nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ

    August 15, 2026

    ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 15, 2026

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    August 15, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
    ತುಮಕೂರು August 15, 2026

    ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ

    By Ganesh TumkuruAugust 15, 2026No Comments2 Mins Read
    indipendece day tumakuru

    ತುಮಕೂರು: ತುಮಕೂರಿನ ಶ್ರೀ ಸಿದ್ಧಗಂಗಾ ಮಠ ಹಾಗೂ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರದ್ಧೆ ಮತ್ತು ವಿಜೃಂಭಣೆಯಿಂದ ಆಚರಿಸಲಾಯಿತು. ಮಠದ ಆವರಣದಲ್ಲಿ ಹಾಗೂ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾತನಾಡಿದರು.

    ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಡಾ. ಜಿ. ಪರಮೇಶ್ವರ್, “ಸ್ವಾತಂತ್ರ್ಯ ಬಂದ ಆರಂಭದ ದಿನಗಳಲ್ಲಿ ದೇಶದಲ್ಲಿ ಆಹಾರಕ್ಕೂ ಅಭಾವವಿದ್ದ ಪರಿಸ್ಥಿತಿ ಇತ್ತು. ಆದರೆ ಇಂದು ಶಿಕ್ಷಣ ಕ್ರಾಂತಿ ಹಾಗೂ ಕಠಿಣ ಶ್ರಮದ ಫಲವಾಗಿ ಭಾರತವು ಸ್ವಾವಲಂಬನೆ ಸಾಧಿಸಿ, ಜಗತ್ತಿನ ಬಲಿಷ್ಠ ರಾಷ್ಟ್ರಗಳ ಸಾಲಿನಲ್ಲಿ ನಿಂತಿದೆ. ಆಹಾರ ಉತ್ಪಾದನೆ, ತಂತ್ರಜ್ಞಾನ, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿರುವ ಭಾರತ, ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಪ್ರತಿಯೊಬ್ಬರಿಗೂ ಶಿಕ್ಷಣ ಸಿಗಬೇಕೆಂಬ ನಮ್ಮ ಪೂರ್ವಜರ ಕನಸು ಇಂದು ನನಸಾಗಿದೆ” ಎಂದರು.

    ದೇಶದಲ್ಲಿ 35 ವರ್ಷ ವಯೋಮಿತಿಯೊಳಗಿನ ಯುವಜನತೆ ಹೆಚ್ಚಾಗಿದ್ದಾರೆ. ಜಾತಿ, ಧರ್ಮ, ಬಣ್ಣ ಹಾಗೂ ಭಾಷೆಯ ಯಾವುದೇ ತಾರತಮ್ಯವಿಲ್ಲದೆ ಎಲ್ಲರೂ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಇಂತಹ ನಿರುದ್ಯೋಗಿ ಯುವಕರಿಗೆ ಸೂಕ್ತ ಕೌಶಲ್ಯ ತರಬೇತಿ ಮತ್ತು ಬೆಂಬಲ ನೀಡಿ, ಅವರನ್ನು ದೇಶದ ಪ್ರಗತಿಗೆ ಬಳಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು.

    ಸಿದ್ಧಗಂಗಾ ಮಠದ ಕೊಡುಗೆಯನ್ನು ಸ್ಮರಿಸಿದ ಅವರು, “ಶ್ರೀ ಸಿದ್ಧಗಂಗಾ ಮಠವು ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಅಕ್ಷರ ಮತ್ತು ಆಶ್ರಯ ನೀಡಿ ಅವರ ಭವಿಷ್ಯಕ್ಕೆ ದಾರಿದೀಪವಾಗಿದೆ. ಇಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಇಂದು ವಿಶ್ವದಾದ್ಯಂತ ಉನ್ನತ ಹುದ್ದೆಗಳನ್ನು ಅಲಂಕರಿಸಿ ದೇಶದ ಕೀರ್ತಿ ಹೆಚ್ಚಿಸುತ್ತಿದ್ದಾರೆ. ಪರಮಪೂಜ್ಯ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳು ಭೌತಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ತತ್ವಾದರ್ಶಗಳ ಮೂಲಕ ಶಾಶ್ವತವಾಗಿ ಜೀವಂತವಾಗಿದ್ದಾರೆ. ಅವರ ಹಾದಿಯಲ್ಲೇ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಮಠವನ್ನು ಮುನ್ನಡೆಸುತ್ತಿದ್ದು, ಮಠದ ಸಮಾಜ ಸೇವೆ ಹೀಗೆಯೇ ಮುಂದುವರಿಯಲಿ” ಎಂದು ಆಶಿಸಿದರು.

    ಸಿದ್ಧಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಸಿದ್ಧಲಿಂಗ ಸ್ವಾಮೀಜಿಯವರು ವಹಿಸಿದ್ದರು. ಈ ವೇಳೆ ಶಾಸಕರಾದ ಬಿ. ಸುರೇಶ್ ಗೌಡ, ಜಿ. ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

    ಉಪ ಮುಖ್ಯಮಂತ್ರಿಗಳು ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲೂ ಧ್ವಜಾರೋಹಣ ನೆರವೇರಿಸಿ, ಜಿಲ್ಲೆಯ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026

    ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ

    August 12, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ

    August 15, 2026

    ತುಮಕೂರು: ತುಮಕೂರಿನ ಶ್ರೀ ಸಿದ್ಧಗಂಗಾ ಮಠ ಹಾಗೂ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರದ್ಧೆ ಮತ್ತು…

    ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 15, 2026

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    August 15, 2026

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.