ಬೀದರ್: ತಾಲೂಕಿನ ಸುಂಧಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಕಸಿತ ಭಾರತ-–ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಬುಧವಾರ ವಿಶೇಷ ಜಾಬ್ ಕಾರ್ಡ್ ಮೇಳ ಹಾಗೂ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ವಿಬಿ–ಜಿ ರಾಮ್ ಜಿ (VB-G RAM G) ಯೋಜನೆಯಡಿ ವಾರ್ಷಿಕ ಉದ್ಯೋಗದ ದಿನಗಳನ್ನು 100ರಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ಪ್ರತಿದಿನ ರೂ. 382 ರಂತೆ ಕೂಲಿ ನೀಡಲಾಗುತ್ತಿದ್ದು, ಪೂರ್ಣ 125 ದಿನಗಳ ಉದ್ಯೋಗ ಪಡೆದ ಕುಟುಂಬವು ಗರಿಷ್ಠ ರೂ. 47,750 ವರೆಗೆ ಕೂಲಿ ಪಡೆಯಬಹುದು ಎಂದು ತಾಲೂಕು ಪಂಚಾಯತಿ ಮಾಹಿತಿ, ಶಿಕ್ಷಣ ಮತ್ತು ಸಂವಹನಾಧಿಕಾರಿ ಅಂಬಾದಾಸ ಪಾಟೀಲ್ ತಿಳಿಸಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಶ್ರೀಪತರಾವ ಚಿಟಗೀರೆ ಮಾತನಾಡಿ, ಜಾಬ್ ಕಾರ್ಡ್ ಹೊಂದಿರುವ ಮಹತ್ವ, ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವ ವಿಧಾನ ಹಾಗೂ ಕೆಲಸದ ಸ್ಥಳದಲ್ಲಿ ಹಾಜರಾತಿ ಕುರಿತು ಸವಿಸ್ತಾರವಾಗಿ ವಿವರಿಸಿದರು.
ಈ ಜಾಗೃತಿ ಕಾರ್ಯಕ್ರಮದಲ್ಲಿ ಮಾರುತಿ ಶಿಂಗೋಡೆ, ಚಂದ್ರಶೇಖರ ಮಾಲಿ ಪಾಟೀಲ್, ಶಿವಕುಮಾರ್ ಪಾಟೀಲ್, ಕಾಶಿನಾಥ ಪಾಟೀಲ್, ಸಂಗಶೆಟ್ಟಿ ಭಾಲ್ಕೆ, ಸಂಗೊಂಡಾ ಮೇತ್ರೆ, ಮಹೇಶ್ ಪಾಟೀಲ್, ಸೋಪಾನ ಶಿಂಗೋಡೆ ಸೇರಿದಂತೆ ಎನ್ಆರ್ಎಲ್ಎಂ (NRLM) ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲೀಗೆ, ಬೀದರ್ ಜಿಲ್ಲೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
