ಬೆಂಗಳೂರು: ರಾಜಧಾನಿಯಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಬೆಂಗಳೂರು ಪೊಲೀಸರು ಗಡಿಪಾರು (Deport) ಮಾಡಿದ್ದಾರೆ.
ಬೆಂಗಳೂರಿನ ವಿವಿಧ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಂಧಿತರಾಗಿರುವ ಈ ಎಲ್ಲಾ ಬಾಂಗ್ಲಾ ಪ್ರಜೆಗಳನ್ನು ಬಿಗಿ ಭದ್ರತೆಯೊಂದಿಗೆ ಪಶ್ಚಿಮ ಬಂಗಾಳದ ಗಡಿ ಭಾಗಕ್ಕೆ ಕರೆದೊಯ್ಯಲಾಗುತ್ತಿದೆ.
ಬೆಳ್ಳಂಬೆಳಗ್ಗೆಯೇ ಸುಮಾರು 20 ಪೊಲೀಸ್ ಸಿಬ್ಬಂದಿಯ ಬಿಗಿ ಭದ್ರತೆಯಲ್ಲಿ 31 ಮಂದಿಯನ್ನು ಬೆಂಗಳೂರಿನ ಎಸ್ಎಂವಿಟಿ (SMVT) ರೈಲ್ವೆ ಟರ್ಮಿನಲ್ ಮೂಲಕ ರೈಲಿನಲ್ಲಿ ಕರೆದೊದಲಾಗಿದೆ. ನಾಳೆ ಸಂಜೆ 5 ಗಂಟೆ ವೇಳೆಗೆ ಪೊಲೀಸ್ ಸಿಬ್ಬಂದಿ ಬಾಂಗ್ಲಾದೇಶದ ಗಡಿ ಸಮೀಪದ ಪಶ್ಚಿಮ ಬಂಗಾಳದ ಮಾಲ್ದಾ ತಲುಪುವ ನಿರೀಕ್ಷೆಯಿದ್ದು, ಅಲ್ಲಿಂದ ನಿಯಮಾನುಸಾರ ಮುಂದಿನ ಗಡಿಪಾರು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
