ಸರಗೂರು: ಪಟ್ಟಣದ 11ನೇ ವಾರ್ಡಿನ ಬಿಡಗಲು ಗ್ರಾಮದ ಗೇಟ್‌ನಿಂದ ಬಸವೇಶ್ವರ ದೇವಸ್ಥಾನದವರೆಗೆ ₹30 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದ ಸಿಸಿ ರಸ್ತೆ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದೆ.
ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಭಾನುವಾರ ಸ್ಥಳಕ್ಕೆ ಭೇಟಿ ನೀಡಿ, ನಿರ್ಮಿಸಲಾದ ರಸ್ತೆಯ ಗುಣಮಟ್ಟವನ್ನು ಪರಿಶೀಲನೆ ನಡೆಸಿದರು. ಶಾಸಕ ಅನಿಲ್ ಚಿಕ್ಕಮಾದು ಅವರ ಅನುದಾನದಲ್ಲಿ ಕಾಮಗಾರಿಯನ್ನು ಅತ್ಯುತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸಲಾಗಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಿರುವುದಕ್ಕೆ ಮುಖಂಡರು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಶಾಸಕ ಅನಿಲ್ ಚಿಕ್ಕಮಾದು ಅವರು ಸರಗೂರು ಹಾಗೂ ಎಚ್.ಡಿ.ಕೋಟೆ ತಾಲೂಕುಗಳನ್ನು ತಮ್ಮ ಎರಡು ಕಣ್ಣುಗಳಂತೆ ಪರಿಗಣಿಸಿ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದ್ದಾರೆ. ಪಟ್ಟಣದ ವಿವಿಧ ವಾರ್ಡ್‌ಗಳಿಗೆ ಅನುದಾನ ಒದಗಿಸುವುದರ ಜತೆಗೆ ಕಾಡಂಚಿನ ಭಾಗದಲ್ಲಿರುವ ಗ್ರಾಮಗಳ ಪ್ರಗತಿಗೂ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿಕೊಂಡು ಹಂತ ಹಂತವಾಗಿ ವಿವಿಧ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಅಲ್ಲದೆ, ರೈತರು ಹಾಗೂ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಸಾಗುವಳಿ ಪತ್ರಗಳ ವಿತರಣೆ ಹಾಗೂ ಹಲವು ವರ್ಷಗಳಿಂದ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವವರಿಗೆ ಹಕ್ಕುಪತ್ರ ವಿತರಿಸುವ ಕಾರ್ಯಕ್ಕೂ ಶಾಸಕರು ಹೆಚ್ಚಿನ ಆದ್ಯತೆ ನೀಡಿದ್ದಾರೆ.
ಗ್ರಾಮೀಣ ಭಾಗಗಳ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮುಂದಾಗಿರುವುದು ಶ್ಲಾಘನೀಯ ಎಂದರು. ಈ ಪರಿಶೀಲನೆ ವೇಳೆ ಪಟ್ಟಣ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ, ಚೆಲುವ ಕೃಷ್ಣ, ಗುತ್ತಿಗೆದಾರ ಎಸ್.ಎಸ್. ಬಸವರಾಜು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
