ತುಮಕೂರು: ತಾಲೂಕಿನ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮೀಣ ಪ್ರದೇಶದ ಅರ್ಹ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಬಿ ಜಿ ರಾಮ್ ಜಿ ಯೋಜನೆಯಡಿ ಸೆಪ್ಟೆಂಬರ್ 15ರವರೆಗೂ ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಲಾಗುವುದು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀನಾರಾಯಣಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲೂಕಿನಾದ್ಯಂತ ಕಾರ್ಡ್ ವಿತರಿಸಲು ಸೆ.15ರವರೆಗೂ ಜಾಬ್ ಕಾರ್ಡ್ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಹ ಕುಟುಂಬಗಳು ಈ ಮೇಳದಲ್ಲಿ ಭಾಗವಹಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಜಾಬ್ ಕಾರ್ಡ್ ಹೊಂದಿಲ್ಲದ ಅರ್ಹ ಕುಟುಂಬಗಳಿಗೆ ಸ್ಥಳದಲ್ಲೇ ಪರಿಶೀಲಿಸಿ ಹೊಸ ಉದ್ಯೋಗ ಚೀಟಿ ವಿತರಿಸಲಾಗುವುದು.
ಈಗಾಗಲೇ ಜಾಬ್ ಕಾರ್ಡ್ ಹೊಂದಿದ್ದು, ಇ–ಕೆವೈಸಿ ಪ್ರಕ್ರಿಯೆ ಬಾಕಿಯಿರುವವರು ಈ ಮೇಳದಲ್ಲಿ ಇ–ಕೆವೈಸಿ ಪೂರ್ಣಗೊಳಿಸಿಕೊಳ್ಳಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
