nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?

    September 6, 2026

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    ನೇಪಾಳ ಪ್ರವಾಹ ದುರಂತ: ಸಂತ್ರಸ್ತ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಮುಂದಾದ ಸರ್ಕಾರ

    September 5, 2026
    Facebook Twitter Instagram
    ಟ್ರೆಂಡಿಂಗ್
    • ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?
    • ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್
    • ನೇಪಾಳ ಪ್ರವಾಹ ದುರಂತ: ಸಂತ್ರಸ್ತ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಮುಂದಾದ ಸರ್ಕಾರ
    • ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ಘೋಷಿಸಿದ ಸರ್ಕಾರ!
    • ಬಲಿಷ್ಠ ಭಾರತ ನಿರ್ಮಾಣದಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ: ಡಾ.ಲಕ್ಷ್ಮಣ್ ದಾಸ್
    • ಸಂತಪೂರ ಗ್ರಾಮದಲ್ಲಿ ‘ಪ್ರಜಾ ಸೇವಾ’ ಕಾರ್ಯಕ್ರಮ: ಕಾಲೇಜು ಸ್ಥಾಪನೆ ಹಾಗೂ ಸ್ತ್ರೀರೋಗ ತಜ್ಞರ ನೇಮಕಕ್ಕೆ ಮನವಿ
    • ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆಗೆ ಒತ್ತಾಯ
    • ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಯ ಬಂಧನ, ಸಾರ್ವಜನಿಕರಿಂದ ಧರ್ಮದೇಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?
    ಕೊರಟಗೆರೆ September 6, 2026

    ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?

    By Ganesh TumkuruSeptember 6, 2026No Comments2 Mins Read
    praja seve

    ಕೊರಟಗೆರೆ: ಸರ್ಕಾರದ ಮಹತ್ವಾಕಾಂಕ್ಷೆಯ ಜನಸ್ನೇಹಿ ಯೋಜನೆಯಾದ ‘ಪ್ರಜಾಸೇವೆ ಅಭಿಯಾನ’ದ ಮೂಲಕ ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿ ಸ್ಥಳದಲ್ಲೇ ಪರಿಹರಿಸುವ ಘೋಷಣೆ ಮಾಡಲಾಗಿದ್ದರೂ, ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಮಾತ್ರ ಇನ್ನೂ ಅನೇಕ ಸಾರ್ವಜನಿಕ ಸಮಸ್ಯೆಗಳು ಇತ್ಯರ್ಥಗೊಳ್ಳದೆ ಬಾಕಿ ಉಳಿದಿರುವುದು ಜನರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

    ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಜನರ ಬಳಿಗೇ ಆಡಳಿತವನ್ನು ಕೊಂಡೊಯ್ಯುವ ಉದ್ದೇಶದಿಂದ ರಾಜ್ಯ ಸರ್ಕಾರವು ‘ಪ್ರಜಾಸೇವೆ ಅಭಿಯಾನ’ಕ್ಕೆ ಚಾಲನೆ ನೀಡಿದೆ. ಈ ಅಭಿಯಾನದಡಿ ಕಂದಾಯ ಇಲಾಖೆಯ ದಾಖಲೆಗಳು, ಭೂಮಿ ಸಮಸ್ಯೆಗಳು, ಸಾಮಾಜಿಕ ಭದ್ರತಾ ಪಿಂಚಣಿಗಳು, ಪಡಿತರ ಚೀಟಿ ತಿದ್ದುಪಡಿ ಹಾಗೂ ವಿವಿಧ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಾವಿರಾರು ಅರ್ಜಿಗಳನ್ನು ಸ್ವೀಕರಿಸಲಾಗಿದೆ.

    ಆದರೆ, ಕೊರಟಗೆರೆ ತಾಲೂಕಿನಲ್ಲಿ ಈ ಅಭಿಯಾನದ ಪರಿಣಾಮಕಾರಿ ಅನುಷ್ಠಾನದ ಕುರಿತು ಸಾರ್ವಜನಿಕರಿಂದ ಭಾರಿ ದೂರುಗಳು ಕೇಳಿಬರುತ್ತಿವೆ. ಸಭೆಗಳಲ್ಲಿ ಮತ್ತು ಅಭಿಯಾನದ ವೇಳೆ ಸಾರ್ವಜನಿಕರು ಸಲ್ಲಿಸಿದ ಹಲವಾರು ಅರ್ಜಿಗಳು ಕೇವಲ ದಾಖಲೆಗಳಿಗೆ ಮಾತ್ರ ಸೀಮಿತವಾಗಿವೆ ಹೊರತು, ತಳಮಟ್ಟದಲ್ಲಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

    ಅರ್ಜಿಗಳು ಸಲ್ಲಿಕೆಯಾಗಿ ವಾರಗಳೇ ಕಳೆದರೂ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಡತಗಳನ್ನು ವಿಲೇವಾರಿ ಮಾಡುವಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ವಿಶೇಷವಾಗಿ ಕಂದಾಯ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಹಳೇ ಸಮಸ್ಯೆಗಳು ಹಾಗೆಯೇ ಉಳಿದುಕೊಂಡಿದ್ದು, ಜನಸಾಮಾನ್ಯರು ಮತ್ತೆ ಎಂದಿನಂತೆ ಕಚೇರಿಗಳ ಮೆಟ್ಟಿಲು ತುಳಿಯುವ ದುಸ್ಥಿತಿ ನಿರ್ಮಾಣವಾಗಿದೆ.

    ಇದನ್ನೂ ಓದಿ: ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ

    “ಸರ್ಕಾರ ಜನರ ಸಮಸ್ಯೆ ಬಗೆಹರಿಸಲು ಒಳ್ಳೆಯ ಅಭಿಯಾನವನ್ನು ತಂದಿದೆ, ಆದರೆ ಸ್ಥಳೀಯ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಜನರ ಕಷ್ಟಗಳಿಗೆ ಸ್ಪಂದಿಸುವಲ್ಲಿ ವಿಫಲರಾಗುತ್ತಿದ್ದಾರೆ” ಎಂದು ಕೊರಟಗೆರೆಯ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಇತ್ತ ಗಮನಹರಿಸಿ, ಪ್ರಜಾಸೇವೆ ಅಭಿಯಾನದಡಿ ಬಾಕಿ ಉಳಿದಿರುವ ಎಲ್ಲಾ ಅರ್ಜಿಗಳನ್ನು ತುರ್ತಾಗಿ ವಿಲೇವಾರಿ ಮಾಡಬೇಕು ಹಾಗೂ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

    ಸರ್ಕಾರಿ ಅಧಿಕಾರಿಗಳು ಕ್ಷೇತ್ರದ ಶಾಸಕರೂ ಆಗಿರುವ ಡಾ.ಜಿ.ಪರಮೇಶ್ವರ್ ಅವರು ಬರುವ ಸಂದರ್ಭದಲ್ಲಿ ಮಾತ್ರವೇ ಚಟುವಟಿಕೆಯಲ್ಲಿದ್ದಂತೆ ತೋರ್ಪಡಿಸುತ್ತಾರೆ, ಅವರು ಹೋದ ನಂತರ ಮತ್ತೆ ಎಂದಿನ ಅವ್ಯವಸ್ಥೆಯಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?

    September 6, 2026

    ಕೊರಟಗೆರೆ: ಸರ್ಕಾರದ ಮಹತ್ವಾಕಾಂಕ್ಷೆಯ ಜನಸ್ನೇಹಿ ಯೋಜನೆಯಾದ ‘ಪ್ರಜಾಸೇವೆ ಅಭಿಯಾನ’ದ ಮೂಲಕ ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿ ಸ್ಥಳದಲ್ಲೇ ಪರಿಹರಿಸುವ ಘೋಷಣೆ…

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    ನೇಪಾಳ ಪ್ರವಾಹ ದುರಂತ: ಸಂತ್ರಸ್ತ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಮುಂದಾದ ಸರ್ಕಾರ

    September 5, 2026

    ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ಘೋಷಿಸಿದ ಸರ್ಕಾರ!

    September 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.