ತುಮಕೂರು: ನೇಪಾಳದ ಪ್ರವಾಹದಲ್ಲಿ ಯು.ಎಸ್ ಪೌರತ್ವ ಹೊಂದಿರುವ ತುಮಕೂರು ಮೂಲದ ಇಬ್ಬರು ನಾಪತ್ತೆಯಾಗಿದ್ದಾರೆ. ತುಮಕೂರು ನಗರದ ನೃಪತುಂಗನ ಬಡಾವಣೆಯ ರಂಗುಸುಧೀರ್ (53), ಕೀರ್ತಿ ಆಚಾರ್ಯ (50) ನಾಪತ್ತೆಯಾಗಿದ್ದಾರೆ.
ಯು.ಎಸ್.ನಲ್ಲಿ ಸಾಫ್ಟ್’ವೇರ್ ಇಂಜಿನಿಯರ್ ಆಗಿರುವ ಇವರು ಆಗಸ್ಟ್ 22ರಂದು ಯು.ಎಸ್‌ನಿಂದ 10 ಜನರ ತಂಡ ನೇಪಾಳಕ್ಕೆ ಹೊರಟಿದ್ದರು.
26ರ ಬೆಳಗ್ಗೆ 8:29ರಂದು ಸಂಬಂಧಿ ಗುರುಪ್ರಸಾದ್ ಎನ್ನುವವರಿಗೆ ಕೊನೆಯ ಕಾಲ್ ಮಾಡಿದ್ದರು. ಅಲ್ಲಿಂದ ಸಂಪರ್ಕಕ್ಕೆ ಸಿಗುತ್ತಿಲ್ಲ. ಪರಿಣಾಮ ಅವರ ತುಮಕೂರಿನ ಮನೆಯ ಸದಸ್ಯರಲ್ಲಿ ಆತಂಕ ಎದುರಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
