nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?

    October 5, 2026
    Facebook Twitter Instagram
    ಟ್ರೆಂಡಿಂಗ್
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    • AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?
    • ಜನಸಾಮಾನ್ಯರೇ ಗಮನಿಸಿ: ಅ.15ರಿಂದ UPIನಲ್ಲಿ ಹೊಸ ನಿಯಮ, ನಿಮ್ಮ ಹಣಕ್ಕೆ ಏನಾಗಲಿದೆ?
    • ಹಿಂದಿ ನಂತರ ಭಾರತದಲ್ಲಿ ಹೆಚ್ಚು ಮಾತನಾಡುವ ಭಾಷೆ ಯಾವುದು? ಕನ್ನಡಕ್ಕೆ ಎಷ್ಟನೇ ಸ್ಥಾನ?
    • ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!
    • ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ
    • ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಆರೋಪ: ಬೀದರ್ ಜಿಲ್ಲೆಯ ಭಾಲ್ಕಿ ಮೂಲದ ಯುವಕನ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ
    ಲೇಖನ August 15, 2026

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    By Ganesh TumkuruAugust 15, 2026No Comments2 Mins Read
    indipendece day

    ಲೇಖಕರು: ವಿ.ಎಂ.ಎಸ್.ಗೋಪಿ,  ಬೆಂಗಳೂರು

    ಆಗಸ್ಟ್ 15 ಬಂತೆಂದರೆ ಸಾಕು, ಇಡೀ ದೇಶದಲ್ಲೇ ಹಬ್ಬದ ವಾತಾವರಣ. ಸಿಲಿಕಾನ್ ಸಿಟಿ ಬೆಂಗಳೂರಿನ ಮಾಲ್ ಮತ್ತು ಮಳಿಗೆಗಳು ಶೃಂಗಾರಗೊಂಡು, ರಿಯಾಯಿತಿ ಹಾಗೂ ಆಕರ್ಷಕ ಆಫರ್‌ ಗಳ ಬ್ಯಾನರ್‌ ಗಳಿಂದ ಕಂಗೊಳಿಸುತ್ತಿದ್ದರೆ, ಇನ್ನೊಂದೆಡೆ ವರಮಹಾಲಕ್ಷ್ಮಿ ಹಬ್ಬ ಮತ್ತು ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಭಾರತವು ತನ್ನ ಸ್ವಾತಂತ್ರ್ಯದ ಹಾದಿಯಲ್ಲಿ 79 ವಸಂತಗಳನ್ನು ಪೂರೈಸಿ 80ನೇ ಸ್ವಾತಂತ್ರ್ಯೋತ್ಸವಕ್ಕೆ ಕಾಲಿಡುತ್ತಿರುವ ಈ ಸಂದರ್ಭವು ಪ್ರತಿಯೊಬ್ಬ ಭಾರತೀಯನಿಗೂ ಅತ್ಯಂತ ಹೆಮ್ಮೆಯ ಕ್ಷಣ.

    ಜಾತಿ, ಮತ, ಧರ್ಮ, ಭಾಷೆ, ಬಡವ–ಶ್ರೀಮಂತ ಎಂಬ ಯಾವುದೇ ಭೇದಭಾವವಿಲ್ಲದೆ ನಾವೆಲ್ಲರೂ ‘ಭಾರತೀಯರು’ ಎಂಬ ಒಗ್ಗಟ್ಟಿನಿಂದ ಆಚರಿಸುವ ದಿನವಿದು. ದೇಶದ ಮೂಲೆಮೂಲೆಯಲ್ಲೂ ದೇಶಭಕ್ತಿಯ ಗೀತೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಭಾಷಣಗಳು ನಮ್ಮ ವೈವಿಧ್ಯಮಯ ಪರಂಪರೆಯನ್ನು ಎತ್ತಿಹಿಡಿಯುತ್ತವೆ.

    ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ ಮಹಾನ್ ಹೋರಾಟಗಾರರ ತ್ಯಾಗದ ಫಲವಾಗಿ ಇಂದು ನಾವು ಸ್ವತಂತ್ರ ಭಾರತದಲ್ಲಿದ್ದೇವೆ. ಸ್ವಾತಂತ್ರ್ಯಾನಂತರದ ದಶಕಗಳಲ್ಲಿ ದೇಶವು ಅಪಾರ ಪ್ರಗತಿಯನ್ನು ಸಾಧಿಸಿದೆ:

    ಗ್ರಾಮೀಣ ಮಟ್ಟದಿಂದ ಹಿಡಿದು ಜಾಗತಿಕ ಮಟ್ಟದವರೆಗೆ ಶಿಕ್ಷಣ ಹಾಗೂ ಆಹಾರ ಭದ್ರತೆಬಾಹ್ಯಾಕಾಶ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದ ಮುಂಚೂಣಿ ರಾಷ್ಟ್ರಗಳ ಸಾಲಿನಲ್ಲಿ ಭಾರತದ ಹೆಜ್ಜೆಸಿನಿಮಾ, ಕ್ರೀಡೆ ಹಾಗೂ ವೈದ್ಯಕೀಯ ರಂಗಗಳಲ್ಲಿ ಜಾಗತಿಕ ಮಟ್ಟದಲ್ಲಿ ಸಾಧಿಸಿದ ಅಭಿವೃದ್ಧಿಯಾಗಿದೆ.

    ದೇಶದ ಈ ಸುದೀರ್ಘ ಪ್ರಗತಿ ಪಥದಲ್ಲಿ “ನಮ್ಮ ದೇಶದ ಪ್ರಗತಿಯೇ ನಮ್ಮ ಪ್ರಗತಿ” ಎಂಬ ಭಾವನೆ ಪ್ರತಿಯೊಬ್ಬ ಪ್ರಜೆಯಲ್ಲೂ ಮೂಡಬೇಕಿದೆ.

    ಚಿಂತಿಸಬೇಕಾದ ವಿಷಯಗಳು:

    ನಮ್ಮ ರಾಷ್ಟ್ರೀಯ ಧೈಯವಾಕ್ಯ “ಸತ್ಯಮೇವ ಜಯತೇ” (ಸತ್ಯಕ್ಕೆ ಗೆಲುವು). ಆದರೆ ಇಂದಿನ ಸಮಾಜದಲ್ಲಿ ಸುಳ್ಳು, ವಂಚನೆ, ಮೋಸ ಮತ್ತು ಲಂಚಗುಳಿತನಗಳು ವ್ಯಾಪಿಸುತ್ತಿರುವುದು ದುರಂತ. ಸ್ವಾತಂತ್ರ್ಯ ಹೋರಾಟದಲ್ಲಿ ಪುರುಷರಷ್ಟೇ ಸಮಾನವಾಗಿ ಮಹಿಳೆಯರೂ ಹೋರಾಡಿದ್ದಾರೆ. ಆದ್ದರಿಂದ ದೇಶಕ್ಕೆ ನೀಡುವ ಗೌರವವನ್ನು ಮನೆಯ ತಾಯಿ, ಮಗಳು, ಸೊಸೆ ಹಾಗೂ ಸಹೋದರಿಯರಿಗೂ ನೀಡಿ, ಮಹಿಳಾ ಗೌರವವನ್ನು ಎತ್ತಿಹಿಡಿಯುವುದು ನಮ್ಮ ಕರ್ತವ್ಯ.

    ನಮ್ಮೆಲ್ಲರ ಸೃಷ್ಟಿಕರ್ತ ಒಬ್ಬನೇ. ಒಂದೇ ದೇಶದ ನಿವಾಸಿಗಳಾದ ನಾವು ಸಹೋದರತೆಯಿಂದ ಬಾಳಬೇಕಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಕೇವಲ ಆಗಸ್ಟ್ 15ರ ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ, “ನಾವೆಲ್ಲರೂ ಒಂದೇ” ಎಂಬ ಭಾವನೆಯನ್ನು ದಿನನಿತ್ಯದ ಜೀವನದಲ್ಲಿ ಗಟ್ಟಿಗೊಳಿಸೋಣ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಹಿಂದಿ ನಂತರ ಭಾರತದಲ್ಲಿ ಹೆಚ್ಚು ಮಾತನಾಡುವ ಭಾಷೆ ಯಾವುದು? ಕನ್ನಡಕ್ಕೆ ಎಷ್ಟನೇ ಸ್ಥಾನ?

    October 5, 2026

    ಶಿವನ ಕೊರಳಿನಿಂದ ಬುದ್ಧನ ಧ್ಯಾನದವರೆಗೆ ನಾಗರಹಾವಿನ ನಂಟೇಕೆ? ಹಿಂದೂ, ಬೌದ್ಧ, ಜೈನ ಧರ್ಮಗಳಲ್ಲಿರುವ ನಿಗೂಢ ನಂಬಿಕೆಯ ಕಥೆ ಇಲ್ಲಿದೆ!

    October 4, 2026

    ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?

    October 2, 2026

    Leave A Reply Cancel Reply

    Our Picks

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ, ಚಿತ್ರಕಥೆಗಾರ ಸಿಂಗೀತಂ ಶ್ರೀನಿವಾಸ ರಾವ್ (94) ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಆರೋಗ್ಯ…

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?

    October 5, 2026

    ಜನಸಾಮಾನ್ಯರೇ ಗಮನಿಸಿ: ಅ.15ರಿಂದ UPIನಲ್ಲಿ ಹೊಸ ನಿಯಮ, ನಿಮ್ಮ ಹಣಕ್ಕೆ ಏನಾಗಲಿದೆ?

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.