ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕು ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಶ್ರಾವಣ ಮಾಸದ 2ನೇ ಶುಕ್ರವಾರ ಆಗಸ್ಟ್ 21ರಂದು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶ್ರೀ ಮಹಾಲಕ್ಷ್ಮಿ ಅಮ್ಮನವರಿಗೆ ವಿಶೇಷ ಹೂವಿನ ಅಲಂಕಾರ, ಪಂಚಾಮೃತ ಅಭಿಷೇಕ, ಮಹಾ ಮಂಗಳಾರತಿ ಸೇರಿದಂತೆ ವಿಶೇಷ ಪೂಜಾ ಸೇವೆಗಳು ಜರುಗಲಿವೆ.
ವಿಶೇಷ ಪೂಜಾ ಕಾರ್ಯಕ್ರಮದ ಪ್ರಯುಕ್ತ ಮಹಾ ಮಂಗಳಾರತಿ ನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ, ಕುಡಿಯುವ ನೀರಿನ ವ್ಯವಸ್ಥೆ, ಸರತಿ ಸಾಲಿನಲ್ಲಿ ಅಮ್ಮನವರ ದರ್ಶನ ವ್ಯವಸ್ಥೆ ಮಾಡಲಾಗುವುದು.
ಅಲ್ಲದೆ, ದಾಸೋಹ ನಿಲಯದಲ್ಲಿ ಬೆಳಿಗ್ಗೆ 7 ರಿಂದ ರಾತ್ರಿ 10 ಗಂಟೆಯವರೆಗೆ ನಿರಂತರವಾಗಿ ತಿಂಡಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಮಹಿಳಾ ಭಕ್ತಾದಿಗಳಿಗೆ ಮಾತೆ ಕಮಲಮ್ಮ ಧ್ವಾನಮಂದಿರದಲ್ಲಿ ಅರಿಶಿನ-ಕುಂಕುಮ, ಹಸಿರು ಬಳೆ ವಿತರಿಸಲಾಗುವುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
