nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    • ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ
    • ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    ತುಮಕೂರು August 24, 2026

    ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ

    By Ganesh TumkuruAugust 24, 2026No Comments2 Mins Read
    heggere

    ತುಮಕೂರು: ತುಮಕೂರು ನಗರದ ಭಾಗವಾಗಿರುವ ರೀತಿಯಲ್ಲಿ ಹೆಗ್ಗೇರೆ ಗ್ರಾಮ ಬೆಳವಣಿಗೆಯಾಗುತ್ತಿದೆ. ಹೆಚ್ಚು ಜನ ಇಲ್ಲಿ ಮನೆ ಕಟ್ಟುಕೊಂಡು ವಾಸ ಮಾಡಲು ಆರಂಭಿಸಿದ್ದಾರೆ. ಅವರಿಗೆ ಉತ್ತಮ ರಸ್ತೆ, ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಜವಾಬ್ದಾರಿ, ಆ ಕೆಲಸವನ್ನು ನಾವು ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.

    ತುಮಕೂರು ಗ್ರಾಮಾಂತರ ಕ್ಷೇತ್ರದ ಹೆಗ್ಗೇರೆಯಲ್ಲಿ ಶನಿವಾರ ಸಂಜೆ ನಡೆದ ಸಮಾರಂಭದಲ್ಲಿ ಕೆ.ಆರ್.ಐ.ಡಿ.ಎಲ್. ಯೋಜನೆಯಡಿ 8 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಹೆಗ್ಗೇರೆ ಗ್ರಾಮದ ರಸ್ತೆ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಉಪ ಮುಖ್ಯಮಂತ್ರಿಗಳು, ವೇಗವಾಗಿ ಬೆಳೆಯುತ್ತಿರುವ ಹೆಗ್ಗೇರೆ ಗ್ರಾಮವನ್ನು ಮಾದರಿಯಾಗಿ ರೂಪಿಸಬೇಕು. ಉತ್ತಮ ರಸ್ತೆಗಳ ನಿರ್ಮಾಣ, ಮತ್ತಿತರ ಸೌಕರ್ಯ, ಹೇಮಾವತಿ, ಎತ್ತಿನಹೊಳೆ ಯೋಜನೆಗಳಿಂದ ಕುಡಿಯುವ ನೀರು ಕೊಡಲು ಅವಕಾಶವಿದೆ ಎಂದು ಹೇಳಿದರು.

    ಈ ಭಾಗದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರದ ಅನುದಾನ ಕೋರಿದ್ದೆ. ಈ ಮಧ್ಯೆ ಕೇಂದ್ರ ಸಚಿವ ವಿ. ಸೋಮಣ್ಣನವರು 80 ಕೋಟಿ ವೆಚ್ಚದಲ್ಲಿ ತುಮಕೂರಿನ ಬಟವಾಡಿ–ಮಲ್ಲಸಂದ್ರ ನಡುವಿದ ಹೆದ್ದಾರಿ ಅಭಿವೃದ್ಧಿ ಕಾರ್ಯ ಆರಂಭವಾಗಲು ನೆರವಾದರು. ಇದೇ ರೀತಿಯಲ್ಲಿ ಪಕ್ಷಾತೀತವಾಗಿ ಅಭಿವೃದ್ಧಿ ಕೆಲಸಗಳಾಗಬೇಕು ಎಂದು ಡಾ. ಪರಮೇಶ್ವರ್ ಆಶಿಸಿದರು.

    ತಾವು ಹಿಂದೆ ಉನ್ನತ ಶಿಕ್ಷಣ ಸಚಿವರಾಗಿದ್ದಾಗ ತುಮಕೂರು ಜಿಲ್ಲೆಗೆ ಏನಾದರೂ ಶಾಶ್ವತ ಕೊಡುಗೆ ನೀಡಬೇಕು ಎಂದುಕೊಂಡಿದ್ದೆ, ಆದರೆ ಏನು ಕೊಡುವುದು ಎನ್ನುವಾಗ ಇಲಾಖೆ ಕಾರ್ಯದರ್ಶಿ ತುಮಕೂರು ವಿಶ್ವವಿದ್ಯಾಲಯ ಸ್ಥಾಪಿಸಿ ಎಂದು ಸಲಹೆ ಕೊಟ್ಟರು. ಇಡೀ ದೇಶದಲ್ಲೇ ಒಂದು ಜಿಲ್ಲೆಗೆ ಒಂದು ವಿಶ್ವವಿದ್ಯಾಲಯವಾಗಿ ತುಮಕೂರು ವಿವಿ ಆರಂಭವಾಯಿತು. ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ವಿಶ್ವವಿದ್ಯಾಲಯ ಮಕ್ಕಳಿಗೆ ಶಾಶ್ವತವಾಗಿ ವಿದ್ಯಾಭ್ಯಾಸ ಕೊಡುತ್ತದೆ ಎಂದರು.

    ಶಾಸಕ ಬಿ. ಸುರೇಶ್‌ ಗೌಡ ಮಾತನಾಡಿ, ಡಿಸಿಎಂ ಡಾ. ಪರಮೇಶ್ವರ್ ಅವರದ್ದು ಎಲ್ಲಾ ಪಕ್ಷದವರೂ ಗೌರವ ಕೊಡುವಂತಹ ಸಜ್ಜನ ವ್ಯಕ್ತಿತ್ವ, ಶತ್ರುಗಳೇ ಇಲ್ಲದ ಅಜಾತಶತ್ರು ಇವರು ಎಂದು ಶ್ಲಾಘಿಸಿದರು. ತುಮಕೂರನ್ನು ಬೆಂಗಳೂರಿನ ಮಾದರಿಯಲ್ಲಿ ಅಭಿವೃದ್ಧಿ ಮಾಡಬೇಕು ಎಂಬ ಸಂಕಲ್ಪ ಹೊಂದಿರುವ ಡಾ. ಪರಮೇಶ್ವರ್ ಅವರು ಅನೇಕ ಯೋಜನೆಗಳನ್ನು ರೂಪಿಸಿದ್ದಾರೆ. ಅಭಿವೃದ್ಧಿ ಕಾರ್ಯದಲ್ಲಿ ಪಕ್ಷ ಭೇದ, ರಾಜಕೀಯ ಮಾಡಬಾರದು. ಸಾರ್ವಜನಿಕ ಕೆಲಸಗಳಲ್ಲಿ ಎಲ್ಲರೂ ಒಟ್ಟಾಗಿ ಕೈ ಜೋಡಿಸಬೇಕು ಎಂದು ಹೇಳಿದರು. ಹೆಗ್ಗೇರೆ ಗ್ರಾಮ ನಗರದ ಬಡಾವಣೆ ರೂಪದಲ್ಲಿ ಬೆಳವಣಿಗೆ ಆಗುತ್ತಿದೆ. ತಕ್ಕಂತೆ ನಾಗರಿಕ ಸೌಕರ್ಯ ಒದಗಿಸಬೇಕಾಗಿದೆ. ಅದರ ಪ್ರಯತ್ನವಾಗಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆತಿದೆ. ಈ ಗ್ರಾಮದ ಸುಮಾರು 50 ರಸ್ತೆಗಳನ್ನು ಅಭಿವೃದ್ಧಿಪಡಿಸಿ ನಾಮಫಲಕ ಹಾಕಲು ಗ್ರಾಮ ಪಂಚಾಯಿತಿಯಲ್ಲಿ ತೀರ್ಮಾನಿಸಲಾಗಿದೆ. ಹೆಗ್ಗೇರಿಗೆ ಕುಡಿಯುವ ನೀರು ಸರಬರಾಜು ಮಾಡಲು ದೊಡ್ಡನಾರವಂಗಲಕೆರೆಯ ಯೋಜನೆ ರೂಪಿಸಲಾಗಿದೆ. ಮುಂದಿನ ದಿನಗಳಲ್ಲಿ ಹೆಗ್ಗೇರೆ ಹಾಗೂ ಸುತ್ತಮುತ್ತಲ ಪ್ರದೇಶ ಮತ್ತಷ್ಟು ಅಭಿವೃದ್ಧಿಯಾಗುತ್ತದೆ ಎಂದು ಸುರೇಶ್‌ಗೌಡ ಹೇಳಿದರು.

    ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ, ಕಾಡುಗೊಲ್ಲ ಅಭಿವೃದ್ಧಿ ನಿಗಮ ಅಧ್ಯಕ್ಷ ಮಹೇಶ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ರಾಜಶೇಖರ್, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರಾದ ಗೂಳೂರು ಶಿವಕುಮಾರ್ ಸಿದ್ದೇಗೌಡ, ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷರಾದ ವೆಂಕಟೇಶ್, ನರಸಿಂಹಮೂರ್ತಿ, ಮುಖಂಡರಾದ ಹೊಳಕಲ್ಲು ಅಂಜನಪ್ಪ, ಜಯಂತ್‌ಗೌಡ, ಬಳಗೆರೆ ವೆಂಕಟೇಶ್, ಭೋಜಣ್ಣ, ಹೆತ್ತೇನಹಳ್ಳಿ ವೆಂಕಟೇಶ್, ರಾಜಣ್ಣ, ಕುಮಾರಣ್ಣ, ದೇವರಾಜು, ಮುಕುಲ್, ಮುಬಾರಕ್, ಚಲಪತಿ. ದಯಾನಂದ್, ಜಯಶ್ರೀ, ಸರಸ್ವತಿ, ಜಗದಂಬ, ಶೈಲಜ, ಹೊನ್ನಾಂಬಿಕೆ, ಆನಂದ, ಪವನ್, ಸುಹಾಸ್ ಸೇರಿದಂತೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಸದಸ್ಯರು, ಮುಖಂಡರು ಭಾಗವಹಿಸಿದ್ದರು.

    ವೇಗವಾಗಿ ಬೆಳೆಯುತ್ತಿರುವ ಹೆಗ್ಗೇರೆ ಗ್ರಾಮವನ್ನು ಮಾದರಿಯಾಗಿ ರೂಪಿಸಬೇಕು. ಉತ್ತಮ ರಸ್ತೆಗಳ ನಿರ್ಮಾಣ, ಮತ್ತಿತರ ಸೌಕರ್ಯ, ಹೇಮಾವತಿ, ಎತ್ತಿನಹೊಳೆ ಯೋಜನೆಗಳಿಂದ ಕುಡಿಯುವ ನೀರು ಕೊಡಲು ಅವಕಾಶವಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ತುಮಕೂರು: ಸಹಕಾರಿ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯವಾಗಿದ್ದು, ಆಡಳಿತ ಪಾರದರ್ಶಕವಾಗಿದ್ದಲ್ಲಿ ಆರ್ಥಿಕ ವಹಿವಾಟು ಸುಗಮವಾಗಿ ಸಹಕಾರಿಯು ಸುಸ್ಥಿರವಾಗಿ ಪ್ರಗತಿಪಥದಲ್ಲಿ ನಡೆಯಲು ಸಾಧ್ಯ…

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026

    ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.