ತುಮಕೂರು: ಸರ್ಕಾರಿ ಪ್ರೌಢಶಾಲೆ ಹುಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯ ಹೊಳಕಲ್ಲು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚಿಗೆ ಹುಲ್ಲೇನಹಳ್ಳಿ ಶ್ರೀ ಆಂಜನೇಯ ಸ್ವಾಮಿ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಪೋಕ್ಸೊ ಕಾಯ್ದೆ ಮತ್ತು ವಿಶ್ವ ಪೌಷ್ಟಿಕಾಂಶ ದಿನದ ಬಗ್ಗೆ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಜರುಗಿತು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲೋಕೇಶ್ ಧನಪಾಲ್ ಹವಳೇರವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರಿಗೆ ಪೋಕ್ಸೊ ಕಾಯ್ದೆಯ ಕಾನೂನಿನ ಬಗ್ಗೆ ಮಾಹಿತಿ ಹೊಂದುವುದು ಅವಶ್ಯ. ಜಿಲ್ಲಾ ಕಾನೂನು ಮತ್ತು ನ್ಯಾಯಾಂಗ ಸೇವೆಗಳ ಪ್ರಾಧಿಕಾರವು ಸಾರ್ವಜನಿಕ ಸಾರ್ವಜನಿಕರ ಕಾನೂನಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಸಂಪನ್ಮೂಲ ವ್ಯಕ್ತಿಯಾದ ಕಾನೂನು ಸೇವಾ ಪ್ರಾಧಿಕಾರದ ಪ್ಯಾನಲ್ ವಕೀಲರಾದ ಆಶಾ ಕೆ. ಎಸ್, ಅವರು ಯಾವುದೇ ಮಗು ಗಂಡಾಗಲಿ ಹೆಣ್ಣಾಗಲಿ ತಮಗೆ ತೊಂದರೆಯಾದಾಗ ಕೂಡಲೇ ತಮ್ಮ ಆಪ್ತರಿಗೆ, ತಂದೆ ತಾಯಿ, ಪೋಷಕರಿಗೆ ಅಥವಾ ಶಿಕ್ಷಕರಿಗೆ ಮಾಹಿತಿಯನ್ನು ನೀಡಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲು ಸಹಕರಿಸುವಂತೆ ತಿಳಿಸಿದರು. ಪೋಕ್ಸೊ ಕಾಯ್ದೆ ಅನ್ವಯ ಶಿಕ್ಷೆಗೆ ಒಳಪಟ್ಟ ಅನೇಕ ಪ್ರಕರಣಗಳ ವಿವರಗಳನ್ನು ಉದಾಹರಣೆ ಸಹಿತ ತಿಳಿಸಿದರು. ಮಕ್ಕಳ ಸಹಾಯವಾಣಿ 1098 – ಈ ಸಂಖ್ಯೆಗೆ ತೊಂದರೆಯಲ್ಲಿರುವ ವಿದ್ಯಾರ್ಥಿಗಳು ಕರೆ ಮಾಡಿ ತಮ್ಮ ದೂರುಗಳನ್ನು ದಾಖಲಿಸಬಹುದು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷರಾದ ಚನ್ನಪ್ಪ ವಹಿಸಿದ್ದರು. ಪ್ರಾಧಿಕಾರದ ಸ್ವಯಂಸೇವಕದ ವ ಮಂಜುನಾಥ್, ಡಾ. ಹೆಚ್.ಬಿ.ಎಂ ಹೀರೇಮಠ ಹಾಗು ಬಸವರಾಜು ಎಸ್ ಇನಾಪುರ ಅವರು ಉಪಯುಕ್ತ ಮಾಹಿತಿಗಳನ್ನು ತಿಳಿಸಿಕೊಟ್ಟರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್ ಡಿ ಎಂ ಸಿ ಅಧ್ಯಕ್ಷ ಚನ್ನಪ್ಪ ಶಾಲಾ ಹಂತದಲ್ಲಿ ಇಂತಹ ಕಾನೂನು ಅರಿವು ಕಾರ್ಯಕ್ರಮ ಹೆಚ್ಚು ನಡೆಯಬೇಕೆಂದು ಆಶಿಸಿದರು. ಆರಂಭದಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾರತೀಯ ಸಂವಿಧಾನದ ಪ್ರಸ್ತಾವನೆಯನ್ನು ವಾಚಿಸಿದರು. ಶಾಲಾ ಮುಖ್ಯ ಶಿಕ್ಷಕ ರವೀಶ್ ಎಂ.ಎಸ್ ಸ್ವಾಗತಿಸಿದರು. ಶಿಕ್ಷಕ ಸುರೇಶ್ ವಂದಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
