೊನೆಯುಸಿರೆಳೆದಿದ್ದಾನೆ.
ವಿದ್ಯಾರ್ಥಿ ವಿನಯ್ ಸಾವಿನ ಕುರಿತು ಪೋಷಕರು ತೀವ್ರ ಅನುಮಾನ ವ್ಯಕ್ತಪಡಿಸಿದ್ದು, ಘಟನೆಗೆ ನಿಖರ ಕಾರಣವೇನು ಎಂಬುದರ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
