ತುಮಕೂರು: ರುಡ್ ಸೆಟ್ ಸಂಸ್ಥೆ ವತಿಯಿಂದ ಗ್ರಾಮೀಣ ನಿರುದ್ಯೋಗಿ ಯುವಕ, ಯುವತಿಯರಿಗೆ ಆಗಸ್ಟ್ 20 ರಿಂದ ಎಂಬ್ರಾಯ್ಡರಿ, ಆರಿ ವರ್ಕ್ ಮತ್ತು ಫ್ಯಾಬ್ರಿಕ್ ಪೇಂಟಿಂಗ್ ಕುರಿತು 31 ದಿನಗಳ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿರಬೇಕು.
ತರಬೇತಿ ಅವಧಿಯಲ್ಲಿ ಉಚಿತ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380162042, 9481506564, 9113880324, 9241482541ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ಗಿರಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
