nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!

    August 12, 2026

    ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ

    August 12, 2026

    ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ

    August 12, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
    • ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ
    • ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ
    • ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆ: ದರ್ಶನ್ ಬ್ಯಾರಕ್‌ ನಲ್ಲೂ ಸಿಸಿಬಿ ಶೋಧ!
    • ವಿಬಿ ಜಿ ರಾಮ್‌ ಜಿ ಹಣ ಬರುತ್ತಿಲ್ಲ,  ಕೆಲಸ ಕೊಟ್ಟು ಗುಳೆ ತಪ್ಪಿಸುವ ಸ್ಥಿತಿ ರಾಜ್ಯ ಸರ್ಕಾರಕ್ಕೆ ಬಂದಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
    • ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
    • ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
    ರಾಜ್ಯ ಸುದ್ದಿ August 12, 2026

    ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!

    By Ganesh TumkuruAugust 12, 2026No Comments1 Min Read
    gavi siddeshwara

    ಬಳ್ಳಾರಿ:  ಬಳ್ಳಾರಿಯಲ್ಲಿ ನಡೆದ ಶಾಲಾ ಶತಮಾನೋತ್ಸವ ಕಾರ್ಯಕ್ರಮವೊಂದರಲ್ಲಿ ಕೊಪ್ಪಳದ ಶ್ರೀ ಗವಿಮಠದ ಪೂಜ್ಯ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳಿಗೆ ತೀವ್ರ ಮುಜುಗರ ಉಂಟಾದ ಘಟನೆ ಸಂಭವಿಸಿದೆ. ಪ್ರವಚನ ನೀಡುತ್ತಿದ್ದ ವೇಳೆ ವೇದಿಕೆಯಲ್ಲಿ ಉಂಟಾದ ಗದ್ದಲ ಹಾಗೂ ಮೈಕ್ ಕಿರಿಕಿರಿಯಿಂದ ಬೇಸರಗೊಂಡ ಶ್ರೀಗಳು, ತಮ್ಮ ಪ್ರವಚನವನ್ನು ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ್ದಾರೆ.

    ಬಳ್ಳಾರಿಯಲ್ಲಿ ವೀರಶೈವ ವಿದ್ಯಾವರ್ಧಕ ಸಂಘದ ವತಿಯಿಂದ ‘ಹೀರೇದ ಸೂಗಮ್ಮ ಶಾಲೆ’ಯ ಶತಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿಯವರು ಸಭಿಕರನ್ನು ಉದ್ದೇಶಿಸಿ ಪ್ರವಚನ ನೀಡುತ್ತಿದ್ದರು.

    ಈ ಸಂದರ್ಭದಲ್ಲಿ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಕಾರ್ಯಕ್ರಮಕ್ಕೆ ಆಗಮಿಸಿದರು. ಸ್ವಾಮೀಜಿಗಳು ಮಾತನಾಡುತ್ತಿದ್ದಂತೆಯೇ ವೇದಿಕೆಯಲ್ಲಿದ್ದವರು ಮೈಕ್‌ನಲ್ಲಿ ಸಚಿವರ ಆಗಮನವನ್ನು ಘೋಷಿಸಿದರು. ಅದೇ ವೇಳೆ ಸಚಿವರ ಬೆಂಬಲಿಗರ ಕೂಗಾಟ ಹಾಗೂ ವಾದ್ಯಮೇಳದ ಸದ್ದು ಮುಂತಾದ ಗೊಂದಲಗಳು ಉಂಟಾಗಿ ಸ್ವಾಮೀಜಿಯವರ ಪ್ರವಚನಕ್ಕೆ ಭಂಗ ತಂದವು.

    ಶ್ರೀಗಳ ಅಸಮಾಧಾನ:

    ಕಾರ್ಯಕ್ರಮದ ಶಿಸ್ತು ತಪ್ಪಿದ್ದರಿಂದ ಹಾಗೂ ವೇದಿಕೆಯಲ್ಲಿ ಉಂಟಾದ ಗದ್ದಲದಿಂದ ತೀವ್ರ ಮುಜುಗರ ಮತ್ತು ಕಿರಿಕಿರಿ ಅನುಭವಿಸಿದ ಸ್ವಾಮೀಜಿಯವರು ತಮ್ಮ ಪ್ರವಚನವನ್ನು ತಕ್ಷಣವೇ ಸ್ಥಗಿತಗೊಳಿಸಿದರು. ಬಳಿಕ, ಈಶ್ವರ ಖಂಡ್ರೆ ಅವರಿಗೆ ಮಾತನಾಡುವಂತೆ ತಿಳಿಸಿ ತಮ್ಮ ಆಸನದಲ್ಲಿ ಕುಳಿತರು. ಅದಾದ ಕೆಲವೇ ನಿಮಿಷಗಳಲ್ಲಿ ಶ್ರೀಗಳು ವೇದಿಕೆಯಿಂದ ಹೊರನಡೆದರು.

    ಸಾರ್ವಜನಿಕವಾಗಿ ಪೂಜ್ಯ ಸ್ವಾಮೀಜಿಗಳಿಗೆ ಉಂಟಾದ ಈ ಮುಜುಗರದ ಘಟನೆ ಮತ್ತು ವೇದಿಕೆಯಲ್ಲಾದ ಅವ್ಯವಸ್ಥೆಯ ಕುರಿತು ಗವಿಮಠದ ಲಕ್ಷಾಂತರ ಭಕ್ತರು ಹಾಗೂ ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ಮತ್ತು ಬೇಸರ ವ್ಯಕ್ತವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ

    August 12, 2026

    ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ

    August 12, 2026

    ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆ: ದರ್ಶನ್ ಬ್ಯಾರಕ್‌ ನಲ್ಲೂ ಸಿಸಿಬಿ ಶೋಧ!

    August 12, 2026

    Leave A Reply Cancel Reply

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!

    August 12, 2026

    ಬಳ್ಳಾರಿ:  ಬಳ್ಳಾರಿಯಲ್ಲಿ ನಡೆದ ಶಾಲಾ ಶತಮಾನೋತ್ಸವ ಕಾರ್ಯಕ್ರಮವೊಂದರಲ್ಲಿ ಕೊಪ್ಪಳದ ಶ್ರೀ ಗವಿಮಠದ ಪೂಜ್ಯ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳಿಗೆ ತೀವ್ರ ಮುಜುಗರ…

    ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ

    August 12, 2026

    ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ

    August 12, 2026

    ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆ: ದರ್ಶನ್ ಬ್ಯಾರಕ್‌ ನಲ್ಲೂ ಸಿಸಿಬಿ ಶೋಧ!

    August 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.