ತುಮಕೂರು: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪ ಜಾತಿಗಳಿಗೆ ಸೇರಿದವರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಫಲಾಪೇಕ್ಷಿಗಳು ಸ್ವಯಂ ಉದ್ಯೋಗ ಸಾಲ, ಅರಿವು–ಶೈಕ್ಷಣಿಕ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು https://sevasindhu.karnataka.gov.in ಪೋರ್ಟಲ್ ಮೂಲಕ ಗ್ರಾಮ ಒನ್ / ಕರ್ನಾಟಕ ಒನ್ / ತುಮಕೂರು ಒನ್ / ಬೆಂಗಳೂರು ಒನ್ ಸೇವಾ ಕೇಂದ್ರದಲ್ಲಿ ಅಕ್ಟೋಬರ್ 1ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ www.kssd.karnataka.gov.in ಅಥವಾ http://www.kssd.karnataka.gov.in ಮೂಲಕ ಅಥವಾ ಸಹಾಯವಾಣಿ ಸಂಖ್ಯೆ 080-22374832 / 8050770004 / 8050770005 ಅಥವಾ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 0816-2005008ನ್ನು ಸಂಪರ್ಕಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
