ಮಧುಗಿರಿ: ಪ್ರತಿ ತಿಂಗಳು ಮೊದಲನೇ ಮತ್ತು ಮೂರನೇ ಶನಿವಾರ ಪ್ರತಿ ಹೋಬಳಿ ಕೇಂದ್ರಗಳಲ್ಲಿ ತಾಲೂಕು ಮಟ್ಟದ ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಹಶೀಲ್ದಾರ್ ನಂದಿನಿ ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಶನಿವಾರ ಪ್ರಜಾ ಸೇವಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಸ್ತುತ ಕಸಬಾ ಹೋಬಳಿಯಲ್ಲಿ ಜನರ ಸಭೆ ನಡೆಸಲಾಗುತ್ತಿದೆ. ನಾಗರಿಕರಿಗೆ ವಿವಿಧ ಇಲಾಖೆಗಳ ಸಮಸ್ಯೆಗಳ ಪರಿಹಾರ ಮುಖ್ಯ ಉದ್ದೇಶವಾಗಿದ್ದು, ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಈ ದಿನ ಸಿಗಲಿದ್ದಾರೆ. ಜನರ ಸಮಸ್ಯೆ ಪರಿಹಾರಕ್ಕೆ ಈ ಕಾರ್ಯಕ್ರಮ ಅನುಕೂಲವಾಗಲಿದೆ ಜನತೆ ನೀಡಿದ ಅರ್ಜಿಗಳ ಸಮಸ್ಯೆಗಳನ್ನು ಐಪಿಆರ್ ಎಸ್ ಲಾಗಿನ್‌ನಲ್ಲಿ ನೋಂದಾಯಿಸಿ ಸಮಸ್ಯೆ ಪರಿಹಾರಿಸಲು ಈ ಕಾರ್ಯಕ್ರಮ ಜಾರಿಗೊಳಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ವರೆಗೂ 101 ಅರ್ಜಿಗಳು ಬಂದಿದ್ದು, ಕಂದಾಯ ಇಲಾಖೆಯ ಸಮಸ್ಯೆಗಳಿಗೆ ಹೆಚ್ಚು ಅರ್ಜಿಗಳು ಬಂದಿದೆ. ಖಾತೆ ಖಾತೆ, ಒತ್ತುವರಿ ತೆರವು, ಸಾಗುವಳಿ ಚೀಟಿ, ಜಮೀನು ದುರಸ್ತಿ ಬಗ್ಗೆಯೂ ಅರ್ಜಿಗಳು ಬಂದಿದ್ದು, ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ತಾ.ಪಂ.ಇ.ಓ.ಬಿ.ಕೆ ಉತ್ತಮ್ ಮಾತನಾಡಿ ಇಲಾಖೆಗಳು ಮತ್ತು ಜನರ ನಡುವೆ ಸೇತುವೆಯಾಗಿ ಈ ಜನರ ಸಭೆ ಏರ್ಪಡಾಗಿದೆ ಅಧಿಕಾರಿಗಳು ಇಲಾಖೆ ಮಾರ್ಗದರ್ಶನ ಅನುಸರಿಸಿ ಕಾರ್ಯ ನಿರ್ವಹಿಸಬೇಕು ಇಲಾಖೆಗಳ ಮಧ್ಯೆ ಸಮನ್ವಯತೆ ಇರಬೇಕು ಎಂದರು.
ಬಿಇಒ ಹನುಮಂತರಾಯಪ್ಪ, ಜಿ.ಪಂ. ಕಾರ್ಯಪಾಲಕ ಅಭಿಯಂತರ ಹನುಮಂತಪ್ಪ, ತೋಟಗಾರಿಕೆ ಇಲಾಖೆ ಸಹಾಯಕ ಶಶಿಧರ್, ನಿರ್ದೇಶಕ ಬೆಸ್ಕಾಂ ಇಲಾಖೆಯ ಜಗದೀಶ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ದಿನೇಶ್, ವಲಯ ಅರಣ್ಯಾಧಿಕಾರಿ ಸುರೇಶ್, ಪುರಸಭೆ ಮುಖ್ಯಾಧಿಕಾರಿ ಸುರೇಶ್, ಅಬಕಾರಿ ಇಲಾಖೆಯ ಶ್ರೀಲತಾ, ಗ್ರೇಡ್ 2. ತಹಶೀಲ್ದಾರ್ ಭೂಮೇಶ್ ನಾಯಕ್,ಕೃಷಿ ಇಲಾಖೆ ಸಹಾಯಕ ಚನ್ನಕೇಶವ ಮೂರ್ತಿ, ಬಿಸಿಎಂ ಇಲಾಖೆಯ ಸಹಾಯಕ ನಿರ್ದೇಶಕ ಜಯರಾಮಯ್ಯ, ಲೋಕೋಪಯೋಗಿ ಇಲಾಖೆಯ ಎಇಇ ಸಂಪತ್ ಕುಮಾರ್,ಕಂದಾಯ ತನಿಖಾಧಿಕಾರಿ ನಾಗೇಶ್, ಶ್ರೀಧರ್, ಮಹೇಶ್ ಹಾಗೂ ಫಲಾನುಭವಿಗಳು ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
