ತುಮಕೂರು : ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯು ಗಣಿಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿ ಒಂದು ಹಸು / ಎಮ್ಮೆ ಸಾಕಾಣಿಕೆಗೆ ಸಹಾಯಧನ ಸೌಲಭ್ಯ ನೀಡಲು ತುಮಕೂರು ಜಿಲ್ಲೆಯ ತಿಪಟೂರು ಮತ್ತು ಗುಬ್ಬಿ ತಾಲ್ಲೂಕಿನ ಗಣಿಬಾಧಿತ/ಪ್ರಭಾವಕ್ಕೊಳಗಾದ 5 ಕಿ.ಮೀ. ವ್ಯಾಪ್ತಿಯ ಗ್ರಾಮಗಳ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಸಾಮಾನ್ಯ ವರ್ಗದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಗಣಿ ಬಾಧಿತ/ಪ್ರಭಾವಕ್ಕೊಳಗಾದ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಗ್ರಾಮಕ್ಕೆ ಒಳಪಟ್ಟ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ಸದಸ್ಯತ್ವ ಹೊಂದಿರುವ ಆಸಕ್ತ ಫಲಾನುಭವಿಗಳು ಆಯಾ ತಾಲ್ಲೂಕಿನ ಸಂಬಂಧಪಟ್ಟ ಗಣಿಬಾಧಿತ ಪ್ರದೇಶದ ವ್ಯಾಪ್ತಿಗೆ ಬರುವ ಪಶುವೈದ್ಯ ಸಂಸ್ಥೆಯವರನ್ನು ಸಂಪರ್ಕಿಸಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 3ರೊಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಯನ್ನು ಸ್ಥಳೀಯ ಪಶುವೈದ್ಯಾಧಿಕಾರಿಗಳು ಅಥವಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ)ಗಳಿಂದ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
