ಬಳ್ಳಾರಿ: ಕರ್ನಾಟಕ ಸರ್ಕಾರದ ಇ–ಆಡಳಿತ ಇಲಾಖೆಯ ಇಡಿಸಿಎಸ್ ನಿರ್ದೇಶನಾಲಯದ ನಿರ್ದೇಶನದಂತೆ, ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಗಳ ಫ್ರಾಂಚೈಸಿಗಳ ನೇಮಕಕ್ಕೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮರು–ಅಧಿಸೂಚನೆ ಖಾಲಿ ಹುದ್ದೆಗಳಿದ್ದು, ಒಟ್ಟು 2 ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ವೆಬ್ ಸೈಟ್ ಲಿಂಕ್ https://Sevasindhuservices.karnataka.gov.in/directApply.doserviceld=2631 ಲಿಂಕ್ ಗೆ ಭೇಟಿ ನೀಡಬಹುದಾಗಿದೆ. ಆಸಕ್ತ ನಾಗರಿಕರು ನಿಗದಿತ ದಿನಾಂಕದೊಳಗೆ ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
