ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳು ಆರಂಭಗೊಂಡಿದ್ದು, ಈ ಬಾರಿಯ ದಸರಾ ಉತ್ಸವದಲ್ಲಿ ಕರಾವಳಿಯ ಜನಪ್ರಿಯ ಕ್ರೀಡೆಯಾದ ಕಂಬಳವನ್ನು ಆಯೋಜಿಸಲಾಗುತ್ತದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ದಸರಾ ಗಜಪಯಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಬಾರಿಯ ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಅಧಿಕೃತವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಆಯಾ ಭಾಗದ ಸಂಸ್ಕೃತಿ ಮತ್ತು ಕ್ರೀಡೆಗಳನ್ನು ಪ್ರದರ್ಶಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಮುಖ್ಯಮಂತ್ರಿಗಳ ನಿರ್ಣಯದಂತೆ ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ಕ್ರೀಡೆ ಜರುಗಲಿದೆ ಎಂದು ಅವರು ಪುನರುಚ್ಚರಿಸಿದರು.
ಇದೇ ವೇಳೆ, ಈ ಬಾರಿಯ ದಸರಾ ಮಹೋತ್ಸವದ ಮೊದಲ ಪ್ರಮುಖ ಘಟ್ಟವಾದ ‘ಗಜಪಯಣ’ಕ್ಕೆ ಸಚಿವ ಡಾ. ಯತೀಂದ್ರ ಸಿದ್ಧರಾಮಯ್ಯ ಹಾಗೂ ಇತರ ಗಣ್ಯರು ವೀರನಹೊಸಹಳ್ಳಿಯಲ್ಲಿ ತುಲಾ ಲಗ್ನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹಸಿರು ನಿಶಾನೆ ತೋರಿದರು.
ಮೊದಲ ತಂಡದಲ್ಲಿ ಒಟ್ಟು 9 ಆನೆಗಳು ಮೈಸೂರಿನತ್ತ ಪಯಣ ಬೆಳೆಸಿದವು. ಇದೇ ಸಂದರ್ಭದಲ್ಲಿ ಆರು ಬಾರಿ ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಿನ ಗಮನ ಸೆಳೆದಿದ್ದ ಅತಿ ಹೆಮ್ಮೆಯ ‘ಅಭಿಮನ್ಯು’ ಆನೆಗೆ ವಯೋಸಹಜ ಕಾರಣದಿಂದ ದಸರೆಯಿಂದ ಸಾಂಪ್ರದಾಯಿಕ ಹಾಗೂ ಭಾವುಕ ವಿದಾಯ (ನಿವೃತ್ತಿ) ನೀಡಲಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
