nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿಕ್ಕನಾಯಕನಹಳ್ಳಿ: 5,630 ಅರ್ಜಿಗಳ ಪರಿಷ್ಕರಣೆ ಬಾಕಿ | ಶೇ.93 ಗೃಹಜ್ಯೋತಿ ಯೋಜನೆ ಪರಿಷ್ಕರಣೆ
    ರಾಜ್ಯ ಸುದ್ದಿ August 20, 2026

    ಚಿಕ್ಕನಾಯಕನಹಳ್ಳಿ: 5,630 ಅರ್ಜಿಗಳ ಪರಿಷ್ಕರಣೆ ಬಾಕಿ | ಶೇ.93 ಗೃಹಜ್ಯೋತಿ ಯೋಜನೆ ಪರಿಷ್ಕರಣೆ

    By Ganesh TumkuruAugust 20, 2026No Comments2 Mins Read
    chikkanayakanahalli

    ಚಿಕ್ಕನಾಯಕನಹಳ್ಳಿ: ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯ ಪರಿಷ್ಕರಣೆ ಕಾರ್ಯವು ತಾಲೂಕಿನಲ್ಲಿ ಶೇ.93ರಷ್ಟು ಮುಕ್ತಾಯಗೊಂಡಿದೆ ಎಂದು ಬೆಸ್ಕಾಂ ಎ.ಇ.ಇ. ಗವಿರಂಗಯ್ಯ ತಿಳಿಸಿದ್ದಾರೆ. ಅವರು ತಾಲೂಕು ಪಂಚಾಯಿತಿ ಆವರಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

    ಪರಿಷ್ಕರಣೆ ವೇಳೆ ಹಲವು ಕುಟುಂಬದವರು ಮನೆಯಲ್ಲಿ ಇಲ್ಲದಿರುವುದು ಅಥವಾ ಇತರ ಕಾರಣಾಂತರಗಳಿಂದ 5630 ಅರ್ಜಿಗಳ ಪರಿಷ್ಕರಣೆ ಬಾಕಿ ಉಳಿದಿದೆ. ಈ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ನೂರಕ್ಕೆ ನೂರರಷ್ಟು ಗುರಿ ಸಾಧಿಸಲಾಗುವುದು. ಪರಿಷ್ಕರಣೆಯಾಗದೆ ಉಳಿದಿರುವವರು ಕಚೇರಿಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಸ್ಪಷ್ಟಪಡಿಸಿದರು.

    ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಪಾಂಡುರಂಗಯ್ಯ ಮಾತನಾಡಿ, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ನಕಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸೃಷ್ಟಿಸಿ ಸಾರ್ವಜನಿಕರಿಗೆ ವಂಚಿಸುತ್ತಿರುವ ಜಾಲ ಸಕ್ರಿಯವಾಗಿದೆ. ಇತ್ತೀಚೆಗೆ ಹುಳಿಯಾರಿನಲ್ಲಿ ಗ್ರಾಮೀಣ ಜನರಿಗೆ ವಂಚಿಸುತ್ತಿದ್ದವರನ್ನು ಪತ್ತೆ ಹಚ್ಚಿ ತಹಸೀಲ್ದಾರ್ ಮಮತಾ ಅವರು ಪೊಲೀಸರಿಗೆ ಒಪ್ಪಿಸಿ ಪ್ರಕರಣ ದಾಖಲಿಸಿದ್ದಾರೆ. ಇಂತಹ ವಂಚನೆ ಪ್ರಕರಣಗಳು ತಾಲೂಕಿನಲ್ಲಿ ಹೆಚ್ಚಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಸಿ.ಡಿ.ಪಿ.ಓ. ಹೊನ್ನಪ್ಪ, ಪ್ರಸ್ತುತ ಅಂಗನವಾಡಿ ಕಾರ್ಯಕರ್ತೆಯರು ಎಸ್‌ಬಿಆರ್ ಪರಿಷ್ಕರಣೆಯಲ್ಲಿ ತೊಡಗಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ವಂಚನೆ ಪ್ರಕರಣಗಳು ಮರುಕಳಿಸದಂತೆ ಅಂಗನವಾಡಿ ಕಾರ್ಯಕರ್ತೆಯರ ಸಭೆ ಕರೆದು, ಅವರ ಮೂಲಕ ಗ್ರಾಮಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸಲಾಗುವುದು ಎಂದು ಭರವಸೆ ನೀಡಿದರು.

    ಈ ಕುರಿತು ಪ್ರತಿಕ್ರಿಯಿಸಿದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಶಿವ ರಾಜಯ್ಯ, ಇಂತಹ ಪ್ರಕರಣಗಳು ಮರುಕಳಿಸದಂತೆ ನಿಗಾ ವಹಿಸಲಾಗುವುದು. ಅಲ್ಲದೆ ವಾಟರ್ ಮ್ಯಾನ್‌ಗಳು ಸಾರ್ವಜನಿಕರ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ, ನೇರವಾಗಿ ನನ್ನ ಗಮನಕ್ಕೆ ತನ್ನಿ, ತಕ್ಷಣವೇ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದರು.

    ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಭೆಗೂ ಮುನ್ನ ಬೆಸ್ಕಾಂ ಕಚೇರಿ ಆವರಣದಲ್ಲಿ ಸಾಂಕೇತಿಕವಾಗಿ ಮೂರು ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.

    ಸಭೆಯಲ್ಲಿ ಪ್ರಮುಖರಾದ ನಟರಾಜು, ಓಂಕಾರ್ ಮೂರ್ತಿ, ಚಿಕ್ಕತಿಮ್ಮಯ್ಯ, ತಾಲೂಕು ಪಂಚಾಯಿತಿ ವ್ಯವಸ್ಥಾಪಕ ಬಸವರಾಜು ಸೇರಿದಂತೆ ಗ್ಯಾರಂಟಿ ಯೋಜನಾ ಸಮಿತಿಯ ಹಲವು ಸದಸ್ಯರು ಉಪಸ್ಥಿತರಿದ್ದರು.

    ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಕೇವಲ ಗೃಹಲಕ್ಷ್ಮಿ ಯೋಜನೆಯೊಂದರಿಂದಲೇ ತಾಲೂಕಿಗೆ 300 ಕೋಟಿಗೂ ಅಧಿಕ ಹಣ ಬಂದಿದೆ. ಒಟ್ಟಾರೆಯಾಗಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ತಾಲೂಕಿಗೆ ಬರೋಬ್ಬರಿ 700 ಕೋಟಿ ರೂ. ಅನುದಾನ ಹರಿದುಬಂದಿದೆ. ಇದು ಜನಸಾಮಾನ್ಯರ ಜೀವನಮಟ್ಟವನ್ನು ಗಣನೀಯವಾಗಿ ಸುಧಾರಿಸಿದೆ.

    — ಕೆ.ಎಸ್.ಕಿರಣ್ ಕುಮಾರ್, ಮಾಜಿ ಶಾಸಕರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ

    October 11, 2026

    ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ

    October 10, 2026

    ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?

    October 10, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ದಸರಾ ಮಹೋತ್ಸವ–2026ರ ಅಂಗವಾಗಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಕಂದಾಯ, ಯುವಜನ…

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.