ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ನೇರಳೆಕೆರೆ ವೃತ್ತದ ನೇರಳೆಕೆರೆ ಗೇಟ್ ಅಂಗನವಾಡಿ ಕೇಂದ್ರದಲ್ಲಿ, ಆಗಸ್ಟ್–2026ರ ಅಂತ್ಯಕ್ಕೆ ಗೌರವ ಸೇವೆಯಿಂದ ವಯೋನಿವೃತ್ತಿ ಹೊಂದಲಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಶುಕ್ರವಾರ (ಆ.28) ಆತ್ಮೀಯ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭವನ್ನು ಅದ್ದೂರಿಯಾಗಿ ಹಮ್ಮಿಕೊಳ್ಳಲಾಯಿತು.
ಕಾಟಗೊಂಡನಹಳ್ಳಿ ಅಂಗನವಾಡಿ ಕಾರ್ಯಕರ್ತೆ ದ್ರಾಕ್ಷಾಯಣಮ್ಮ, ನೇರಳೆಕೆರೆ ಅಂಗನವಾಡಿ ಕಾರ್ಯಕರ್ತೆ ಕಮಲಮ್ಮ, ಜೀವಗೊಂಡನಹಳ್ಳಿ ಅಂಗನವಾಡಿ ಕಾರ್ಯಕರ್ತೆ ಸರಳಮ್ಮ, ಕಾಟಗೊಂಡನಹಳ್ಳಿ ಅಂಗನವಾಡಿ ಸಹಾಯಕಿ ಲಕ್ಷ್ಮೀದೇವಮ್ಮ ಹಾಗೂ ದೊಡ್ಡಗೊಲ್ಲರಹಟ್ಟಿ ಅಂಗನವಾಡಿ ಸಹಾಯಕಿ ಕರಿಯಮ್ಮ ಅವರುಗಳಿಗೆ ಈ ವೇಳೆ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಧುಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಒ ಕುಮಾರ್ ನಾಯಕ್, ಎಸಿಡಿಪಿಒ ಈರಬಸವಯ್ಯ ಹಾಗೂ ನಾಗಭೂಷಣ, ನೇರಳೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭಾರ್ಗವ್, ಕಮ್ಯೂನಿಟಿ ಅಧಿಕಾರಿ ಬಸವರಾಜ್ ಮತ್ತು ನೇರಳೆಕೆರೆ ವೃತ್ತದ ಮೇಲ್ವಿಚಾರಕಿ ಭಾರತಿ ಕೆ. ಉಪಸ್ಥಿತರಿದ್ದರು. ಜತೆಗೆ ನೇರಳೆಕೆರೆ, ರಂಟವಾಳ ಹಾಗೂ ಕೋಟಗಾರಹಳ್ಳಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮತ್ತು ಮಕ್ಕಳು ಪಾಲ್ಗೊಂಡಿದ್ದರು.
ಹಲವು ವರ್ಷಗಳ ಕಾಲ ಮಕ್ಕಳ ಪೌಷ್ಟಿಕತೆ, ಆರೋಗ್ಯ, ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ನಿವೃತ್ತ ಸಿಬ್ಬಂದಿ ಸಲ್ಲಿಸಿದ ಸೇವೆಯನ್ನು ಈ ವೇಳೆ ಸ್ಮರಿಸಲಾಗಿದ್ದು, ಅವರ ಮುಂದಿನ ನಿವೃತ್ತಿ ಜೀವನ ಸುಖ ಹಾಗೂ ಸಂತೋಷದಿಂದ ಕೂಡಿರಲಿ ಎಂದು ಎಲ್ಲರೂ ಶುಭ ಹಾರೈಸಿದರು.
ನೇರಳೆಕೆರೆ ಅಂಗನವಾಡಿ ಕಾರ್ಯಕರ್ತೆ ಪವಿತ್ರ ಅವರು ಕಾರ್ಯಕ್ರಮವನ್ನು ಸ್ವಾಗತಿಸಿ, ಕೊನೆಯಲ್ಲಿ ವಂದನಾರ್ಪಣೆ ಸಲ್ಲಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
