ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್ ಆರ್ ಟಿಸಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, 14 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಹೊಳೆನರಸೀಪುರಕ್ಕೆ ತೆರಳುತ್ತಿದ್ದ ಹೊಳೆನರಸೀಪುರ ಘಟಕದ ಕೆಎಸ್ ಆರ್ ಟಿಸಿ ಬಸ್‌ನಲ್ಲಿ (ಕೆಎ-13 ಎಫ್-2340) ಒಟ್ಟು 24 ಮಂದಿ ಪ್ರಯಾಣಿಕರಿದ್ದರು. ವರಾಹಸಂದ್ರ ಬಳಿ ಮಾರ್ಗಮಧ್ಯೆ ಚಲಿಸುತ್ತಿದ್ದ ಟ್ರ್ಯಾಕ್ಟರ್ ಗೆ ಬಸ್ ಡಿಕ್ಕಿಯಾದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕ ಯಾವುದೇ ಅನಾಹುತವಿಲ್ಲದೆ ಪಾರಾಗಿದ್ದಾನೆ.
ಅಪಘಾತದಲ್ಲಿ ಗಾಯಗೊಂಡ 14 ಪ್ರಯಾಣಿಕರನ್ನು ತಕ್ಷಣವೇ ಬಿ.ಜಿ. ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಯ ವೈದ್ಯರು ಸೂಕ್ತ ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಿದ್ದು, ಸದ್ಯ ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬೆಳ್ಳೂರು ಆರಕ್ಷಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ವರದಿ: ಮಂಜುಶ್ರವಣೂರು, ಹೊಳೆನರಸೀಪುರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
