ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ತಮಗೆ ಆಹ್ವಾನ ನೀಡದಿರುವ ವಿಚಾರವಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ‘ಅಹಿಂದ ಯಾರ ಆಸ್ತಿಯೂ ಅಲ್ಲ’ ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ.
ಸಮಾವೇಶಕ್ಕೆ ತಮ್ಮನ್ನು ಯಾರೂ ಕರೆದಿಲ್ಲ, ಕರೆಯದ ಮೇಲೆ ತಾವೇಗೆ ಹೋಗಲು ಸಾಧ್ಯ ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಅಹಿಂದ ಚಳುವಳಿ ಅಥವಾ ಪದವು ಯಾರೊಬ್ಬರ ಸ್ವಂತ ಆಸ್ತಿಯಲ್ಲ, ಯಾರು ಬೇಕಾದರೂ ಅಹಿಂದ ಸಮಾವೇಶಗಳನ್ನು ಮಾಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಒಂದು ಕಾಲದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆನ್ನೆಲುಬಾಗಿ ನಿಂತಿದ್ದ ಸತೀಶ್ ಜಾರಕಿಹೊಳಿ ಅವರಿಗೆ ಆಹ್ವಾನ ನೀಡದೇ ಇರುವುದು ಹಾಗೂ ಇಬ್ಬರ ನಡುವಿನ ರಾಜಕೀಯ ದೂರವು ಈಗ ರಾಜ್ಯ ರಾಜಕಾರಣದಲ್ಲಿ ಚರ್ಚೆಯ ವಿಷಯವಾಗಿದೆ.
ಬರಗಾಲ, ರೈತರ ಸಮಸ್ಯೆಗಳು ಹಾಗೂ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲಾಗಿದ್ದು, ಮುಖ್ಯಮಂತ್ರಿಗಳು ಸರ್ಕಾರದ 100 ದಿನಗಳ ಸಾಧನೆ ಹಾಗೂ ಕಾರ್ಯಕ್ರಮಗಳ ಪರಿಶೀಲನೆ ನಡೆಸಬೇಕು ಎಂದರು.
ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಅಹಿಂದ ಚಳುವಳಿಗೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ರಜತ ಮಹೋತ್ಸವ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಈ ಪ್ರಮುಖ ಸಮಾವೇಶಕ್ಕೆ ಅಹಿಂದ ಹೋರಾಟದ ಪ್ರಮುಖ ಮುಖಂಡರಾಗಿದ್ದ ಸತೀಶ್ ಜಾರಕಿಹೊಳಿ ಹಾಗೂ ಹೆಚ್.ಸಿ. ಮಹದೇವಪ್ಪ ಅವರಿಗೆ ಆಹ್ವಾನ ನೀಡದಿರುವುದು ಕಾಂಗ್ರೆಸ್ ಪಾಳಯದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿರುವುದನ್ನು ಸ್ಪಷ್ಟಪಡಿಸುತ್ತದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
