ಅರಕಲಗೂಡು: ತಾಲ್ಲೂಕಿನ ಕೊಣನೂರು ಹೋಬಳಿಯ ಕಡುವಿನಹೊಸಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಅಗ್ನಿ ದುರಂತವೊಂದರಲ್ಲಿ ರೈತರಿಗೆ ಸೇರಿದ ತಂಬಾಕು ಬ್ಯಾರಲ್ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ವರದಿಯಾಗಿದೆ.
ಗ್ರಾಮದ ಪುಟ್ಟೇಗೌಡ ಎಂಬುವರಿಗೆ ಸೇರಿದ ತಂಬಾಕು ಬ್ಯಾರಲ್ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಪರಿಣಾಮವಾಗಿ ಬ್ಯಾರಲ್ ನಲ್ಲಿದ್ದ ತಂಬಾಕು ಹಾಗೂ ಇಡೀ ಕಟ್ಟಡ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಕುಟುಂಬಕ್ಕೆ ಭಾರಿ ನಷ್ಟವುಂಟಾಗಿದೆ.
ತಿಳಿದು ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಅರಕಲಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷರಾದ ಹೆಚ್.ಪಿ. ಶ್ರೀಧರ್ ಗೌಡ ಅವರು ಹಾನಿಗೊಳಗಾದ ಸ್ಥಳವನ್ನು ಪರಿಶೀಲಿಸಿದರು.
ಅಗ್ನಿ ಅವಘಡದಿಂದ ಕಂಗಾಲಾಗಿರುವ ಸಂತ್ರಸ್ತ ಕುಟುಂಬದ ಸದಸ್ಯರಿಗೆ ಧೈರ್ಯತುಂಬಿ, ಸರ್ಕಾರದ ವತಿಯಿಂದ ಸಿಗಬೇಕಾದ ಸೂಕ್ತ ಪರಿಹಾರ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.
ವರದಿ: ಮಂಜು ಶ್ರವಣೂರು, ಹೊಳೆನರಸೀಪುರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
