ಅರಸೀಕೆರೆ: ತಾಲ್ಲೂಕಿನ ಗಂಡಸಿ ಹೋಬಳಿಯ ಮುದುಡಿ ಬಿ ತಾಂಡ್ಯದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕರಿಯಮ್ಮ ದೇವಿ ಹಾಗೂ ಶ್ರೀ ಬನಶಂಕರಿ ದೇವಿಯವರ ನೂತನ ದೇವಾಲಯ ಪ್ರವೇಶ ಮತ್ತು ಅಮ್ಮನವರ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವವು ಅತ್ಯಂತ ವಿಜೃಂಭಣೆ ಹಾಗೂ ಭಕ್ತಿಭಾವದಿಂದ ನೆರವೇರಿತು.
ಈ ಪವಿತ್ರ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ಹಾಸನ ಸಂಸದರಾದ ಶ್ರೇಯಸ್ ಎಂ. ಪಟೇಲ್ ಅವರು ಭಾಗವಹಿಸಿ, ದೇವಿಯವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ, ನಾಡಿನ ಸುಖ, ಶಾಂತಿ, ಸಮೃದ್ಧಿ ಹಾಗೂ ಸರ್ವರ ಆರೋಗ್ಯ ಮತ್ತು ನೆಮ್ಮದಿಗಾಗಿ ದೇವಿಯಲ್ಲಿ ಪ್ರಾರ್ಥಿಸಿದರು.
ಇದನ್ನೂ ಓದಿ: ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ
ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ಗ್ರಾಮಸ್ಥರ ಶ್ರದ್ಧೆ, ಭಕ್ತಿ ಹಾಗೂ ಒಗ್ಗಟ್ಟಿನ ಪ್ರತೀಕವಾಗಿ ಈ ನೂತನ ದೇವಾಲಯ ನಿರ್ಮಾಣಗೊಂಡಿದೆ. ಇದು ಮುದುಡಿ ಬಿ ತಾಂಡ್ಯದ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮತ್ತಷ್ಟು ಶ್ರೀಮಂತಗೊಳಿಸಲಿ” ಎಂದು ಶುಭ ಹಾರೈಸಿದರು. ಅಲ್ಲದೆ, ದೇವಿಯವರ ಅನುಗ್ರಹದಿಂದ ಪ್ರತಿಯೊಂದು ಕುಟುಂಬದಲ್ಲೂ ಸುಖ, ಶಾಂತಿ, ನೆಮ್ಮದಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಆಶಿಸಿದರು.
ಈ ಧಾರ್ಮಿಕ ಸಮಾರಂಭದಲ್ಲಿ ಊರಿನ ಗ್ರಾಮಸ್ಥರು, ಹತ್ತಿರದ ಭಕ್ತಾದಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು ದೇವರ ಕೃಪೆಗೆ ಪಾತ್ರರಾದರು.
ವರದಿ: ಮಂಜು ಶ್ರವಣೂರು, ಹೊಳೆನರಸೀಪುರ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
