nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ
    ಕೊರಟಗೆರೆ August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    By Ganesh TumkuruAugust 25, 2026No Comments2 Mins Read

    ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರಿಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತ ಪಡಿಸಿಕೊಳ್ಳುವಂತೆ ವಿನಂತಿಸಲಾಗಿದ್ದು, ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ 12 ಜನ ಹೆಚ್ಚುವರಿ ಸಹಾಯಕ ಮತದಾರರ ನೋದಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ತಿಳಿಸಿದರು.

    ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

    ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,559 ಮತದಾರರ ಪತ್ತೆಗಾಗಿ ಸಹಾಯಕ ಮತದಾರರ ನೋದಣಾಧಿಕಾರಿಗನ್ನ ನೇಮಿಸಿದ್ದು, ಹಕ್ಕು ಮತ್ತು ಆಕ್ಷೇಪಣೆಗಳ ಕುರಿತು ನೋಟಿಸ್ ನೀಡುವಿಕೆ ಹಾಗೂ ವಿಲೇವಾರಿ ಪ್ರಕ್ರಿಯೆ: 24-08-2026 ರಿಂದ 22-10.-2026  ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಕೈ ಬಿಟ್ಟಿದ್ದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

    ನಿಗದಿತ ಅವಧಿಯೊಳಗೆ ಭರ್ತಿ ಮಾಡಿದ ಎನ್ಯೂಮರೇಷನ್ ನಮೂನೆಯನ್ನು ಸಲ್ಲಿಸಲು ಸಾಧ್ಯವಾಗದ ಮತದಾರರು. ಆ. 24. 2026 ರಿಂದ ಸೆ. 23. 2026 ರವರೆಗೆ ಹಕ್ಕು/ ಆಕ್ಷೇಪಣೆಗಳ ಅವಧಿಯಲ್ಲಿ ನಿಗದಿತ ಘೋಷಣಾ ಪತ್ರದೊಂದಿಗೆ ನಮೂನೆ–6 ಅನ್ನು ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆಗೊಳಿಸಬಹುದು ಎಂದರು.

    ತಹಶೀಲ್ದಾರ್ ಕೆ.ಮಂಜುನಾಥ್ ಮಾತನಾಡಿ, ಯಾವುದೇ ವ್ಯಕ್ತಿಯ ಹೆಸರು ಕರಡು ಮತದಾರರ ಪಟ್ಟಿಯಲ್ಲಿದ್ದು ವಿಚಾರಣೆ ನಂತರ ಮತದಾರರ ಪಟ್ಟಿಯಿಂದ ಕೈಬಿಟ್ಟಲ್ಲಿ, ಮತದಾರ ನೋಂದಣಾಧಿಕಾರಿಯ ಆದೇಶದ ದಿನಾಂಕದಿಂದ 15 ಸಂಬಂಧಿತ ಜಿಲ್ಲಾ ದಂಡಾಧಿಕಾರಿಗಳು/ ಜಿಲ್ಲಾಧಿಕಾರಿಗಳ ಮುಂದೆ ಮೊದಲ ಮೇಲ್ಮನವಿಯನ್ನು ಸಲ್ಲಿಸಬಹುದು. ಮೊದಲ ಮೇಲ್ಮನವಿಯ ಆದೇಶದ ದಿನಾಂಕದಿಂದ 30 ದಿನಗಳೊಳಗೆ, ಮುಖ್ಯ ಚುನಾವಣಾಧಿಕಾರಿಯವರ ಮುಂದೆ ಎರಡನೇ ಮೇಲ್ಮನವಿಯನ್ನು ಸಲ್ಲಿಸಬಹುದು ಎಂದು ತಿಳಿಸಿದರು.

    ನಮೂನೆ 6- ಹೊಸ ಮತದಾರರಾಗಿ ನೋದಾಯಿಸಲು, ನಮೂನೆ 6ಎ – ಹೊಸ ಸಾಗರೋತ್ತರ ಮತದಾರರಾಗಿ ನೋಂದಾಯಿಸಲು, ನಮೂನೆ 7 – ಹೆಸರು ತೆಗೆದುಹಾಕುವಿಕೆ, ನಮೂನೆ 8 -ನಿವಾಸ ಸ್ಥಳ ಬದಲಾವಣೆ/ನಮೂದುಗಳ ತಿದ್ದುಪಡಿ/ಎಪಿಕ್ ಬದಲಾವಣೆ/ಪಿಡಬ್ಲ್ಯೂಡಿ ಗುರುತು ದಾಖಲಿಸುವುದು ಎಂದು ಹೇಳಿದರು.

    ಕೊರಟಗೆರೆ ವಿಧಾಸಭಾ ಕ್ಷೇತ್ರಕ್ಕೆ ಒಟ್ಟು 12 ಜನ ಹೆಚ್ಚುವರಿ ಸಹಾಯಕ ಮತದಾರರ ನೋದಣಾಧಿಕಾರಿಗಳನ್ನ ನೇಮಕ ಮಾಡಿದ್ದು, ಇಒ ಅಪೂರ್ವ ಅನಂತರಾಮು ಅವರು ಹೊಳವನಹಳ್ಳಿ, ಕ್ಯಾಮೇನಹಳ್ಳಿ, ಅಕ್ಕಿರಾಂಪುರ, ಮಾವತ್ತುರು, ತಾಪಂ ಯೋಜನಾಧಿಕಾರಿ ಅರಸಾಪುರ, ದೊಡ್ಡಸಾಗ್ಗೆರೆ, ಬೋಮ್ಮಲದೇವಿಪುರ, ಬೈಚಾಪುರ, ಕೃಷಿ ಅಧಿಕಾರಿ ಕಲ್ಲೇಶ್ ಪ್ರಸಾದ್, ವಡ್ಡಗೆರೆ, ತುಂಬಾಡಿ, ಹಂಚಿಹಳ್ಳಿ, ಬಿ,ಆರ್‌ಸಿ ರುದ್ರೇಶ್, ಪುರಸಭೆ ಕಾರ್ಯಲಯ, ಪಶು ಅಧಿಕಾರಿ ಸುಧಾಕರ್, ಎಲೆರಾಂಪುರ, ನೀಲಗೊಂಡನಹಳ್ಳಿ, ವಜ್ಜನಕುರಿಕೆ, ತೀತಾ, ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಅನಂತರಾಜು, ಪಾತಗಾನಹಳ್ಳಿ, ಚಿನ್ನಹಳ್ಳಿ, ಕೋಳಾಲ, ಸಿಡಿಪಿಒ ಗಂಗಾಧರ್, ಬೆಳದರ, ಓಬಳಪುರ, ಚಿಕ್ಕತೋಟ್ಲುಕೆರೆ, ಪಿಡಬ್ಲ್ಯುಡಿ ಎಇಇ ದೀಪಕ್, ಕೋರಾ, ದೇವಲಾಪುರ, ಕೆಸ್ತೂರು, ರೇಷ್ಮೆ ಇಲಾಖೆಯ ರಾಜಣ್ಣ, ಬ್ಯಾಲ್ಯ, ಗೊಂದಿಹಳ್ಳಿ, ಕೊಡಗದಾಲ, ಜಿಪಂ ಎಇಇ ದಯಾನಂದ್, ಕೊಡ್ಲಾಪುರ, ಕೊಂಡವಾಡಿ, ಪುರವಾರ, ಸಮಾಜ ಕಲ್ಯಾಣಾಧಿಕಾರಿ ಯಮುನಾ ಥರಟಿ, ಬುಕ್ಕಪಟ್ಟಣ, ಕರಂಕೋಟೆ, ತೋವಿನಕೆರೆ, ತಾಪಂ ಲೆಕ್ಕಾಧಿಕಾರಿ ಶ್ರೀಧರ್ ತೋವಿನಕೆರೆ, ಬೂದಗವಿ ಗ್ರಾಪಂ ಗಳಲ್ಲಿ ಇವರುಗಳು ಬೆ.10 ರಿಂದ ಸಂಜೆ 4ಗಂಟೆವರೆಗೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.

    ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಸಮಿತಿಯ ಅಧ್ಯಕ್ಷ ವೆಂಕಟೇಶ್, ಅರವಿಂದ್, ಜೆಡಿಎಸ್ ತಾಲೂಕು ಅಧ್ಯಕ್ಷ ಕಾಮರಾಜು, ಪಿಎಲ್‌ ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ, ಲಕ್ಷ್ಮಣ್, ರಂಗಣ್ಣ, ಚುನಾವಣಾ ಶಿರಸ್ತೆದಾರ್ ಮಂಜುನಾಥ್, ಅರುಣ್‌ ಕುಮಾರ್ ಸೇರಿದಂತೆ ತಾಲೂಕು ಮಟ್ಟದ 12 ಅಧಿಕಾರಿಗಳು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ದಸರಾ ಮಹೋತ್ಸವ–2026ರ ಅಂಗವಾಗಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಕಂದಾಯ, ಯುವಜನ…

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.