nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
    ಕೊರಟಗೆರೆ August 25, 2026

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    By Ganesh TumkuruAugust 25, 2026No Comments2 Mins Read
    arogya thapasane

    ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.

    ನವ ಕರ್ನಾಟಕ ಸಂಘಟನೆ, ತುಮಕೂರು ಇವರ ಸಹಭಾಗಿತ್ವದಲ್ಲಿ ನಡೆದ ಶಿಬಿರದಲ್ಲಿ ನೂರಾರು ಕಟ್ಟಡ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರು ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

    ಕಾರ್ಮಿಕರು ದಿನವಿಡೀ ದುಡಿಮೆಯಲ್ಲಿ ತೊಡಗಿರುವುದರಿಂದ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶಿಬಿರ ಆಯೋಜಿಸಲಾಗಿತ್ತು. ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಲಾಯಿತು. ಆರೋಗ್ಯ ಸಮಸ್ಯೆಗಳು, ದೈಹಿಕ ಆಯಾಸ ಹಾಗೂ ಕೆಲಸದ ಸ್ಥಳದಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲಿಸುವ ಕುರಿತು ವೈದ್ಯರು ಕಾರ್ಮಿಕರಿಗೆ ಸಲಹೆ ನೀಡಿದರು.

     ಆರೋಗ್ಯ ಕಾಳಜಿ ಅಗತ್ಯ:

    ಬ್ಲಾಸೆಮ್ ಹಾಸ್ಪಿಟಲ್‌ ನ ಡಾ.ಪರೀಕ್ಷಿತ್ ಮಾತನಾಡಿ, ಕಟ್ಟಡ ಕಾರ್ಮಿಕರು ಪ್ರತಿನಿತ್ಯ ಕಷ್ಟಪಟ್ಟು ದುಡಿಯುತ್ತಿದ್ದು, ತಮ್ಮ ಆರೋಗ್ಯದ ಬಗ್ಗೆ ಸಮಯ ನೀಡುವುದು ಬಹಳ ಮುಖ್ಯ. ರಾತ್ರಿ 9 ಗಂಟೆಯಾದರೂ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ ಅವರಿಗೆ ಸಂಪೂರ್ಣ ಆರೋಗ್ಯ ಮಾಹಿತಿ ನೀಡುವುದು ನಮ್ಮ ಕರ್ತವ್ಯ. ಯಾವುದೇ ಆರೋಗ್ಯ ಸಮಸ್ಯೆ ಕಂಡುಬಂದರೆ ನಿರ್ಲಕ್ಷ್ಯ ಮಾಡದೆ ಆರಂಭದಲ್ಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು.

    ಸಾಮಾಜಿಕ ಕಾಳಜಿಯ ಕಾರ್ಯಕ್ರಮ:

    ನವ ಕರ್ನಾಟಕ ಕಾರ್ಮಿಕ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಬಿಂದು ಮಾತನಾಡಿ, ಕಾರ್ಮಿಕರು ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದರೆ ದಿನನಿತ್ಯದ ದುಡಿಮೆಯ ನಡುವೆ ಆರೋಗ್ಯದ ಬಗ್ಗೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದ್ದು, ಮುಂದಿನ ದಿನಗಳಲ್ಲಿಯೂ ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಮುಂದುವರಿಸುವ ಉದ್ದೇಶವಿದೆ ಎಂದರು.

    ಕಾರ್ಮಿಕರಿಗೆ ಅನುಕೂಲ:

    ಆರೋಗ್ಯ ತಪಾಸಣೆ ಮಾಡಿಸಿಕೊಂಡ ಕಾರ್ಮಿಕ ಮಹಮ್ಮದ್ ಆರಿಫ್ ಮಾತನಾಡಿ, ಪ್ರತಿದಿನ ಕಟ್ಟಡ ನಿರ್ಮಾಣ ಕೆಲಸಕ್ಕೆ ತೆರಳುವುದರಿಂದ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸಮಯ ಸಿಗುವುದಿಲ್ಲ. ಶಿಬಿರದಲ್ಲಿ ಉಚಿತವಾಗಿ ತಪಾಸಣೆ ಮಾಡಿಸಿಕೊಂಡು ವೈದ್ಯರಿಂದ ಆರೋಗ್ಯದ ಕುರಿತು ಮಾಹಿತಿ ಮತ್ತು ಸಲಹೆ ಪಡೆದುಕೊಂಡಿದ್ದು, ಇಂತಹ ಶಿಬಿರಗಳು ಕಾರ್ಮಿಕರಿಗೆ ಹೆಚ್ಚು ಅನುಕೂಲವಾಗಿವೆ ಎಂದರು.

     ಕಲ್ಯಾಣ ಯೋಜನೆಗಳ ಮಾಹಿತಿ:

    ನವ ಕರ್ನಾಟಕ ನಗರ ಅಧ್ಯಕ್ಷ ಮಲ್ಲೇಶ್ ಮಾತನಾಡಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡಿರುವ ಅರ್ಹ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ವೈದ್ಯಕೀಯ ನೆರವು, ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ನೆರವು, ಅಪಘಾತ ಪರಿಹಾರ, ಮಕ್ಕಳ ಶಿಕ್ಷಣ ಸಹಾಯ, ವಿವಾಹ ಸಹಾಯ ಹಾಗೂ ಪಿಂಚಣಿ ಸೇರಿದಂತೆ ವಿವಿಧ ಕಲ್ಯಾಣ ಸೌಲಭ್ಯಗಳು ಲಭ್ಯವಿವೆ. ಕಾರ್ಮಿಕರು ತಮ್ಮ ನೋಂದಣಿ ಹಾಗೂ ಚಂದಾ ಪಾವತಿ ವಿವರಗಳನ್ನು ಸರಿಯಾಗಿ ನಿರ್ವಹಿಸಿಕೊಂಡು, ತಮಗೆ ದೊರೆಯಬಹುದಾದ ಸೌಲಭ್ಯಗಳ ಕುರಿತು ಕಾರ್ಮಿಕ ಇಲಾಖೆ ಅಥವಾ ಕಲ್ಯಾಣ ಮಂಡಳಿಯಿಂದ ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

    ಕಾರ್ಮಿಕರ ಆರೋಗ್ಯವೇ ಕುಟುಂಬದ ಭದ್ರತೆಯಾಗಿದ್ದು, ದುಡಿಯುವ ಕೈಗಳಿಗೆ ಆರೋಗ್ಯದ ಕಾಳಜಿ ನೀಡುವ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಇನ್ನಷ್ಟು ನಡೆಯಬೇಕು ಎಂದು ಅವರು ಆಶಿಸಿದರು.

    ಕಾರ್ಯಕ್ರಮದಲ್ಲಿ ನವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟದ ಕೊರಟಗೆರೆ ತಾಲೂಕು ಮಹಿಳಾ ಉಪಾಧ್ಯಕ್ಷೆ ಶ್ವೇತಾ, ಸಂಘಟನೆಯ ಸದಸ್ಯರು, ಬ್ಲಾಸೆಮ್ ಹಾಸ್ಪಿಟಲ್ ತಂಡದ ಟೀಮ್ ಲೀಡರ್ ಡಾ. ಅಭಿಷೇಕ್, ಡಾ. ಪ್ರಥಮ್ ಎ. ಪಾಟೀಲ್, ಡಾ. ಪರೀಕ್ಷಿತ್, ನಿರೋಷ, ಲ್ಯಾಬ್ ಟೆಕ್ನಿಷಿಯನ್ ಕೀರ್ತಿ ಸೇರಿದಂತೆ ವೈದ್ಯಕೀಯ ಸಿಬ್ಬಂದಿ ಹಾಗೂ ಕಟ್ಟಡ ಕಾರ್ಮಿಕರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ದಸರಾ ಮಹೋತ್ಸವ–2026ರ ಅಂಗವಾಗಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಕಂದಾಯ, ಯುವಜನ…

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.