nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ
    • ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    ಕೊರಟಗೆರೆ September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    By Ganesh TumkuruSeptember 7, 2026No Comments1 Min Read
    koratagere purasabha

    ಕೊರಟಗೆರೆ: ಬೇಸಿಗೆ ಆರಂಭಕ್ಕೂ ಮುನ್ನವೇ ತಾಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ತಲೆದೋರಬೇಕಿತ್ತು. ಆದರೆ, ಆಶ್ಚರ್ಯವೆಂಬಂತೆ ಮಳೆಗಾಲದಲ್ಲೇ ಕೊರಟಗೆರೆ ಪುರಸಭೆ ವ್ಯಾಪ್ತಿಯ ಕಲ್ಲುಗುಟ್ಟರಹಳ್ಳಿ ಹಾಗೂ ಕೃಷ್ಣರಾಜಪುರ-2 ಗ್ರಾಮಗಳಲ್ಲಿ ಕುಡಿಯುವ ನೀರಿನ ಭೀಕರ ಸಮಸ್ಯೆ ಎದುರಾಗಿದೆ. ನೀರಿಲ್ಲದೆ ಪರದಾಡುತ್ತಿರುವ ಗ್ರಾಮಸ್ಥರು ಆಕ್ರೋಶಗೊಂಡು ಪುರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

    ಒಂದೇ ಬೋರ್‌ ವೆಲ್ ಆಶ್ರಯ:

    ಎರಡೂ ಗ್ರಾಮಗಳಲ್ಲಿ ಸುಮಾರು 165 ಮನೆಗಳಿದ್ದು, 700ಕ್ಕೂ ಅಧಿಕ ಜನ ವಾಸಿಸುತ್ತಿದ್ದಾರೆ. ಆದರೆ ಇಡೀ ಜನಸಂಖ್ಯೆಗೆ ಕೇವಲ ಒಂದೇ ಒಂದು ಕೊಳವೆಬಾವಿ (ಬೋರ್‌ವೆಲ್) ಆಧಾರವಾಗಿದೆ.  ಬೋರ್‌ ವೆಲ್‌ ನಲ್ಲಿ ಅಂತರ್ಜಲ ಕುಸಿದು ನೀರಿನ ಮಟ್ಟ ಸಂಪೂರ್ಣವಾಗಿ ಕಡಿಮೆಯಾಗಿರುವುದರಿಂದ ಗ್ರಾಮಗಳಿಗೆ ಸಮರ್ಪಕ ನೀರು ಪೂರೈಕೆಯಾಗುತ್ತಿಲ್ಲ.

    ಜಲಜೀವನ್ ಮಿಷನ್ ಎಡವಟ್ಟು:

    ಸರ್ಕಾರದ ಜಲಜೀವನ್ ಮಿಷನ್ ಯೋಜನೆಯಡಿ ಹೊಸ ಬೋರ್‌ ವೆಲ್ ಕೊರೆಸಲಾಗಿದ್ದರೂ, ಅದಕ್ಕೆ ಅಳವಡಿಸಬೇಕಿದ್ದ ಪಂಪ್ ಮತ್ತು ಮೋಟರ್ ಅನ್ನು ಗ್ರಾಮದ ಸದಸ್ಯರೊಬ್ಬರ ಮನೆಯಲ್ಲಿ ಇರಿಸಲಾಗಿದೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ.

    ಕುಡಿಯುವ ನೀರಿಗಾಗಿ ಮಹಿಳೆಯರು ಮಳೆಗಾಲದಲ್ಲೂ ಮೈಲುಗಟ್ಟಲೆ ದೂರ ಅಲೆಯುವಂತಾಗಿದ್ದು, ಪ್ರತಿದಿನ ಟ್ಯಾಂಕರ್‌ಗಳಿಗಾಗಿ ಕಾಯುವುದು ಅಸಾಧ್ಯ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

    ಅಧಿಕಾರಿಗಳ ಸ್ಪಷ್ಟನೆ ಮತ್ತು ಭರವಸೆ:

    ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಸ್ಥಳಕ್ಕೆ ಬಂದ ಪುರಸಭೆ ಮುಖ್ಯಾಧಿಕಾರಿ ಉಮೇಶ್ ಮಾತನಾಡಿ, “ಅಂತರ್ಜಲ ಕುಸಿದಿರುವುದು ಸಮಸ್ಯೆಗೆ ಕಾರಣ. ಸದ್ಯಕ್ಕೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೂಡಲೇ ಮತ್ತೊಂದು ಬೋರ್‌ವೆಲ್ ಕೊರೆಸಿ ಶಾಶ್ವತ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ.

    ಮಳೆ ಕೊರತೆಯಿಂದ ಈಗಾಗಲೇ ಬರಪೀಡಿತ ಪ್ರದೇಶವೆಂದು ಘೋಷಿತವಾಗಿರುವ ಈ ತಾಲೂಕಿನಲ್ಲಿ, ಮಳೆಗಾಲದಲ್ಲೇ ಈ ರೀತಿಯ ನೀರಿನ ಹಾಹಾಕಾರ ಮುಂದುವರಿದರೆ ಮುಂದಿನ ಬೇಸಿಗೆಯ ಕಥೆಯೇನು ಎಂಬುದು ಗ್ರಾಮಸ್ಥರ ಪ್ರಶ್ನೆಯಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಶಾಶ್ವತ ನೀರಿನ ಮೂಲ ಕಲ್ಪಿಸಿಕೊಡಬೇಕೆಂಬುದು ಗ್ರಾಮಸ್ಥರ ಒತ್ತಾಯವಾಗಿದೆ.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?

    September 6, 2026

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ : SCSP/TSP ನಿಧಿಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ SCSP/TSP ನಿಧಿ ಸದ್ಬಳಕೆ…

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.