ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕು ವ್ಯಾಪ್ತಿ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರು ಪ್ರತಿ 5 ವರ್ಷಗಳಿಗೊಮ್ಮೆ ಕಡ್ಡಾಯವಾಗಿ ಇ–ಕೆವೈಸಿ ಮಾಡಿಸಬೇಕೆಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇ–ಕೆವೈಸಿ ಪ್ರಕ್ರಿಯೆಯನ್ನು ಈಗಾಗಲೇ ಸೆಪ್ಟೆಂಬರ್ 1 ರಿಂದ ಮರು ಪ್ರಾರಂಭಿಸಲಾಗಿದ್ದು, ತಾಲೂಕಿನ 1,14,457 ಸದಸ್ಯರ ಇ-ಕೆವೈಸಿ ಆಗಬೇಕಿರುವುದರಿಂದ ಇ-ಕೆವೈಸಿ ಮಾಡಿಸದೆ ಇರುವ ಸದಸ್ಯರು ಸೆಪ್ಟೆಂಬರ್ ತಿಂಗಳ ಅಂತ್ಯದೊಳಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಇ–ಕೆವೈಸಿ ಮಾಡಿಸತಕ್ಕದ್ದು. ತಪ್ಪಿದಲ್ಲಿ ಸರ್ಕಾರದ ಆದೇಶದಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಪಡಿತರ ಚೀಟಿಗಳಲ್ಲಿ ಮೃತ ಸದಸ್ಯರ ಹೆಸರನ್ನು ಡಿಲೀಟ್ ಮಾಡಿಸದೆ ಇದ್ದಲ್ಲಿ ತುರ್ತಾಗಿ ತಾಲೂಕು ಕಚೇರಿಗೆ ಮರಣ ಪ್ರಮಾಣ ಪತ್ರದೊಂದಿಗೆ ಮಾಹಿತಿ ನೀಡಿ ಮೃತ ಸದಸ್ಯರ ಹೆಸರುಗಳನ್ನು ವಜಾಗೊಳಿಸಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ಇ-ಕೆವೈಸಿ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
