nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026
    Facebook Twitter Instagram
    ಟ್ರೆಂಡಿಂಗ್
    • ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು
    • ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ
    • ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ
    • ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ
    • ಇ–ಕೆವೈಸಿ:  ಸರ್ವರ್ ಸಮಸ್ಯೆ ಬಗೆಹರಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಂದ ತಹಶೀಲ್ದಾರ್ ಅವರಿಗೆ ಮನವಿ
    • ಕೊಳಗೇರಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಐತಿಹಾಸಿಕ ಹೆಜ್ಜೆ
    • ಆಧ್ಯಾತ್ಮಿಕ ಸಾಧನೆಯಿಂದ ಬದುಕಿಗೆ ಆನಂದ: ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ
    • ಪಡಿತರ ಚೀಟಿ: 5 ವರ್ಷಗಳಿಗೊಮ್ಮೆ ಇ–ಕೆವೈಸಿ ಕಡ್ಡಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇ–ಕೆವೈಸಿ:  ಸರ್ವರ್ ಸಮಸ್ಯೆ ಬಗೆಹರಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಂದ ತಹಶೀಲ್ದಾರ್ ಅವರಿಗೆ ಮನವಿ
    Uncategorized September 9, 2026

    ಇ–ಕೆವೈಸಿ:  ಸರ್ವರ್ ಸಮಸ್ಯೆ ಬಗೆಹರಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಂದ ತಹಶೀಲ್ದಾರ್ ಅವರಿಗೆ ಮನವಿ

    By Ganesh TumkuruSeptember 9, 2026No Comments2 Mins Read
    server problem

    ಕೊರಟಗೆರೆ : ರಾಜ್ಯ ಸರ್ಕಾರದ ಆದೇಶದಂತೆ ಪಡಿತರ ಪಡೆಯಲು ಇ–ಕೆವೈಸಿ ಕಡ್ಡಾಯವಾಗಿದ್ದು, ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಇ–ಕೆವೈಸಿ ಮಾಡಲು ಸಮಸ್ಯೆ ಆಗುತ್ತಿದ್ದು ಅದನ್ನ ಸರಿಪಡಿಸಿ ಎಂದು ನ್ಯಾಯಬೆಲೆ ಅಂಗಡಿ ಮಾಲೀಕರಿಂದ ಗ್ರೇಟ್–2 ತಹಶೀಲ್ದಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ಕೊರಟಗೆರೆ ತಾಲೂಕಿನಲ್ಲಿ ಒಟ್ಟು 82 ನ್ಯಾಯಬೆಲೆ ಅಂಗಡಿಗಳಿದ್ದು, ಪ್ರತಿ ದಿನ ನೂರಾರು ಪಡಿತರದಾರರು ಪಡಿತರ ಪಡೆಯಲು ಆಗಮಿಸುತ್ತಾರೆ. ಆದರೆ ಪಡಿತರ ವಿತರಣೆಗೆ ಮುನ್ನ ರಾಜ್ಯ ಸರ್ಕಾರದ ಆದೇಶದಂತೆ ಈ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಸರ್ವರ್ ಸಮಸ್ಯೆಯಿಂದಾಗಿ ಅಂಗಡಿಗಳ ಮುಂದೆ ಜನರು ಕೆಲಸ ಕಾರ್ಯ ಬಿಟ್ಟು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಪಡಿತರ ಅಂಗಡಿಯ ಮಾಲೀಕ ರಮೇಶ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ರೈತರು ಕೂಲಿ ಕಾರ್ಮಿಕರು ತಮ್ಮ ಕೆಲಗಳನ್ನ ಬಿಟ್ಟು ಇ–ಕೆವೈಸಿ ಮಾಡಿಸಲು ಆಗಮಿಸುತ್ತಾರೆ. ಆದರೆ ಸರ್ವರ್ ಸಮಸ್ಯೆಯಿಂದಾಗಿ ತುಂಬಾ ನಿಧಾನವಾಗಿ ಕೆಲಸ ಮಾಡುತ್ತಿದೆ. ಒಂದು ಕಾರ್ಡ್ನಲ್ಲಿರುವ ನಾಲ್ಕು ಜನ ಸದಸ್ಯರ ಇ–ಕೆವೈಸಿ ಮಾಡಲು ಕೆಲವೊಮ್ಮೆ ಒಂದು ಗಂಟೆಗೂ ಹೆಚ್ಚು ಸಮಯ ಬೇಕಾಗುತ್ತದೆ. ಇದರಿಂದ ಪಡಿತರದಾರರು ಗಂಟೆಗಟ್ಟಲೆ ಕಾಯಬೇಕಾಗಿದ್ದು, ನಮ್ಮ ಮೇಲೆಯೂ ಒತ್ತಡ ಹಾಕುತ್ತಾರೆ. ಸರ್ಕಾರ ಕೂಡಲೇ ಸರ್ವರ್ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯ ಮಾಡಿದರು.

    ಪಡಿತರ ಅಂಗಡಿಯ ಮಾಲೀಕ ಆನಂದ್ ಮಾತನಾಡಿ ಕಳೆದ ಬಾರಿ ಪಡಿತರದಾರರಿಗೆ ಇ–ಕೆವೈಸಿ ಮಾಡಿಕೊಡುವ ಕೆಲಸವನ್ನು ನಾವು ಮಾಡಿದ್ದೇವೆ. ಆದರೆ ಅದಕ್ಕೆ ಸರ್ಕಾರದಿಂದ ಬರಬೇಕಾದ ಹಣ ಇನ್ನೂ ಬಿಡುಗಡೆಯಾಗಿಲ್ಲ. ಕೊರಟಗೆರೆ ತಾಲೂಕಿನ 82 ನ್ಯಾಯಬೆಲೆ ಅಂಗಡಿ ಮಾಲೀಕರಿಗೂ ಬಾಕಿ ಇರುವ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು. ನಾವು ಮಾಡಿರುವ ಕೆಲಸಕ್ಕೆ ಸರಿಯಾದ ಸಮಯಕ್ಕೆ ಹಣ ನೀಡಬೇಕು. ಈ ತಿಂಗಳ ಒಳಗೆ ಇ–ಕೆವೈಸಿ ಮುಗಿಸಬೇಕು ಎಂದು ಸರ್ಕಾರ ಆದೇಶ ಮಾಡಲಾಗಿದೆ. 20ರ ನಂತರ ಪಡಿತರ ವಿತರಣೆ ಮಾಡಬೇಕು. ಇ–ಕೆವೈಸಿ ಸಮಸ್ಯೆ ಹೀಗೆ ಮುಂದುವರೆದರೆ ಇ–ಕೆವೈಸಿ ಮಾಡಲು ಸಮಸ್ಯೆ ಆಗುತ್ತದೆ ಸರ್ಕಾರ ಈ ಸಮಸ್ಯೆಯನ್ನ ಸರಿಪಡಿಸಿ ಎಂದು ಒತ್ತಾಯಿಸಿದರು.

    ಮಾಲೀಕ ನಾಗೇಂದ್ರ ಮಾತನಾಡಿ, ಪಡಿತರ ಸಾಮಾಗ್ರಿಗಳು ಪ್ರತಿ ತಿಂಗಳ ಆರಂಭದಲ್ಲೇ ನ್ಯಾಯಬೆಲೆ ಅಂಗಡಿಗಳಿಗೆ ತಲುಪಬೇಕು. ಆದರೆ ಹಲವು ಬಾರಿ ತಿಂಗಳ ಕೊನೆಯಲ್ಲಿ ಪಡಿತರ ಬರುತ್ತಿರುವುದರಿಂದ ಪಡಿತರ ವಿತರಣೆ ಮಾಡಲು ತೊಂದರೆಯಾಗುತ್ತಿದೆ. ಒಂದು ಕಡೆ ಇ–ಕೆವೈಸಿ ಸರ್ವರ್ ಸಮಸ್ಯೆ, ಮತ್ತೊಂದು ಕಡೆ ಪಡಿತರ ಸಾಮಗ್ರಿಗಳ ವಿಳಂಬ. ನಮ್ಮ ಎಲ್ಲ ಸಮಸ್ಯೆಗಳಿಗೆ ಸರ್ಕಾರ ಶಾಶ್ವತ ಪರಿಹಾರ ನೀಡಬೇಕು ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ನ್ಯಾಯಬೆಲೆ ಅಂಗಡಿಯ ಮಾಲೀಕರ ಸಂಘದ ಕಾರ್ಯದರ್ಶಿ ನಾಗೇಶ್‌ ಕುಮಾರ್, ಖಜಾಂಚಿ ಮಲ್ಲಿಕಾರ್ಜುನ, ಜಯಣ್ಣ, ರಮೇಶ್, ನರಸೀಯಪ್ಪ, ಕೆ.ಎಲ್.ಆನಂದ್, ಸ್ವಾಮಿ, ರಂಗಶಾಮಯ್ಯ, ಹರೀಶ್, ನರಸಿಂಹಮೂರ್ತಿ, ಮಂಜುನಾಥ್, ಸಿದ್ದಲಿಂಗಯ್ಯ, ಹನುಮಂತರೆಡ್ಡಿ, ರಂಗರಾಜು, ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    102 ತಾಲ್ಲೂಕುಗಳು ಬರಪೀಡಿತ ಘೋಷಣೆ; ಇತರೆ ತಾಲ್ಲೂಕುಗಳ ಪರಿಶೀಲನೆ: ಸಿಎಂ ಡಿ.ಕೆ.ಶಿವಕುಮಾರ್

    September 1, 2026

    ಆಯಾ ಕಾಲಕ್ಕೆ ಏನೇನು ಆಗಬೇಕೋ ಅದು ಆಗುತ್ತದೆ: ರಾಜ್ಯಾಧ್ಯಕ್ಷ ಆಯ್ಕೆ ವಿಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿಕೆ

    August 29, 2026

    ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ

    August 26, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಚಿಕ್ಕನಾಯಕನಹಳ್ಳಿ: ರೈತರು ಸಹಕಾರ ನೀಡಿದರೆ ಸಾದ್ಯವಾದಷ್ಟು ಬೇಗ ಕಾಮಗಾರಿಯನ್ನು ಮುಗಿಸಲಾಗುವುದು ಭೂಸ್ವಾಧೀನ ಪಡಿಸಿಕೊಂಡಿರುವ ರೈತರು ಅಗತ್ಯ ದಾಖಲೆಗಳನ್ನು ನೀಡಿ ನಿಮ್ಮ…

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026

    ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ

    September 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.