nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದೇಶದಲ್ಲಿ ಉನ್ನತ ವ್ಯಾಸಂಗ: ಹೊಳೆನರಸೀಪುರದಲ್ಲಿ ‘ವಿದೇಶದಲ್ಲಿ ಅಧ್ಯಯನ 2026’ ಕಾರ್ಯಕ್ರಮದ ಪ್ರಚಾರಕ್ಕೆ ಚಾಲನೆ

    September 4, 2026

    ನಿವೇಶನ ವಿತರಣೆಗೆ ಕ್ರಮ ಕೈಗೊಳ್ಳಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆ.ಎನ್.ರಾಜಣ್ಣ ಸೂಚನೆ

    September 4, 2026

    ಮಧುಗಿರಿ: ಸಂಬಳ ಬಿಡುಗಡೆಯಾಗದ ಸಂಕಷ್ಟದಲ್ಲಿ 10 ಗ್ರಾ.ಪಂ. ನೌಕರರು: ಜೀವನ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣ!

    September 4, 2026
    Facebook Twitter Instagram
    ಟ್ರೆಂಡಿಂಗ್
    • ವಿದೇಶದಲ್ಲಿ ಉನ್ನತ ವ್ಯಾಸಂಗ: ಹೊಳೆನರಸೀಪುರದಲ್ಲಿ ‘ವಿದೇಶದಲ್ಲಿ ಅಧ್ಯಯನ 2026’ ಕಾರ್ಯಕ್ರಮದ ಪ್ರಚಾರಕ್ಕೆ ಚಾಲನೆ
    • ನಿವೇಶನ ವಿತರಣೆಗೆ ಕ್ರಮ ಕೈಗೊಳ್ಳಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆ.ಎನ್.ರಾಜಣ್ಣ ಸೂಚನೆ
    • ಮಧುಗಿರಿ: ಸಂಬಳ ಬಿಡುಗಡೆಯಾಗದ ಸಂಕಷ್ಟದಲ್ಲಿ 10 ಗ್ರಾ.ಪಂ. ನೌಕರರು: ಜೀವನ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣ!
    • ಬಿಎಂಐಸಿ ಯೋಜನೆ: ಜಮೀನು ಕಳೆದುಕೊಂಡ 1,453 ಬಿಡದಿ ರೈತರಿಗೆ 2 ತಿಂಗಳಲ್ಲಿ ನಿವೇಶನ ಹಂಚಿಕೆ: ಡಿಸಿಎಂ ಪರಮೇಶ್ವರ್ ಘೋಷಣೆ
    • ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ
    • ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ
    • ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು
    • ಸರಗೂರು: ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದೇಶದಲ್ಲಿ ಉನ್ನತ ವ್ಯಾಸಂಗ: ಹೊಳೆನರಸೀಪುರದಲ್ಲಿ ‘ವಿದೇಶದಲ್ಲಿ ಅಧ್ಯಯನ 2026’ ಕಾರ್ಯಕ್ರಮದ ಪ್ರಚಾರಕ್ಕೆ ಚಾಲನೆ
    ಜಿಲ್ಲಾ ಸುದ್ದಿ September 4, 2026

    ವಿದೇಶದಲ್ಲಿ ಉನ್ನತ ವ್ಯಾಸಂಗ: ಹೊಳೆನರಸೀಪುರದಲ್ಲಿ ‘ವಿದೇಶದಲ್ಲಿ ಅಧ್ಯಯನ 2026’ ಕಾರ್ಯಕ್ರಮದ ಪ್ರಚಾರಕ್ಕೆ ಚಾಲನೆ

    By Ganesh TumkuruSeptember 4, 2026No Comments2 Mins Read

    ಹೊಳೆನರಸೀಪುರ: ಕರ್ನಾಟಕ ಸರ್ಕಾರದ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ (KSDC) ವತಿಯಿಂದ ಆಯೋಜಿಸಲಾಗಿರುವ ‘ವಿದೇಶದಲ್ಲಿ ಅಧ್ಯಯನ 2026’ ಬೃಹತ್ ಕಾರ್ಯಕ್ರಮದ ಕುರಿತು ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಅಧಿಕಾರಿಗಳು ತಾಲೂಕಿನಲ್ಲಿ ವ್ಯಾಪಕ ಪ್ರಚಾರ ಕೈಗೊಂಡಿದ್ದಾರೆ.

    ಈ ಸಂಬಂಧ ಹೊಳೆನರಸೀಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷರಾದ ಶ್ರೀ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಅಧಿಕಾರಿಗಳಾದ ಗುರುಸ್ವಾಮಿ (JDE) ಹಾಗೂ ಪುರುಷೋತ್ತಮ್ ಹೆಚ್.ಆರ್ (CCT) ಅವರು, ಗ್ರಾಮೀಣ ಭಾಗದ ಆಸಕ್ತ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ದೊರೆಯುವ ಸುವರ್ಣಾವಕಾಶಗಳ ಬಗ್ಗೆ ಮಾಹಿತಿ ನೀಡಿ ಸಾರ್ವಜನಿಕರಿಗೆ ತಲುಪಿಸಲು ಮನವಿ ಮಾಡಿದರು.

    ಈ ಮಹತ್ವದ ಶೈಕ್ಷಣಿಕ ಕಾರ್ಯಕ್ರಮವು ದಿನಾಂಕ 06 ಸೆಪ್ಟೆಂಬರ್ 2026 ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರ್‌ನಲ್ಲಿ (ಗೇಟ್ ಸಂಖ್ಯೆ 4, ಗಾಯತ್ರಿ ಗ್ರಾಂಡ್) ಬೆಳಿಗ್ಗೆ 09:30 ರಿಂದ ಸಂಜೆ 05:00 ರವರೆಗೆ ನಡೆಯಲಿದೆ. ಈ ಸಮಾವೇಶದಲ್ಲಿ ಆಸ್ಟ್ರೇಲಿಯಾ, ಅಮೆರಿಕ, ಬ್ರಿಟನ್, ಜರ್ಮನಿ, ಸಿಂಗಾಪುರ, ಯುಎಇ, ಐರ್ಲೆಂಡ್, ನ್ಯೂಜಿಲೆಂಡ್ ಸೇರಿದಂತೆ ವಿಶ್ವದ ಪ್ರಮುಖ 10ಕ್ಕೂ ಹೆಚ್ಚು ದೇಶಗಳ ಸುಮಾರು 75ಕ್ಕೂ ಅಧಿಕ ಪ್ರತಿಷ್ಠಿತ ಜಾಗತಿಕ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ನೇರವಾಗಿ ಭಾಗವಹಿಸಲಿದ್ದಾರೆ.

    ಸಮಾವೇಶದಲ್ಲಿ ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಅರ್ಹತಾ ಮೌಲ್ಯಮಾಪನ ನಡೆಸಿ ಶೇಕಡಾ 50 ರಷ್ಟು ವಿದ್ಯಾರ್ಥಿವೇತನ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ ಉಚಿತ ಪ್ರವೇಶ ಹೊಂದಿರುವ ಈ ಸಮಾವೇಶದಲ್ಲಿ ತಜ್ಞರಿಂದ ವೈಯಕ್ತಿಕ ಸಮಾಲೋಚನೆ, ವಿಶ್ವವಿದ್ಯಾಲಯ ಪ್ರವೇಶ ಮಾರ್ಗದರ್ಶನ, ವೀಸಾ ಪ್ರಕ್ರಿಯೆ ನೆರವು, ಶೈಕ್ಷಣಿಕ ಸಾಲ ಹಾಗೂ ಹಣಕಾಸು ಸೌಲಭ್ಯ, ಅರ್ಜಿ ಸಲ್ಲಿಕೆ, ಆರೋಗ್ಯ ವಿಮೆ ಮತ್ತು ಭಾಷಾ ನೈಪುಣ್ಯತೆ ಕುರಿತು ಸಮಗ್ರ ಮಾರ್ಗದರ್ಶನ ದೊರೆಯಲಿದೆ.

    ತಾಲೂಕಿನ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ studyabroad.ksdckarnataka.com ಮೂಲಕ ಅಥವಾ ಸಹಾಯವಾಣಿ ಸಂಖ್ಯೆಗಳಾದ 7338674791, 7338674794, 7338674798 ಹಾಗೂ 7338674792 ಗಳನ್ನು ಸಂಪರ್ಕಿಸಿ ಮುಂಚಿತವಾಗಿಯೇ ಉಚಿತ ನೋಂದಣಿ ಮಾಡಿಕೊಂಡು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅಧಿಕಾರಿಗಳು ಕೋರಿದ್ದಾರೆ.

    ವರದಿ: ಮಂಜು ಶ್ರವಣೂರು, ಹೊಳೆನರಸೀಪುರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಬಿಎಂಐಸಿ ಯೋಜನೆ: ಜಮೀನು ಕಳೆದುಕೊಂಡ 1,453 ಬಿಡದಿ ರೈತರಿಗೆ 2 ತಿಂಗಳಲ್ಲಿ ನಿವೇಶನ ಹಂಚಿಕೆ: ಡಿಸಿಎಂ ಪರಮೇಶ್ವರ್ ಘೋಷಣೆ

    September 4, 2026

    ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ

    September 4, 2026

    ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ

    September 3, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿದೇಶದಲ್ಲಿ ಉನ್ನತ ವ್ಯಾಸಂಗ: ಹೊಳೆನರಸೀಪುರದಲ್ಲಿ ‘ವಿದೇಶದಲ್ಲಿ ಅಧ್ಯಯನ 2026’ ಕಾರ್ಯಕ್ರಮದ ಪ್ರಚಾರಕ್ಕೆ ಚಾಲನೆ

    September 4, 2026

    ಹೊಳೆನರಸೀಪುರ: ಕರ್ನಾಟಕ ಸರ್ಕಾರದ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ…

    ನಿವೇಶನ ವಿತರಣೆಗೆ ಕ್ರಮ ಕೈಗೊಳ್ಳಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆ.ಎನ್.ರಾಜಣ್ಣ ಸೂಚನೆ

    September 4, 2026

    ಮಧುಗಿರಿ: ಸಂಬಳ ಬಿಡುಗಡೆಯಾಗದ ಸಂಕಷ್ಟದಲ್ಲಿ 10 ಗ್ರಾ.ಪಂ. ನೌಕರರು: ಜೀವನ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣ!

    September 4, 2026

    ಬಿಎಂಐಸಿ ಯೋಜನೆ: ಜಮೀನು ಕಳೆದುಕೊಂಡ 1,453 ಬಿಡದಿ ರೈತರಿಗೆ 2 ತಿಂಗಳಲ್ಲಿ ನಿವೇಶನ ಹಂಚಿಕೆ: ಡಿಸಿಎಂ ಪರಮೇಶ್ವರ್ ಘೋಷಣೆ

    September 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.