ತುಮಕೂರು: ಇತ್ತೀಚಿನ ದಿನಗಳಲ್ಲಿ ನೀರು ಸಂಗ್ರಹ ತೊಟ್ಟಿಯಲ್ಲಿ ಸ್ವಚ್ಛತೆಯನ್ನು ಕಾಪಾಡುವುದರ ಜೊತೆಗೆ ತಮ್ಮ ತಮ್ಮ ಮನೆ, ಗ್ರಾಮಗಳಲ್ಲಿ ಪರಿಸರ ಸ್ವಚ್ಛತೆಯಾಗಿ ಇಟ್ಟುಕೊಂಡರೆ ಯಾವುದೇ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡಲು ಅವಕಾಶವಿರುವುದಿಲ್ಲ. ಕೋವಿಡ್-19 ನಿರ್ವಹಣೆಯ ಒತ್ತಡದ ಮಧ್ಯೆಯೂ ರೋಗ ವಾಹಕ ಜೀವಿಗಳಿಂದ ಹರಡುವ ರೋಗಗಳಾದ ಮಲೇರಿಯಾ, ಡೆಂಗೆ ಹಾಗೂ ಚಿಕುನ್ ಗುನ್ಯದಂತಹ ಕಾಯಿಲೆಗಳನ್ನು ತಡೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವುದರಲ್ಲಿ ವರದರಾಜ ಪ್ಯಾರಾಮೆಡಿಕಲ್ ಅಂಡ್ ಅಲೈಡ್ ಹೆಲ್ತ್ ಸೈನ್ಸ್ ಮುಂಚೂಣಿಯಲ್ಲಿದೆ ಎಂದು ಕಾರ್ಯಕ್ರಮದಲ್ಲಿ ವರದರಾಜ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವರುಣ್ ಅಣ್ಣೇಗೌಡ ತಿಳಿಸಿದರು.
ನಗರದ ಹೆಗ್ಗೆರೆ ಹೊರವಲಯದ ಜಯನಗರ ದಕ್ಷಿಣದಲ್ಲಿರುವ ವರದರಾಜ ಚಾರಿಟಬಲ್ ಟ್ರಸ್ಟ್ ನ ವತಿಯಿಂದ ವರದರಾಜ ಪ್ಯಾರಾಮೆಡಿಕಲ್ ಅಂಡ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ವತಿಯಿಂದ ಕೇಂದ್ರ ಕೊಟ್ಟಗೆ ಗೊಲ್ಲಹಳ್ಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತುಮಕೂರು ಹಾಗೂ ಮಂಡಲ ಪಂಚಾಯಿತಿ ಕೆಸರಮಡು, ಬೊಮ್ಮನಹಳ್ಳಿ ಪ್ರಾಥಮಿಕ ಆರೋಗ್ಯ ತುಮಕೂರು ಇವರಗಳ ಸಹಯೋಗದೊಂದಿಗೆ ಮಲೇರಿಯಾ ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಲೇರಿಯಾ ನಿರೀಕ್ಷಕರಾದ ರಮೇಶ್ವರವರು ಮಾತನಾಡುತ್ತಾ ಮಲೇರಿಯಾ ನಿಯಂತ್ರಣದಲ್ಲಿ ಸಾರ್ವಜನಿಕರ ಸಹಭಾಗಿತ್ವ, ಪರಿಸರ ಸ್ವಚ್ಛತೆ ಹಾಗೂ ಸೊಳ್ಳೆ ಉತ್ಪತ್ತಿಯನ್ನು ತಡೆಗಟ್ಟುವ ಕ್ರಮಗಳ ಮಹತ್ವವನ್ನು ತಿಳಿಸಿದರು.
ಇದೇ ಸಂದರ್ಭದಲ್ಲಿ ವರದರಾಜ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಡಾ.ಮುಬಾರಕ್ರವರು ಮಾತನಾಡುತ್ತಾ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಾರ್ವಜನಿಕರು ಜಾಥಾದಲ್ಲಿ ಭಾಗವಹಿಸಿದರು. ಜಾಥಾ ಬೊಮ್ಮನಹಳ್ಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಲೇರಿಯಾ ತಡೆಗಟ್ಟುವಿಕೆ ಹಾಗೂ ಸೊಳ್ಳೆ ನಿಯಂತ್ರಣದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಬೊಮ್ಮನಹಳ್ಳಿ ಪ್ರಾಥಮಿಕ ಆರೋಗ್ಯ ಸಾರ್ವಜನಿಕರಲ್ಲಿ ಮಲೇರಿಯಾ ರೋಗದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಮಲೇರಿಯಾ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿಆಯೋಜಿಸಲಾಯಿತು. ಮಲೇರಿಯಾ ರೋಗದ ಗುಣಲಕ್ಷಣಗಳನ್ನು ಮುನ್ನೆಚ್ಚರಿಕೆ ಕ್ರಮಗಳನ್ನು ಮಲೇರಿಯಾ ತಡೆಗಟ್ಟುವ ವಿಧಾನಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಂತಹ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ನೀಡಿದರು.
ವರದರಾಜ ಪ್ಯಾರಾಮೆಡಿಕಲ್ ಅಂಡ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಪ್ರಾಚಾರ್ಯ ಪ್ರೊ. ಮೊಹಮ್ಮದ್ ಆಲಿರವರು ಮಾತನಾಡಿ, ಮಲೇರಿಯಾ ಜಾಗೃತಿ ಘೋಷಣೆಗಳನ್ನು ಕೂಗಿ, ಮನೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸ್ವಚ್ಛತೆ ಕಾಪಾಡುವುದು ಹಾಗು ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟುವ ಅಗತ್ಯತೆಯ ಕುರಿತು ಸಾರ್ವಜನಿಕರಿಗೆ ಸಂದೇಶ ನೀಡಿದರು. ಬೊಮ್ಮನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾದ ಈ ಮಲೇರಿಯಾ ಜಾಗೃತಿ ಕಾರ್ಯಕ್ರಮವು ಸಾರ್ವಜನಿಕರಲ್ಲಿ ರೋಗದ ಕುರಿತು ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸಿತ್ತು. ನಂತರ ಮಲೇರಿಯಾ ರೋಗದ ಕಾರಣಗಳು, ಲಕ್ಷಣಗಳು, ತಡೆಗಟ್ಟುವ ಕ್ರಮಗಳು ಹಾಗೂ ಸಾಂಕಳ ರೋಗನಿರ್ಣಯ ಮತ್ತು ಚಿಕಿತ್ಸೆಯ ಮಹತ್ವದ ಕುರಿತು ಜಾಗೃತಿ ಉಪನ್ಯಾಸ ನೀಡಲಾಯಿತು.
ಕಾರ್ಯಕ್ರಮದಲ್ಲಿ ಆಯೋಜಕರಾದ ಸಂದೀಪ್ ಎಲ್.ಜಿ, ಕೊಟ್ಟಗೆ ಗೊಲ್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಶ್ರೀನಿವಾಸ್, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿಯವರು, ಬೊಮ್ಮನಹಳ್ಳಿ ಗ್ರಾಮದ ನಾಗರಿಕರು, ವರದರಾಜ ಸಂಸ್ಥೆಯ ವಿದ್ಯಾರ್ಥಿ- ವಿದ್ಯಾರ್ಥಿನಿಯರು, ಬೋಧಕ-ಬೋಧಕೇತರ ಸಿಬ್ಬಂದಿ ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
