nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026
    Facebook Twitter Instagram
    ಟ್ರೆಂಡಿಂಗ್
    • ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು
    • ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ
    • ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ
    • ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ
    • ಇ–ಕೆವೈಸಿ:  ಸರ್ವರ್ ಸಮಸ್ಯೆ ಬಗೆಹರಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಂದ ತಹಶೀಲ್ದಾರ್ ಅವರಿಗೆ ಮನವಿ
    • ಕೊಳಗೇರಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಐತಿಹಾಸಿಕ ಹೆಜ್ಜೆ
    • ಆಧ್ಯಾತ್ಮಿಕ ಸಾಧನೆಯಿಂದ ಬದುಕಿಗೆ ಆನಂದ: ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ
    • ಪಡಿತರ ಚೀಟಿ: 5 ವರ್ಷಗಳಿಗೊಮ್ಮೆ ಇ–ಕೆವೈಸಿ ಕಡ್ಡಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊಳಗೇರಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಐತಿಹಾಸಿಕ ಹೆಜ್ಜೆ
    ಸಿರಾ September 9, 2026

    ಕೊಳಗೇರಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಐತಿಹಾಸಿಕ ಹೆಜ್ಜೆ

    By Ganesh TumkuruSeptember 9, 2026No Comments2 Mins Read
    tumakuru dc shubha kalyan

    ಸಿರಾ : ತಾಲ್ಲೂಕಿನ ಹುಣಸೆಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಕೊರತೆಗಳು ಜಿಲ್ಲಾಧಿಕಾರಿಯವರ ಗಮನಕ್ಕೆ ಬಂದಿದ್ದು. ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ ಸಮಸ್ಯೆಯ ಮೂಲವನ್ನು ಪರಿಶೀಲಿಸಿದಾಗ, ಗ್ರಾಮವು ಇನ್ನೂ ಕಂದಾಯ ಗ್ರಾಮವಾಗಿ ಘೋಷಣೆಯಾಗದಿರುವುದೇ ಅಭಿವೃದ್ಧಿ ಕಾರ್ಯಗಳು ಹಾಗೂ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಲು ಪ್ರಮುಖ ಕಾರಣವೆಂದು ತಿಳಿದು ಬಂದಿದೆ.

    ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಕಂದಾಯ ಗ್ರಾಮಗಳ ರಚನೆಗೆ ವಿಶೇಷ ಆಂದೋಲನ ಕೈಗೊಳ್ಳಲಾಗಿದೆ. ಈ ಅಭಿಯಾನದಡಿ ಇದುವರೆಗೆ 22,000ಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸುವ ಮೂಲಕ ಅವರಿಗೆ ಕಾನೂನುಬದ್ಧ ಹಕ್ಕು ಮತ್ತು ಭದ್ರತೆ ಕಲ್ಪಿಸಲಾಗಿದೆ. ಅದರಂತೆ ಮುಂದುವರೆದು ಅಲೆಮಾರಿ ಕುಟುಂಬಗಳಿಗೆ ಹಾಗೂ ಹಕ್ಕಿ-ಪಿಕ್ಕಿ ಕಾಲೋನಿಯ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲಾಗಿತ್ತು.

    ಪ್ರಸ್ತುತ ನಾಲ್ಕನೇ ಹಂತವಾಗಿ ಖಾಸಗಿ ಒಡೆತನದ ಜಮೀನುಗಳಲ್ಲಿ ನಿರ್ಮಿತ ಕೊಳಗೇರಿಗಳಲ್ಲಿ ವಾಸಿಸುತ್ತಿರುವ 2,617 ಕುಟುಂಬಗಳಿಗೆ ಕರ್ನಾಟಕ ಭೂ ಸುಧಾರಣಾ ಕಾಯ್ದೆ-1971ರ ಕಲಂ 38(A) ಅನ್ವಯ ಖಾಸಗಿ ಕೊಳಗೇರಿ ಪ್ರದೇಶಗಳಲ್ಲಿ ಸರ್ವೆ ಕಾರ್ಯ ಕೈಗೊಂಡು ಸೂಕ್ತ ಕ್ರಮವಹಿಸಲಾಗುತ್ತಿದೆ. ಅಲ್ಲದೆ, ಸರ್ಕಾರಿ ಜಾಗಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ 349 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

    ತುಮಕೂರು ನಗರದ ಎಳ್ಳಾರ ಬಂಡೆ, ಅರಳೀಮರದ ಪಾಳ್ಯ, ಎಸ್.ಎನ್. ಪಾಳ್ಯ, ಭಾರತಿ ನಗರ, ಬಿದರುಮೇಳೆ ತೋಟ, ಎನ್.ಆರ್. ಕಾಲೋನಿ ಹಾಗೂ ಎಸ್.ಎಲ್.ಎನ್. ನಗರ ಬಡಾವಣೆಗಳಲ್ಲಿ ಸರ್ಕಾರಿ ಜಮೀನಿನಲ್ಲಿ ಮನೆಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿರುವ 349 ಕುಟುಂಬಗಳನ್ನು ಹಕ್ಕುಪತ್ರ ವಿತರಣೆಯ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ.

    ಖಾಸಗಿ ಜಮೀನುಗಳಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿರುವ ಕುಟುಂಬಗಳ ಸಮಸ್ಯೆಗೂ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸಂಬಂಧಪಟ್ಟ ಜಮೀನನ್ನು ಸರ್ಕಾರಕ್ಕೆ ಸ್ವಾಧೀನಪಡಿಸಿಕೊಳ್ಳುವ ಅಥವಾ ಸರ್ಕಾರದ ವಶಕ್ಕೆ ಪಡೆಯುವ ಪ್ರಕ್ರಿಯೆಯನ್ನು ನಿಯಮಾನುಸಾರ ಪೂರ್ಣಗೊಳಿಸಿ, ಅರ್ಹ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಯೋಜನೆ ರೂಪಿಸಲಾಗಿದೆ. ಈ ಮೂಲಕ 30ರಿಂದ 40 ವರ್ಷಗಳಿಂದ ಸ್ವಂತ ಜಮೀನಿನ ಹಕ್ಕಿಗಾಗಿ ಕಾಯುತ್ತಿರುವ ಕುಟುಂಬಗಳಿಗೆ ಕಾನೂನುಬದ್ಧ ಮಾಲೀಕತ್ವ ಮತ್ತು ಭದ್ರತೆ ಒದಗಿಸುವ ಗುರಿ ಹೊಂದಲಾಗಿದೆ.

    ಸರ್ವೆ ಕಾರ್ಯ ಪೂರ್ಣಗೊಂಡ ನಂತರ ನಿಯಮಾನುಸಾರ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.3000 ಕೊಳಗೇರಿ ಕುಟುಂಬಗಳ 14000 ಜನರಿಗೆ ಇದರಿಂದ ಅನುಕೂಲವಾಗುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಪ್ರಜಾಸೇವಾ ಆಂದೋಲನದಲ್ಲಿ ಸಮಸ್ಯೆಗೆ ಪ್ರಾಮಾಣಿಕ ಸ್ಪಂದನೆ ಇಲ್ಲದಿದ್ದರೆ ಕ್ರಮ: ಅಧಿಕಾರಿಗಳಿಗೆ ಟಿ.ಬಿ.ಜಯಚಂದ್ರ ಎಚ್ಚರಿಕೆ

    September 6, 2026

    ಅನುಭವ, ಅಧ್ಯಯನದಿಂದ ಗುಣಮಟ್ಟದ ಸಾಹಿತ್ಯ ಸಾಧ್ಯತೆ: ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸಲಹೆ

    September 3, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಚಿಕ್ಕನಾಯಕನಹಳ್ಳಿ: ರೈತರು ಸಹಕಾರ ನೀಡಿದರೆ ಸಾದ್ಯವಾದಷ್ಟು ಬೇಗ ಕಾಮಗಾರಿಯನ್ನು ಮುಗಿಸಲಾಗುವುದು ಭೂಸ್ವಾಧೀನ ಪಡಿಸಿಕೊಂಡಿರುವ ರೈತರು ಅಗತ್ಯ ದಾಖಲೆಗಳನ್ನು ನೀಡಿ ನಿಮ್ಮ…

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026

    ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ

    September 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.