ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗೌರಿ-ಗಣೇಶ ವಿಗ್ರಹಗಳನ್ನು ತಯಾರಿಸುವ / ಮಾರಾಟ ಮಾಡುವ ಮಾಲೀಕರು ನಿಗದಿತ ಸ್ಥಳಗಳಲ್ಲಿ ಮಾತ್ರ ಮಾರಾಟ ಮಾಡಬೇಕೆಂದು ಮಹಾನಗರಪಾಲಿಕೆ ಸೂಚನೆ ನೀಡಿದೆ.
ಪಿ.ಒ.ಪಿ. ನಿರ್ಮಿತ ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಮತ್ತು ಬಣ್ಣಲೇಪಿತ ವಿಗ್ರಹಗಳ ಮಾರಾಟ ಹಾಗೂ ವಿಸರ್ಜನೆ ಮಾಡುವುದನ್ನು ನಿಷೇಧಿಸಲಾಗಿದೆ. ಗೌರಿ/ಗಣೇಶ ಹಬ್ಬದ ಪ್ರಯುಕ್ತ ಸಂಪೂರ್ಣವಾಗಿ ಮಣ್ಣಿನಿಂದ ವಿಗ್ರಹಗಳನ್ನು ತಯಾರಿಸುವಂತೆ ಹಾಗೂ ಮಾರಾಟ ಮಾಡುವಂತೆ ಈ ಮೂಲಕ ಸೂಚಿಸಲಾಗಿದೆ. ಗಣೇಶ ಮೂರ್ತಿಗಳನ್ನು ಮಾರಾಟ ಮಾಡುವ ಮಾರಾಟಗಾರರು ಕಡ್ಡಾಯವಾಗಿ ಪಾಲಿಕೆ ವತಿಯಿಂದ ಅನುಮತಿ ಪಡೆಯಬೇಕು.
ಗೌರಿ–ಗಣೇಶ ಮೂರ್ತಿಗಳನ್ನು ಕ್ಯಾತ್ಸಂದ್ರದ ಸರ್ಕಾರಿ ಹೈಸ್ಕೂಲ್ ಆವರಣ, ಕುಣಿಗಲ್ ರಸ್ತೆ ಹೈ–ಟೆನ್ಷನ್ ತಂತಿ ಪಕ್ಕದ ಖಾಸಗಿ ಜಾಗ, ಸರ್ಕಾರಿ ಜೂನಿಯರ್ ಕಾಲೇಜು ಮೈದಾನ, ಶಿರಾ ಗೇಟ್ ಅರಳೇಮರದ ಪಾಳ್ಯದ ರೇಣುಕಾ ಎಲ್ಲಮ್ಮ ದೇವಸ್ಥಾನದ ಬಳಿ ಹಾಗೂ ಶಿರಾ ಗೇಟ್ ಸರ್ಕಲ್‌ನ ಏಕನಾಥೇಶ್ವರಿ ದೇವಸ್ಥಾನದ ಬಳಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ಅನುಮತಿ ಪಡೆಯದೇ ಎಲ್ಲೆಂದರಲ್ಲಿ ಮಾರಾಟ ಮಾಡಿದ್ದಲ್ಲಿ ಪಾಲಿಕೆ ವತಿಯಿಂದ ತೆರವುಗೊಳಿಸಲಾಗುವುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
