ತುಮಕೂರು: ಕುಣಿಗಲ್ ಪುರಸಭಾ ಮುಕ್ತನಿಧಿಯಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಯೋಜನೆ, ಇತರೆ ಬಡಜನರ ಕಲ್ಯಾಣ ಯೋಜನೆ, ವಿಕಲಚೇತನ ಮತ್ತು ಕ್ರೀಡಾ ಚಟುವಟಿಕೆಯಡಿ ವ್ಯಕ್ತಿ ಸಂಬಂಧಿತ ಕಾರ್ಯಕ್ರಮಗಳಾದ ವಿವಿಧ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ವಿಕಲಚೇತನ ಹಾಗೂ ಇತರೆ ಬಡಜನರ ವಿದ್ಯಾರ್ಥಿಗಳಿಗೆ ಸಹಾಯಧನದ ನೆರವು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ವಿಕಲಚೇತನ ರೋಗಿಗಳಿಗೆ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಗೆ ಧನ ಸಹಾಯ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ವಿಕಲಚೇತನ ಸಣ್ಣ ಉದ್ಯಮೆದಾರರಿಗೆ ಸಹಾಯಧನ, ರಾಜ್ಯ / ರಾಷ್ಟ್ರೀಯ ಕ್ರೀಡೆ / ಕಲೆ / ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಂಗೇತರ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಭಾಗವಹಿಸಿರುವ ಮತ್ತು ಜಯಗಳಿಸಿರುವ ಸ್ಪರ್ಧಾರ್ಥಿಗಳಿಗೆ ಪ್ರೋತ್ಸಾಹಧನದ ನೆರವು ನೀಡಲಾಗುವುದು.
ಭರ್ತಿ ಮಾಡಿದ ಅರ್ಜಿಯನ್ನು ಕುಣಿಗಲ್ ಪುರಸಭಾ ಕಾರ್ಯಾಲಯಕ್ಕೆ ಆಗಸ್ಟ್ 25ರೊಳಗಾಗಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
