ಹೊಳೆನರಸೀಪುರ: ಪವಿತ್ರ ಈದ್ ಮಿಲಾದ್ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮ ಹಾಗೂ ಮೆರವಣಿಗೆಯಲ್ಲಿ ಭಾಗವಹಿಸಿದ ಹಾಸನ ಸಂಸದ ಶ್ರೇಯಸ್ ಪಟೇಲ್ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದರು.
ಪ್ರವಾದಿ ಹಜರತ್ ಮುಹಮ್ಮದ್ ಪೈಗಂಬರ್ ಅವರ ಜೀವನ ಸಂದೇಶಗಳಾದ ಶಾಂತಿ, ಪ್ರೀತಿ, ಸಹೋದರತ್ವ, ಕರುಣೆ ಮತ್ತು ಮಾನವೀಯತೆ ನಮ್ಮೆಲ್ಲರ ಬದುಕಿಗೆ ಸದಾ ದಾರಿದೀಪವಾಗಲಿ. ಈದ್ ಮಿಲಾದ್ ಹಬ್ಬವು ಸಮಾಜದಲ್ಲಿ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಸಹಬಾಳ್ವೆಯ ಮನೋಭಾವವನ್ನು ಮತ್ತಷ್ಟು ಗಟ್ಟಿಗೊಳಿಸಲಿ. ನಮ್ಮ ನಾಡಿನಲ್ಲಿ ಶಾಂತಿ, ನೆಮ್ಮದಿ ಹಾಗೂ ಏಕತೆ ಸದಾ ನೆಲೆಸಲಿ ಎಂದು ಸಂಸದರು ಹಾರೈಸಿದರು.
ಈ ಸಂದರ್ಭದಲ್ಲಿ ಹೊಳೆನರಸೀಪುರ ತಾಲ್ಲೂಕಿನ ಎಲ್ಲಾ ಮುಸ್ಲಿಂ ಬಾಂಧವರು ಹೆಚ್ಚಿನ ಹಬ್ಬವನ್ನು ಆಚರಿಸಿ ಸಂಭ್ರಮಿಸಿದರು.
ವರದಿ: ಮಂಜುಶ್ರವಣೂರು, ಹೊಳೆನರಸೀಪುರ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
