ತುಮಕೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಲು ಒತ್ತಾಯಿಸಿ ಜಿಲ್ಲಾ ಬಿಜೆಪಿ ಮುಖಂಡರು ರಾಜ್ಯ ಬಿಜೆಪಿ ಕರೆ ಮೇರೆಗೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.
ಧರಣಿಯನ್ನುದ್ದೇಶಿಸಿ ಮಾತನಾಡಿದ, ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕರವಿಶಂಕರ್ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ 94 ಕೋಟಿರೊ. ಗಳನ್ನು ಖಾಸಗಿಯವರಿಗೆ ವರ್ಗಾವಣೆ ಮಾಡಿರುವ ಆರೋಪ ಹೊತ್ತಿದ್ದಲ್ಲಿಗೆ ಹೋಗಿ ಬೇಲ್ ಮೇಲೆ ಹೊರಬಂದಿರುವ ಸಚಿವ ಬಿ.ನಾಗೇಂದ್ರ ಅವರನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಯಾವ ನೈತಿಕತೆಯಿಂದ ಮತ್ತೆ ಸಚಿವ ಸ್ಥಾನ ನೀಡಿದ್ದಾರೆ. ಅವರನ್ನೂ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಮಾಜಿ ಅಧ್ಯಕ್ಷ ವೈ.ಹೆಚ್. ಹುಚ್ಚಯ್ಯ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಾಂತರರೂ. ಅವ್ಯವಹಾರದ ಪ್ರಮುಖ ಆರೋಪಿ ಎಂಬ ಆರೋಪದಲ್ಲಿ ನಾಗೇಂದ್ರ ಅವರು ಜೈಲಿಗೆ ಹೋಗಿದ್ದರು. ಅವರನ್ನು ಹಿಂದೆ ಸಚಿವ ಸ್ಥಾನದಿಂದ ಕಿತ್ತಾಕಿದ್ದರು. ಆದರೂ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್ ಅವರು ಮತ್ತೆ ನಾಗೇಂದ್ರ ಅವರಿಗೆ ಮಂತ್ರಿ ಸ್ಥಾನ ನೀಡಿರುವುದು ಖಂಡನೀಯ ಎಂದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ವಾಲ್ಮೀಕಿ ಸಮಾಜದ ಮುಖಂಡ ಊರುಕೆರೆ ವಿಜಯ ಕುಮಾರ್ ಮಾತನಾಡಿ, ವಾಲ್ಮೀಕಿ ಸಮುದಾಯದ ಜನರಿಗೊಂದು ಮೀಸಲಾದ ಹಣವನ್ನುತೆಲಂಗಾಣ, ಕರ್ನಾಟಕ ಚುನಾವಣೆಗೆ ಬಳಸಿಕೊಂಡು ಖಾಲಿ ಸೀಯಿ. ಅವರನ್ನುಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು.ವಾಲ್ಮೀಕಿ ಸಮುದಾಯದ ಶಾಸಕರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಟಿ.ಹೆಚ್. ಹನುಮಂತರಾಜು, ಉಪಾಧ್ಯಕ್ಷರಾದ ನಾಗ ರತ್ನಮ್ಮ, ಕಾರ್ಯದರ್ಶಿ ಹೆಚ್.ಎಂ. ರವೀಶ್ಯ್ಯ, ಕೆ. ವೇದಮೂರ್ತಿ, ಖಜಾಂಚಿ ಗಣೇಶ್ಪ್ರಸಾದ್, ರೈತ ಮೋರ್ಚಾಜಿಲ್ಲಾಧ್ಯಕ್ಷ ಸತ್ಯಮಂಗಲ ಜಗದೀಶ್, ನಗರಾಧ್ಯಕ್ಷಧನುಷ್, ಪ್ರಧಾನ ಕಾರ್ಯದರ್ಶಿಗಳಾದ ವಿರೂಪಾಕ್ಷಪ್ಪ, ಹನುಮಂತ ರಾಜು, ಮಹಿಳಾ ಮೋರ್ಚಾ ನಗರಾಧ್ಯಕ್ಷೆ ವಸಂತಮ್ಮ, ಮುಖಂಡರಾದ ನಂದೀಶ್, ರುದ್ರೇಶ್, ಬನಶಂಕರಿಬಾಬು, ಬಂಬು ಮೋಹನ್, ರಾಕೇಶ್, ವಿನಯ್ ಜೈನ್, ಪ್ರೀತಂಜೈನ್, ಮಲ್ಲಿಕಾರ್ಜುನಯ್ಯ, ಜಿ. ಜಗದೀಶ್, ವೆಂಕಟೇಶ್, ಪುರುಷೋತ್ತಮ್, ನಿಸರ್ಗ ರಮೇಶ್, ರವಿ ಚೆಂಗಾವಿ, ಗಂಗೇಶ್ ಹದಿನಾಲ್ಕು, ಹೆಚ್. ರಾಯಪ್ಪ, ಸಿದ್ಧಲಿಂಗಯ್ಯ, ವೆಂಕಟೇಶಾಚಾರ್, ತಾಪಂ ಮಾಜಿ ಅಧ್ಯಕ್ಷ ವೆಂಕಟೇಶ್ ಮೊದಲಾದವರು ಭಾಗವಹಿಸಿದ್ದರು.
ತುಮಕೂರು ಜಿಲ್ಲಾ ಬಿಜೆಪಿಯಿಂದ ಆರೋಪಿತ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿ ಅಮಾನಿಕೆರೆ ಬಳಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಯಿತು.
ಜಿಲ್ಲಾ ಬಿಜೆಪಿ ಎಸ್.ಟಿ. ಮೋರ್ಚಾ ಅಧ್ಯಕ್ಷ ದಿಲೀಪ್ ಮಾತನಾಡಿ, ವಾಲ್ಮೀಕಿ ಸಮಾಜಕ್ಕೆ ಮೀಸಲಾಗಿದ್ದ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿ ಸಮಾಜಕ್ಕೆ ಅನ್ಯಾಯ ಮಾಡಿದ ಸಚಿವ ನಾಗೇಂದ್ರ ಅವರಿಗೆ ಮಂತ್ರಿ ಸ್ಥಾನ ಕೊಟ್ಟಿದ್ದೇ ಸಮುದಾಯಕ್ಕೆ ಮಾಡುತ್ತಿರುವುದು ದ್ರೋಹ. ಹಿರಿಯ ಶಾಸಕರಾದ ತುಮಕೂರಿನ ಕೆ. ಎನ್. ರಾಜಣ್ಣ, ಮೊಳಕಾಲ್ಮೂರಿನ ಎನ್.ವೈ. ಗೋಪಾಲಕೃಷ್ಣ ಅವರನ್ನು ಮಂತ್ರಿ ಮಾಡಬೇಕು ಎಂದು ಆಗ್ರಹಿಸಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಚಿವರಾಗಿದ್ದ ನಾಗೇಂದ್ರ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಜುವೆಲ್ಲರಿಯವರಿಗೆ ಮತ್ತಿತರ ಖಾಸಗಿಯವರ ಖಾತೆಗೆ ವರ್ಗಾವಣೆ ಮಾಡಿದ ಪ್ರಕರಣದ ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ ಸಿಬಿಐ ತನಿಖೆ ನಡೆಸುತ್ತಿದೆ. ಆರೋಪಿತ ನಾಗೇಂದ್ರ ಅವರನ್ನು ಸಚಿವರಾಗಿ ಮುಂದುವರಿಸುವುದು ಸಮಂಜಸವಲ್ಲ. ನಾಗೇಂದ್ರ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ತೆಗೆಯಬೇಕು ಎಂದು ಬಿಜೆಪಿ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತಿದೆ.
–– ಹೆಬ್ಬಾಕರವಿಶಂಕರ್, ಬಿಜೆಪಿ ಜಿಲ್ಲಾಧ್ಯಕ್ಷ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
