nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!

    October 23, 2026

    ಪಿಜಿ ಡೆಂಟಲ್ (MDS) 3ನೇ ಸುತ್ತಿನ ಪ್ರವೇಶ: ಅಕ್ಟೋಬರ್ 27ರಂದು ದಾಖಲಾತಿ ಪರಿಶೀಲನೆ

    October 23, 2026

    ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು

    October 23, 2026
    Facebook Twitter Instagram
    ಟ್ರೆಂಡಿಂಗ್
    • ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!
    • ಪಿಜಿ ಡೆಂಟಲ್ (MDS) 3ನೇ ಸುತ್ತಿನ ಪ್ರವೇಶ: ಅಕ್ಟೋಬರ್ 27ರಂದು ದಾಖಲಾತಿ ಪರಿಶೀಲನೆ
    • ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು
    • ಡ್ರೈವಿಂಗ್ ಲೈಸೆನ್ಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆ! ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಇನ್ಮುಂದೆ ಕಷ್ಟವಾಗುತ್ತಾ? 
    • ಆಯುರ್ವೇದ, ಹೋಮಿಯೋಪತಿ ಸೀಟು ಹಂಚಿಕೆ: ಚಾಯ್ಸ್ ಆಯ್ಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ — ಕೆಇಎ ಅಂತಿಮ ಅವಕಾಶ
    • ಮಾನಸಿಕ ಆರೋಗ್ಯ ಸೇವೆ ಪಡೆಯಲು ಹಿಂದೇಟು ಹಾಕಬಾರದು: ಡಾ.ನಂದಿತಾ
    • ಮುರಿದು ಬಿದ್ದಿರುವ ಕ್ರಾಶ್ ಬ್ಯಾರಿಯರ್ ದುರಸ್ತಿ ಮಾಡೋರು ಯಾರು? | ಅನಾಹುತಕ್ಕೂ ಮುನ್ನ ಎಚ್ಚೆತ್ತುಕೊಳ್ಳುತ್ತಾರೆಯೇ ಅಧಿಕಾರಿಗಳು?
    • ಯುಜಿ ನೀಟ್–2026: ವೈದ್ಯಕೀಯ ಮತ್ತು ದಂತವೈದ್ಯಕೀಯ ಆನ್‌ ಲೈನ್‌ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ
    ಪಾವಗಡ September 7, 2026

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    By Ganesh TumkuruSeptember 7, 2026No Comments1 Min Read
    pavagada

    ಪಾವಗಡ : SCSP/TSP ನಿಧಿಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ SCSP/TSP ನಿಧಿ ಸದ್ಬಳಕೆ ಜನಾಂದೋಲನ — ಕರ್ನಾಟಕ ವತಿಯಿಂದ ಭಾನುವಾರ ಪಾವಗಡ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಾಗೃತಿ ಸಭೆ ಆಯೋಜಿಸಲಾಗಿತ್ತು.

    ಸಭೆಯಲ್ಲಿ ವಕೀಲರು ಹಾಗೂ ಭಾರತೀಯ ಪರಿವರ್ತನ ಸಂಘ (BPS) ರಾಜ್ಯಾಧ್ಯಕ್ಷರಾದ ಹರಿರಾಮ್ ಎ. ಅವರು SCSP/TSP ನಿಧಿಯ ಉದ್ದೇಶ, ಬಳಕೆ ಹಾಗೂ ಸಮುದಾಯಕ್ಕೆ ದೊರೆಯಬೇಕಾದ ಸೌಲಭ್ಯಗಳ ಕುರಿತು ಉಪನ್ಯಾಸ ನೀಡಿದರು.

    ಈ ಸಂದರ್ಭದಲ್ಲಿ ರಾಷ್ಟ್ರೀಯ ಬುಡಕಟ್ಟು ಬೇಡರ ಪಡೆ ಯುವ ಘಟಕದ ರಾಜ್ಯಾಧ್ಯಕ್ಷ ದೊಡ್ಡಹಳ್ಳಿ ಅಂಜಿನಾಯಕ, ಕರ್ನಾಟಕ ಭೀಮಸೇನೆ ತಾಲ್ಲೂಕು ಅಧ್ಯಕ್ಷ ಬೆಳ್ಳಿಬಟ್ಟಲು ಗ್ರಾಮದ ಹಾಲೇಶ್ ಕುಮಾರ್, ಅಲೆಮಾರಿ ಸಮುದಾಯದ ಮುಖಂಡ ವೀರಭದ್ರಪ್ಪ, ತುಮಕೂರು ಜಿಲ್ಲಾ ಲಿಡ್ಕರ್ ನಾಮನಿರ್ದೇಶಿತ ಸದಸ್ಯ ಕರೆಕ್ಯಾತನಹಳ್ಳಿ ಗ್ರಾಮದ ನಾಗರಾಜ ಕೆ.ಟಿ., BPS ತುಮಕೂರು ಜಿಲ್ಲಾಧ್ಯಕ್ಷ ಚಿಕ್ಕತಿಮ್ಮನಹಟ್ಟಿ ಗ್ರಾಮದ ಹೆಚ್.ಕೆಂಚರಾಯ, ಮುಖಂಡರಾದ ಹನುಮಂತರಾಯಪ್ಪ ಸೇರಿದಂತೆ ಎಸ್ಸಿ–ಎಸ್ಟಿ ಸಮುದಾಯದ ಮುಖಂಡರು, ಯುವಕರು, ನೌಕರರು ಹಾಗೂ ವಕೀಲರು ಭಾಗವಹಿಸಿದ್ದರು.

    ಸಭೆಯಲ್ಲಿ ಮಾತನಾಡಿದ ಮುಖಂಡರು, SCSP/TSP ನಿಧಿಯು ಅರ್ಹ ಸಮುದಾಯದ ಅಭಿವೃದ್ಧಿಗೆ ಪರಿಣಾಮಕಾರಿಯಾಗಿ ಬಳಕೆಯಾಗುವಂತೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟರು.

    ಮುಂದಿನ ದಿನಗಳಲ್ಲಿ ಪಾವಗಡ ತಾಲ್ಲೂಕಿನ ನಾಲ್ಕು ಹೋಬಳಿಗಳಲ್ಲಿಯೂ SCSP/TSP ನಿಧಿ ಸದ್ಬಳಕೆ ಕುರಿತು ಜಾಗೃತಿ ಸಭೆಗಳನ್ನು ನಡೆಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ನ್ಯಾಯದಗುಂಟೆ ಗ್ರಾಮದ BPS ಮುಖಂಡರಾದ ಶಿವಕುಮಾರ್ ಹೆಚ್. ಅವರು ಊಟದ ವ್ಯವಸ್ಥೆ ಮಾಡಿದ್ದರು.

    ಈ ಸಭೆ ಯಶಸ್ವಿಯಾಗಲು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಸಂಘಟಕರ ವತಿಯಿಂದ ಧನ್ಯವಾದಗಳನ್ನು ಸಲ್ಲಿಸಲಾಯಿತು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    Leave A Reply Cancel Reply

    Our Picks

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026

    ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!

    October 20, 2026

    ಇಎಸ್‌ ಐಸಿ ಮಹತ್ವದ ಅಪ್‌ ಡೇಟ್:  ಇಎಸ್‌ ಐಸಿ ವಿಮಾದಾರರಿಗೆ ಸಿಹಿ ಸುದ್ದಿ:‌ ಎಷ್ಟು ಸಿಗಲಿದೆ ಈ ಹಣ?

    October 20, 2026

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!

    October 23, 2026

    ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಹೊಸ ವಿವಾದ ಮತ್ತು ಚರ್ಚೆ ಮುನ್ನೆಲೆಗೆ ಬಂದಿದೆ. ನಟ ದರ್ಶನ್ ಅವರ ಆಪ್ತ…

    ಪಿಜಿ ಡೆಂಟಲ್ (MDS) 3ನೇ ಸುತ್ತಿನ ಪ್ರವೇಶ: ಅಕ್ಟೋಬರ್ 27ರಂದು ದಾಖಲಾತಿ ಪರಿಶೀಲನೆ

    October 23, 2026

    ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು

    October 23, 2026

    ಡ್ರೈವಿಂಗ್ ಲೈಸೆನ್ಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆ! ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಇನ್ಮುಂದೆ ಕಷ್ಟವಾಗುತ್ತಾ? 

    October 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.