ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಹಾದೇವಪುರ ಗ್ರಾಮದಲ್ಲಿ ನವವಿವಾಹಿತೆಯೊಬ್ಬರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದ್ದು, ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಮೃತ ಯುವತಿಯನ್ನು ಕಾರಿಪಾಲಯ್ಯನಹಟ್ಟಿ ಮೂಲದ ಸುಮಲತಾ (21) ಎಂದು ಗುರುತಿಸಲಾಗಿದೆ. ಗುಂಡಯ್ಯನಹಟ್ಟಿ ಮೂಲದ ಗಜೇಂದ್ರ ಹಾಗೂ ಆತನ ಕಡೆಯವರ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ.
ಆಗಸ್ಟ್ 13 ರಂದು ಸುಮಲತಾ ಮನೆ ಬಿಟ್ಟು ಗಜೇಂದ್ರನ ಜೊತೆ ತೆರಳಿದ್ದರು. ಬಳಿಕ ಇಬ್ಬರೂ ಪ್ರೇಮ ವಿವಾಹವಾಗಿದ್ದರು. ಭಾನುವಾರ ಸಂಜೆ ಮಹಾದೇವಪುರ ಗ್ರಾಮದ ಬಾವಿಯಲ್ಲಿ ಸುಮಲತಾ ಅವರ ಶವ ಪತ್ತೆಯಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
