ಬೆಂಗಳೂರು: ರಾಷ್ಟ್ರೀಯ ಅಹಿಂದ ಸಂಘಟನೆಯ ವತಿಯಿಂದ ಕರ್ನಾಟಕ ರಾಜ್ಯ ಅಹಿಂದ ಬಂಧುಗಳ ಪದಗ್ರಹಣ ಕಾರ್ಯಕ್ರಮವನ್ನು ದಿನಾಂಕ 12.09.2026ರ ಶನಿವಾರ ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರಿನ ಕುಮಾರ ಕೃಪ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಬಂಧುಗಳು, ಹಿಂದುಳಿದ ವರ್ಗಗಳ ಬಂಧುಗಳು, ದಲಿತ ಸಮೂಹ ಹಾಗೂ ಎಸ್.ಸಿ, ಎಸ್.ಟಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಂಧುಗಳು, ಹಾಗೆಯೇ ರಾಜ್ಯ ಸಮಿತಿ, ಜಿಲ್ಲಾ ಸಮಿತಿ ಹಾಗೂ ತಾಲೂಕು ಸಮಿತಿಯ ಎಲ್ಲಾ ಘಟಕಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ರಾಜ್ಯದ ಎಲ್ಲಾ ಅಹಿಂದ ಬಂಧುಗಳು ಸಕಾಲದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಈ ಮಹತ್ವದ ಸಮಾರಂಭವನ್ನು ಯಶಸ್ವಿಗೊಳಿಸಬೇಕಾಗಿ ರಾಷ್ಟ್ರೀಯ ಅಹಿಂದ ಸಂಘಟನೆಯ ಹಾಸನ ಜಿಲ್ಲಾ ಸಂಚಾಲಕರು ಹಾಗೂ ಸಂಗೊಳ್ಳಿ ರಾಯಣ್ಣ ಕುರಿ ಮತ್ತು ಉಣ್ಣೆ ಉತ್ಪಾದಕರ ಸಂಘದ ಸದಸ್ಯರಾದ ಮಂಜು ಶ್ರವಣೂರು (ಮಂಜು ನಾಯಕ್.ಎಸ್.ಸಿ) ಹಾಗೂ ರಾಜ್ಯ ಉಪಾಧ್ಯಕ್ಷರಾದ ದೊಡ್ಡಳ್ಳಿ ಲೋಕೇಶ್ ರವರು ಪತ್ರಿಕಾ ಪ್ರಕಟಣೆ ಮೂಲಕ ಸಮಸ್ತ ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
