nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    ಕೊರಟಗೆರೆ August 14, 2026

    ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ

    By Ganesh TumkuruAugust 14, 2026No Comments2 Mins Read
    p n krishna murthy

    ಕೊರಟಗೆರೆ: ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಸದೃಢವಾಗಿ ಕಟ್ಟಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ಜೆಡಿಎಸ್ ಸರ್ಕಾರ ತರುವುದು ನಮ್ಮ ಮೂಲ ಉದ್ದೇಶ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಎನ್. ಕೃಷ್ಣಮೂರ್ತಿ ಹೇಳಿದರು.

    ಕೊರಟಗೆರೆಯ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಜೆಡಿಎಸ್ ಮುಖಂಡರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

    “ನಾನು ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ದುಡಿದಿದ್ದೆ. ಆದರೆ ಅಲ್ಲಿನ ಉಸಿರುಗಟ್ಟಿಸುವ ವಾತಾವರಣದಿಂದ ಬೇಸತ್ತು, ನನ್ನ ಮಾತೃಪಕ್ಷವಾದ ಜೆಡಿಎಸ್‌ಗೆ ಮರಳಿದ್ದೇನೆ. ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದೇನೆ. ಹಿಂದೆ 15 ವರ್ಷ ಮಾಜಿ ಸಚಿವ ಸಿ. ಚಿನ್ನಿಗಪ್ಪ ಅವರ ಜೊತೆ ಜೆಡಿಎಸ್‌ನಲ್ಲಿ ಕೆಲಸ ಮಾಡಿದಾಗ ಸಿಕ್ಕ ಸಂತೋಷ ಕಾಂಗ್ರೆಸ್‌ನಲ್ಲಿದ್ದಾಗ ಇರಲಿಲ್ಲ.”

    — ಪಿ.ಎನ್. ಕೃಷ್ಣಮೂರ್ತಿ, ಮಾಜಿ ಜಿ.ಪಂ. ಸದಸ್ಯ

    ಕೊರಟಗೆರೆ ಕ್ಷೇತ್ರದಲ್ಲಿ ಮುಂಬರುವ ಚುನಾವಣೆಗೆ ಮೀಸಲಾತಿ ಇದ್ದರೆ ಒಗ್ಗಟ್ಟಿನಿಂದ ಅಭ್ಯರ್ಥಿಯನ್ನು ಗೆಲ್ಲಿಸಲಾಗುವುದು. ಸಾಮಾನ್ಯ ಕ್ಷೇತ್ರವಾದರೆ ವರಿಷ್ಠರು ಹಾಗೂ ಕಾರ್ಯಕರ್ತರ ಒಪ್ಪಿಗೆಯೊಂದಿಗೆ ತಾವೇ ಸ್ಪರ್ಧಿಸುವುದಾಗಿ ಕೃಷ್ಣಮೂರ್ತಿ ಪ್ರಕಟಿಸಿದರು.

    ಮೊದಲ ಹಂತವಾಗಿ ತಾಲ್ಲೂಕಿನ ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಟ್ರ್ಯಾಕ್ ಸೂಟ್‌ಗಳನ್ನು ವಿತರಿಸಲಾಗುವುದು ಎಂದರಲ್ಲದೇ ಹಿಂದೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ತರಾತುರಿಯಲ್ಲಿ ಟಿಕೆಟ್ ಪಡೆದಾಗ ಪಕ್ಷದ ಆಂತರಿಕ ದ್ರೋಹದಿಂದಾಗಿ ಸೋಲು ಅನುಭವಿಸಬೇಕಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

    ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಕಾಮರಾಜು ಜಿ.ಆರ್. ಮಾತನಾಡಿ,  “ಕ್ಷೇತ್ರದ ಸ್ಥಳೀಯ ಚುನಾವಣೆಗಳಲ್ಲಿ ಜೆಡಿಎಸ್ ಮುನ್ನಡೆಯಲ್ಲಿದ್ದರೂ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿತ್ತು. ಈಗ ಕೃಷ್ಣಮೂರ್ತಿ ಅವರ ನಾಯಕತ್ವದಲ್ಲಿ ಮತ್ತೆ ಗೆಲುವು ಸಾಧಿಸುತ್ತೇವೆ. ಮಾಜಿ ಶಾಸಕ ಸುಧಾಕರಲಾಲ್ ಅವರು ಮುಂದೆ ಸ್ಪರ್ಧಿಸುವುದಿಲ್ಲ ಎಂದಿದ್ದು, ವರಿಷ್ಠರು ತೀರ್ಮಾನಿಸುವ ಅಭ್ಯರ್ಥಿಗಾಗಿ ಶ್ರಮಿಸುತ್ತೇವೆ. ಎನ್‌ ಡಿಎ (NDA) ಮೈತ್ರಿಯನ್ನು ಮುಂದುವರಿಸಲಾಗುವುದು” ಎಂದರು.

    ಮಾಜಿ ಕಾರ್ಯಾಧ್ಯಕ್ಷ ನರಸಿಂಹರಾಜು  ಮಾತನಾಡಿ “ಕಳೆದ ಮೂರು ವರ್ಷಗಳಿಂದ ಕೊರಟಗೆರೆಯಲ್ಲಿ ಪಕ್ಷವನ್ನು ಮುನ್ನಡೆಸುವ ಸೂಕ್ತ ನಾಯಕನ ಕೊರತೆ ಇತ್ತು. ಪಿ.ಎನ್. ಕೃಷ್ಣಮೂರ್ತಿ ಅವರ ಆಗಮನದಿಂದ ಜೆಡಿಎಸ್ ಮತ್ತಷ್ಟು ಬಲಗೊಂಡಿದೆ”  ಎಂದರು.

    ಬೆಂಗಳೂರಿನ ಜೆಡಿಎಸ್ ಕೇಂದ್ರ ಕಛೇರಿ ‘ಜೆಪಿ ಭವನ’ದಲ್ಲಿ ರಾಜ್ಯಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಪಿ.ಎನ್. ಕೃಷ್ಣಮೂರ್ತಿ ಅವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ನೂತನ ಸಾರಥಿ ಸಿಕ್ಕಂತಾಗಿದೆ.  ಮಾಜಿ ಶಾಸಕರಾದ ಪಿ.ಆರ್. ಸುಧಾಕರ್ ಲಾಲ್ ಅವರ ಹಿಂಜರಿಕೆಯ ನಡೆಯಿಂದ ಕಾರ್ಯಕರ್ತರಿಗೆ ತೀವ್ರ ಬೇಸರವಾಗಿದೆ. ವರಿಷ್ಠರ ತೀರ್ಮಾನದಂತೆ ನೂತನ ನಾಯಕ ಪಿ.ಎನ್. ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುತ್ತೇವೆ.

    — ಕಾಮರಾಜು ಜಿ.ಆರ್, ತಾಲ್ಲೂಕು ಅಧ್ಯಕ್ಷರು, ಜಾತ್ಯಾತೀತ ಜನತಾದಳ (ಜೆಡಿಎಸ್)

    ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಲಕ್ಷ್ಮೀಶ್, ಕೆ.ಎನ್. ಲಕ್ಷ್ಮೀನಾರಾಯಣ್, ಕೆ.ಜಿ. ರಮೇಶ್, ಅಶ್ವಥ್ ನಾರಾಯಣ್, ದೊಡ್ಡಯ್ಯ, ಮಾವತ್ತೂರು ಮಂಜುನಾಥ್, ಸಾಕರಾಜು, ರಂಗಣ್ಣ, ರಮೇಶ್ ಗುಂಡನಪಾಳ್ಯ, ಮುರುಡಪ್ಪ, ಶ್ರೀಧರ್, ಪುಟ್ಟನರಸಯ್ಯ, ಕಾಕಿಮಲ್ಲಣ್ಣ, ಅಪ್ಪಾಜಿಗೌಡ, ನಾಗರಾಜು, ರಮೇಶ್ ಬೈರಸಂದ್ರ, ಸಂತೋಷ್ ಗೌಡ, ಜಗದೀಶ್, ರೇಣುಕಾ ಸೇರಿದಂತೆ ಹಲವು ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Leave A Reply Cancel Reply

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.