nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    ತುಮಕೂರು August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    By Ganesh TumkuruAugust 24, 2026No Comments2 Mins Read

    ತುಮಕೂರು: ಸಹಕಾರಿ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯವಾಗಿದ್ದು, ಆಡಳಿತ ಪಾರದರ್ಶಕವಾಗಿದ್ದಲ್ಲಿ ಆರ್ಥಿಕ ವಹಿವಾಟು ಸುಗಮವಾಗಿ ಸಹಕಾರಿಯು ಸುಸ್ಥಿರವಾಗಿ ಪ್ರಗತಿಪಥದಲ್ಲಿ ನಡೆಯಲು ಸಾಧ್ಯ ಎಂದು ಶ್ರೀ ದೇವಿ ವಿದ್ಯಾ ಸಂಸ್ಥೆ ಅಧ್ಯಕ್ಷರಾದ ಡಾ. ಎಂ.ಆರ್ ಹುಲಿನಾಯ್ಕರ್ ಸಲಹೆ ನೀಡಿದರು.

    ಅವರು ಭಾನುವಾರ ನಗರದ ಶಿರಾ ಗೇಟ್‌ ನ ಕಾಳಿದಾಸ ಪದವಿ ಪೂರ್ವ ಕಾಲೇಜಿನ ಶ್ರೀ ಸಿರಿಯಪ್ಪ ಒಡೆಯರ್ ಸಭಾಂಗಣದಲ್ಲಿ ನಡೆದ ಶ್ರೀ ಕವಿರತ್ನ ಕಾಳಿದಾಸ ಪತ್ತಿನ ಸಹಕಾರ ಸಂಘದ 11 ನೇ ವರ್ಷದ ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಉದ್ಘಾಟನೆ ನೆರವೇರಿಸಿ ಮಾತನಾಡಿ ಈ ಸಂಘವು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದ್ದು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವಿವಿಧ ಸಂಘ ಸಂಸ್ಥೆಗಳ ಮೂಲಕ ಆರ್ಥಿಕ ಭದ್ರತೆ ಹೊಂದಿ ಒಬ್ಬರಿಗೊಬ್ಬರು ಪೂರಕವಾಗಿ ಸಹಾಯಕ ಸಹಕಾರ ನೀಡುವಂತಾಗ ಬೇಕೆಂದರು.

    ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ರೇವಣ್ಣ ಸಿದ್ದೇಶ್ವರ ಮಠದ ಪೀಠಾಧ್ಯಕ್ಷರಾದ ಶ್ರೀ ಬಂಧುಶೇಖರ್ ಒಡೆಯರು ಮಾತನಾಡಿ ಶೇರುದಾರರು, ಠೇವಣಿದಾರರು ಮತ್ತು ಸಾಲಗಾರರ ಸಕಾಲಿಕ ಮರುಪಾವತಿಯಿಂದ ಕವಿರತ್ನ ಕಾಳಿದಾಸ ಸಂಘವು ಉತ್ತಮವಾಗಿ ನಡೆಯುತ್ತಿದ್ದು ಸಂಘದ ಸಾಧಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹಿಸುತ್ತಿರುವುದಕ್ಕೆ ಅಧ್ಯಕ್ಷರಿಗೆ, ಪದಾಧಿಕಾರಿಗಳಿಗೆ ಅಭಿನಂದಿಸಿದರು.

    ಸಮಾರಂಭದಲ್ಲಿ ವಿವಿಧ ಸಾಧನೆ ಮಾಡಿರುವ ಹಾಗೂ ಪ್ರಶಸ್ತಿ ಪಡೆದಿರುವ ನಾಗಮ್ಮ, ನರಸಿಂಹಮೂರ್ತಿ, ಸುನೀತಾನಟರಾಜು, ಡಿ.ಟಿ ಓರಗಲ್ಲಯ್ಯ, ಡಾ.ಗಂಗಾಧರ್ ಕೋಟ್ಯಾವರ್, ಡಾ ಪ್ರಭಾಕರ್ ರೆಡ್ಡಿ, ಡಾ.ನಾಗರಾಜು ಡಾ.ದರ್ಶನ್ ಎಂ.ಧರ್ಮರಾಜ ನಟರಾಜು ಹಾಗೂ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಸಂಘದ ನಿರ್ದೇಶಕರಾದ ಎ. ಆರ್ ವೆಂಕಟೇಶಪ್ಪ ಸನ್ಮಾನಿತರ ಪರವಾಗಿ ಡಾ. ಗಂಗಾಧರ್ ಕೋಟ್ಯಾವರ್ ಮಾತನಾಡಿದರು.

    ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಎಲ್.ಸುಶೀಲಾ, ನಿರ್ದೇಶಕರಾದ ನಟರಾಜ, ವಿ.ಆರ್ ವೆಂಕಟೇಶಪ್ಪ, ಎಸ್.ಆರ್. ಹರೀಶ್, ಡಿ. ಶಿವರಾಜಯ್ಯ, ಸಿ.ಟಿ.ಮುದ್ದುಕುಮಾರ್, ಸಿ.ರಂಗಧಾಮ್ಮಯ್ಯ, ಕೆ.ಎಸ್. ರಾಮಚಂದ್ರಯ್ಯ, ಡಾ.ಸಿ.ಟಿ ಗುರುಪ್ರಕಾಶ್ ಕೆ. ಪುಷ್ಪ, ಟಿ.ಯೋಗೀಶ್, ಕೆ.ವಿರೂಪಾಕ್ಷಪ್ಪ, ಸಿ.ಜಿ ಎಸ್.ಸುರೇಶ್ ಸಿಬ್ಬಂದಿ ವರ್ಗ ಇದ್ದರು. ನಿರ್ದೇಶಕರಾದ ಡಿ. ಶಿವರಾಮಯ್ಯ ಸ್ವಾಗತಿಸಿದರು. ಕೆ.ವಿರೂಪಾಕ್ಷಪ್ಪ ಕಾರ್ಯಕ್ರಮ ನಿರೂಪಿಸಿದರು. ಡಾ.ಸಿ.ಟಿ ಗುರುಪ್ರಕಾಶ್ ವಂದಿಸಿದರು.

    ಆರಂಭಿಕ ವರ್ಷ 2014-15 ರಲ್ಲಿ 60 ಸಾವಿರ ನಿವ್ವಳ ಲಾಭಗಳಿಸಿದ್ದ ಸಂಘವು 2025-26ನೇ ಸಾಲಿಗೆ 53,86,215 ರೂ ನಿವ್ವಳ ಲಾಭ ಗಳಿಸಿ ಪ್ರಗತಿಯತ್ತ ದಾಪುಗಾಲಿರಿಸಿದೆ. ಶೇರುದಾರರ ನಂಬಿಕೆ, ಪ್ರೀತಿ, ಹಾಗೂ ಕಾರ್ಯಕಾರಿ ಮಂಡಳಿಯ ಸಹಕಾರ ಈ ಸಾಧನೆಗೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಸಂಘದ ಲಾಭಾಂಶದಲ್ಲಿ ಸಮಾಜದ ಬಡ ವಿದ್ಯಾರ್ಥಿಗಳ ಶಾಲಾ ಶುಲ್ಕ ಕಟ್ಟಿ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸುವ ಜೊತೆಗೆ ಸಹಕಾರಿಗೂ ಸ್ವಂತ ಕಟ್ಟಡ ನಿರ್ಮಿಸಲಾಗುವುದು.

    — ಎಂ.ಧರ್ಮರಾಜ್, ಅಧ್ಯಕ್ಷರು, ಕವಿರತ್ನ ಕಾಳಿದಾಸ ಪ.ಸ.ಸಂಘ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

     ರಾಘವೇಂದ್ರ ಅಡಿಗ ಎಚ್ಚೆನ್. ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು’ ಚಲನಚಿತ್ರದ ಅಧಿಕೃತ ಶೀರ್ಷಿಕೆ…

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.