nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ

    August 31, 2026

    ರಾಮನಗರದಲ್ಲಿ ಭಾರೀ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದ ಐವರು ವಶಕ್ಕೆ

    August 31, 2026

    ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!

    August 31, 2026
    Facebook Twitter Instagram
    ಟ್ರೆಂಡಿಂಗ್
    • ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ
    • ರಾಮನಗರದಲ್ಲಿ ಭಾರೀ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದ ಐವರು ವಶಕ್ಕೆ
    • ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಸಚಿವ ಈಶ್ವರ್ ಖಂಡ್ರೆಗೆ ಮನವಿ
    • ಬೆಂಗಳೂರಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು
    • ಮೈಸೂರು ದಸರಾ 2026: ಪ್ರಥಮ ಹಂತದ ಗಜಪಡೆಯ ತೂಕ ಪರೀಕ್ಷೆ; 5,770 ಕೆಜಿ ತೂಕದೊಂದಿಗೆ ‘ಶ್ರೀಕಂಠ’ ಅತ್ಯಂತ ಭಾರವಾದ ಆನೆ!
    • ಸರಗೂರು: ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಸಂಸದ ಸುನೀಲ್ ಬೋಸ್ ಹುಟ್ಟುಹಬ್ಬ ಆಚರಣೆ
    • PGಯ 7ನೇ ಮಹಡಿಯಿಂದ ಜಿಗಿದು ಸಾಫ್ಟ್’ವೇರ್ ಇಂಜಿನಿಯರ್ ಯುವತಿ ಸಾವು, ಪ್ರಿಯಕರನ ಸ್ಥಿತಿ ಗಂಭೀರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಸಚಿವ ಈಶ್ವರ್ ಖಂಡ್ರೆಗೆ ಮನವಿ
    ಜಿಲ್ಲಾ ಸುದ್ದಿ August 31, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಸಚಿವ ಈಶ್ವರ್ ಖಂಡ್ರೆಗೆ ಮನವಿ

    By Ganesh TumkuruAugust 31, 2026No Comments2 Mins Read
    eshwar khandre

    ಸರಗೂರು: ಮೈಸೂರಿಗೆ ಆಗಮಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರನ್ನು ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಸೋಮವಾರ ಭೇಟಿ ಮಾಡಿದರು. ಸರಗೂರು ಹಾಗೂ ಹೆಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸೂಕ್ತ ಶಿಫಾರಸು ಮಾಡುವಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಮನವಿ ಸಲ್ಲಿಸಿದರು.

    ಈ ವೇಳೆ ಮಾತನಾಡಿದ ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ವೀರಶೈವ ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಮನುಗನಹಳ್ಳಿ ಗುರುಸ್ವಾಮಿ, ಶಾಸಕ ಅನಿಲ್ ಚಿಕ್ಕಮಾದು ಅವರು ಹಿಂದುಳಿದ ತಾಲೂಕುಗಳಾದ ಸರಗೂರು ಹಾಗೂ ಹೆಚ್.ಡಿ.ಕೋಟೆ ಭಾಗಗಳಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದಿಂದ ಗೆಲುವು ಸಾಧಿಸಿರುವ ಅವರಿಗೆ ಸಚಿವ ಸ್ಥಾನ ನೀಡಿದರೆ ಈ ಭಾಗದ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಹೇಳಿದರು. ಅಲ್ಲದೆ, ಅನಿಲ್ ಚಿಕ್ಕಮಾದು ಅವರು ಹಿಂದುಳಿದ ಪ್ರದೇಶದ ಯುವಕರಿಗೆ, ರೈತರಿಗೆ ಹಾಗೂ ಸಾಮಾನ್ಯ ಜನರಿಗೆ ಸ್ಪಂದಿಸುವ ಜನಪ್ರತಿನಿಧಿಯಾಗಿದ್ದು, ಅವರಿಗೆ ಸಚಿವ ಸ್ಥಾನ ದೊರೆತರೆ ಮೈಸೂರು ಜಿಲ್ಲೆಯ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಸಿಗಲಿದೆ ಎಂದು ಒತ್ತಾಯಿಸಿದರು.

    ಇದೇ ವೇಳೆ ಸರಗೂರು ಪಟ್ಟಣದ ವಿವೇಕಾನಂದ ಆಸ್ಪತ್ರೆ ಪಕ್ಕದಲ್ಲಿ ವೀರಶೈವ ಲಿಂಗಾಯತ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡುವಂತೆ ಸಚಿವರಿಗೆ ಮನವಿ ಮಾಡಲಾಗಿದ್ದು, ಸಮಾಜದ ಏಳಿಗೆ ಹಾಗೂ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರದ ವತಿಯಿಂದ ಅಗತ್ಯ ಸಹಕಾರ ನೀಡುವಂತೆ ಮುಖಂಡರು ಕೋರಿದರು.

    ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು ಎಂಬ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸುವುದಾಗಿ ತಿಳಿಸಿದರು. ಜೊತೆಗೆ, ಸಮಾಜದ ಮುಖಂಡರು ಸಲ್ಲಿಸಿರುವ ಮನವಿಗಳನ್ನು ಪರಿಶೀಲಿಸಿ ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ ವರುಣ ಮಹೇಶ್, ಮಹಾಸಭಾ ಸಹ ಕಾರ್ಯದರ್ಶಿ ಬಸವರಾಜು, ಮುಖಂಡರಾದ ನಂದೀಶ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ರಾಮನಗರದಲ್ಲಿ ಭಾರೀ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದ ಐವರು ವಶಕ್ಕೆ

    August 31, 2026

    ಸರಗೂರು: ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಸಂಸದ ಸುನೀಲ್ ಬೋಸ್ ಹುಟ್ಟುಹಬ್ಬ ಆಚರಣೆ

    August 31, 2026

    ಅರಕಲಗೂಡು: ಕುಡಿಯುವ ನೀರಿಗೆ ಹಾಹಾಕಾರ, ಜನ ಜಾನುವಾರುಗಳು ಕಂಗಾಲು

    August 30, 2026

    Leave A Reply Cancel Reply

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ

    August 31, 2026

    ಬಳ್ಳಾರಿ:  ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯಲ್ಲಿ ಪರಿಹಾರ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ನೂತನವಾಗಿ…

    ರಾಮನಗರದಲ್ಲಿ ಭಾರೀ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದ ಐವರು ವಶಕ್ಕೆ

    August 31, 2026

    ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!

    August 31, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಸಚಿವ ಈಶ್ವರ್ ಖಂಡ್ರೆಗೆ ಮನವಿ

    August 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.